ವಿದ್ಯಾರ್ಥಿಗಳ ಶೈಕ್ಷಣಿಕ ಸಂಶೋಧನೆಗೆ ಪ್ರೋತ್ಸಾಹ ನೀಡಿ : ಮಂಗಳೂರು ವಿ.ವಿ ಕುಲಪತಿ ಪ್ರೊ.ಯಡಪಡಿತ್ತಾಯ ಸಲಹೆ
Thursday, February 13th, 2020ಮಡಿಕೇರಿ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯದ ಬಗ್ಗೆ ಸಂಶೋದನೆ ಮಾಡಲು ಪ್ರೋತ್ಸಾಹಿಸುವುದು ಆದ್ಯ ಕರ್ತವ್ಯ ಎಂದು ಮಂಗಳೂರು ವಿ.ವಿಯ ಕುಲಪತಿಗಳಾದ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಸಾಯನ ಶಾಸ್ತ್ರ ವಿಭಾಗದ ವತಿಯಿಂದ “ನ್ಯಾಶನಲ್ ನೋವೆಲ್ ಅಪ್ರೋಚಸ್ ಇನ್ ಕೆಮಿಕಲ್ ಸೈನ್ಸ್” ಎಂಬ ಶೀರ್ಷಿಕೆಯಡಿಯಲ್ಲಿ ಬುಧವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜ್ಞಾನ ಜ್ಞಾನವನ್ನು ನೀಡುತ್ತದೆ. ಸೃಜನಶೀಲತೆ ಕಲ್ಪನೆಯಿಲ್ಲದೆ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು […]