ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರಾರಂಭ – ಕೋಟ ಶ್ರೀನಿವಾಸ ಪೂಜಾರಿ
Tuesday, October 6th, 2020ಮಂಗಳೂರು : ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರದರ್ಶನಗೊಳ್ಳಲಿದೆ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಯಕ್ಷಗಾನ ಮೇಳಗಳ ಸಂಚಾಲಕರ ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು, ಕೋವಿಡ್–19 ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು […]