ಲತಾ ಮಂಗೇಶ್ಕರ್ ನಿಧನಕ್ಕೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ

Monday, February 7th, 2022
latha Mangeshkar

ನವದೆಹಲಿ : ಖ್ಯಾತ ಗಾಯಕಿ, ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ್ ನಿಧನಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಕಾಲ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ. ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. […]