ಚಾರ್ಮಾಡಿ ಮತ್ತು ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್

Saturday, October 5th, 2019
sindhu

ಬೆಳ್ತಂಗಡಿ : ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ವರದಿ ಸಲ್ಲಿಸಿ, ಮೊದಲ ಹಂತದ ಪರಿಹಾರ ಬಿಡುಗಡೆಯಾಗಿದೆ. ಬರುವ ಅನುದಾನಗಳಿಗೆ ಅನುಸಾರವಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದಿಂದಾಗಿ ಹಾನಿಗೀಡಾದ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಧ್ಯಮದವರೊಂದಿಗೆ ಮಾತನಾಡಿದರು. ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಮೊದಲ ಹಂತದ ಅನುದಾನ ಬಿಡುಗಡೆ ಮಾಡಲಾಗಿದೆ. ಕೃಷಿ ನಾಶದ ಬಗೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. […]

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ ಬೆಳ್ತಂಗಡಿ ತಹಶೀಲ್ದಾರ್

Friday, August 23rd, 2019
Tahshidar

 ಬೆಳ್ತಂಗಡಿ : ಪ್ರವಾಹಪೀಡಿತ ಪ್ರದೇಶಕ್ಕೆ ತಲೆ ಮೇಲೆ ಸಾಮಗ್ರಿ ಹೊತ್ತು ಸಾಗಿಸಿದ ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಪ್ರವಾಹಪೀಡಿತ ಪ್ರದೇಶದಲ್ಲಿ ಅನಾರೋಗ್ಯದಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿಹೋಗಿರುವ ಬಾಂಜಾರು ಮಲೆಯ ಮಲೆಕುಡಿಯರ ಕಾಲನಿಯಲ್ಲಿ ಐತಪ್ಪ ಎಂಬುವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ ಐತಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನ ವ್ಯವಸ್ಥೆ ಇಲ್ಲದೆ ಐತಪ್ಪ […]