ಪುತ್ತೂರು ಪತ್ರಕರ್ತನ ಪತ್ನಿ ಮನೆಗೆ ಬರುವುದಾಗಿ ರೌಡಿಶೀಟರ್ ಬೆದರಿಕೆ, ಪೊಲೀಸರಿಗೆ ದೂರು

Sunday, January 28th, 2024
Naveen-Rai

ಪುತ್ತೂರು : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ ಅವರಿಗೆ ರೌಡಿಶೀಟರ್ ಆಗಿರುವ ನವೀನ್ ರೈ ಪನಡ್ಕ ಕೈಕಾರ ಎಂಬಾತ ರಾತ್ರಿ ವೇಳೆ ಸಂದೇಶ ಹಾಗೂ ಕರೆಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ . ಅಲ್ಲದೆ ಪತ್ನಿ ಮನೆಗೆ ಬರುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ. ನವೀನ್‌ ರೈ ಪನಡ್ಕ ವರದಿಯೊಂದರ ವಿಚಾರಕ್ಕೆ ಸಂಬಂದಿಸಿದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದ. ನವೀನ್‌ ರೈ ಪನಡ್ಕ ವಿರುದ್ದ 2022ರಲ್ಲಿ ಪುತ್ತೂರು […]

ಬಜರಂಗದಳ ಕಾರ್ಯಕರ್ತರ ಗಡಿಪಾರು, ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ

Monday, November 20th, 2023
puttur-protest

ಪುತ್ತೂರು : ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿರುವುದನ್ನುವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆಯನ್ನು ಸೋಮವಾರ ಮಿನಿ ವಿಧಾನಸೌಧದ ಎದುರಿನ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ಬಹುಸಂಖ್ಯಾತ ಹಿಂದೂಗಳು ಇರುವ ಭಾರತದಲ್ಲಿ ಸ್ವಾಭಿಮಾನದ ಬದುಕಿಗಾಗಿ ನಿರಂತರ ಜಾಗೃತಿ, ಸಂಘಟಿತ ಕೆಲಸಗಳನ್ನು ಮಾಡುತ್ತಿರುವುದು ನಮ್ಮ ಸಂಘಟನೆ. ದೇಶದ ಪರವಾಗಿ ಕೆಲಸ […]

ಅಕ್ರಮ ವಿದೇಶ ಪ್ರಜೆಗಳ ಪತ್ತೆ- ಗಡಿಪಾರಿಗೆ ನಿರ್ಧಾರ

Friday, July 16th, 2021
Basavaraja Bommai

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶದೊಂದಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಈ ಸಮಿತಿ ಕಾರ್ಯೋನ್ಮುಖವಾಗಲಿದೆ. ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು ಎಂಬು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮವಹಿಸಲಾಗುವುದು. ಈ ಪತ್ತೆ ಕಾರ್ಯಕ್ಕೆ ವಿದೇಶಿ ನೋಂದಣಾಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ […]

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು

Wednesday, December 11th, 2019
vhp-putturu

ಪುತ್ತೂರು: ಕೆಯ್ಯೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿಎಚ್‍ಪಿ ಮತ್ತು ಬಜರಂಗದಳ ವತಿಯಿಂದ ಪುತ್ತೂರು ವಿಧಾನಸೌಧ ಮುಂಭಾಗದ ಮಂಗಳವಾರ  ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಮಾತನಾಡಿ, ಕೆಯ್ಯೂರು ಗ್ರಾಮದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು. ಕಾನೂನು ಹಿಡಿತದಿಂದ ತಪ್ಪಿಸಿಕೊಳ್ಳುವ ಇಂತಹ ವ್ಯಕ್ತಿಗಳಿಗೆ ಗಡಿಪಾರಿನಂತಹ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ […]

ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ :ಸುಪ್ರೀಂ ಕೋರ್ಟ್

Friday, October 13th, 2017
rohingya muslims

ನವದೆಹಲಿ: ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಾಲವಕಾಶ ನೀಡಿರುವ ಸುಪ್ರೀಂ ಕೋರ್ಟ್, ನವೆಂಬರ್ 21ರ ಮುಂದಿನ ವಿಚಾರಣೆವರೆಗೂ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡದಂತೆ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಷಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ಮಾನವೀಯ ಮೌಲ್ಯಗಳು ನಮ್ಮ ಸಂವಿಧಾನದ ಆಧಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಮುಗ್ಧ ಮಕ್ಕಳು ಮತ್ತು ಮಹಿಳೆಯರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ […]