ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಗೆ ಸೋಲು..!

Wednesday, June 13th, 2018
ganesh-karnik

ಮಂಗಳೂರು: ನೈಋತ್ಯ ಶಿಕ್ಷಕ ಕ್ಷೇತ್ರದಿಂದ ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಸೋಲನ್ನನುಭವಿಸಿದ್ದಾರೆ. ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಜೆ ಡಿಎಸ್ ಪಕ್ಷದ ಅಭ್ಯರ್ಥಿ ಭೋಜೆ ಗೌಡ ಅವರು ಜಯಗಳಿಸಿದ್ದು ಕ್ಯಾ. ಗಣೇಶ್ ಕಾರ್ಣಿಕ್ ಅವರು ಸೋಲನ್ನನುಭವಿಸಿದ್ದಾರೆ. ನೈಋತ್ಯ ಶಿಕಷಕ ಕ್ಷೇತ್ರ ಚುನಾವಣೆಗೆ ಈ ಬಾರಿ 12 ಮಂದಿ ಸ್ಪರ್ಧಿಸಿದ್ದು ತಮ್ಮನ್ನು ಹೊರತುಪಡಿಸಿ , ಸ್ಪರ್ಧಿಸಿದ ಎಲ್ಲ 11 ಅಭ್ಯರ್ಥಿಗಳ ನಿರ್ಗಮನದ ನಂತರವೂ ಜೆ ಡಿಎಸ್ ನ ಭೋಜೆಗೌಡ ಅವರು ಗೆಲುವಿಗೆ ನಿಗದಿಯಾಗಿದ್ದ […]

ಸಿದ್ದರಾಮಯ್ಯರಿಂದ ಕೊಲೆಗಡುಗರ ರಕ್ಷಣೆ: ಅಮಿತ್ ಶಾ ಆರೋಪ

Wednesday, May 9th, 2018
amit-shah

ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾತಾಳದಲ್ಲಿದ್ದರೂ ಕೊಲೆಗಡುಕರನ್ನು ಹುಡುಕಿ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ನವಭಾರತ್ ವೃತ್ತದಿಂದ ಡೊಂಗರಕೇರಿ ಮೂಲಕ ಕಾರ್‌ಸ್ಟ್ರೀಟ್ ತನಕ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಸರಕಾರ ಅಭಿವೃದ್ಧಿ ವಿರೋಧಿ ಮತ್ತು ಗೂಂಡಾಗಿರಿಯ ಸರಕಾರ. ಕಾರ್ಯಕರ್ತರನ್ನು ಹತ್ಯೆ […]

ಹಿಂದೂ ವಿಚಾರ ಧಾರೆ, ಸಂಘಟನೆ ಶಕ್ತಿ ಮೇಲೆ ಈ ಬಾರಿ ಗೆಲುವು: ನಳಿನ್

Thursday, April 19th, 2018
nalin-kumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ನಡುವೆ ಬಿಜೆಪಿ ತಮ್ಮ ಜಿಲ್ಲಾ ಚುನಾವಣಾ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸಿದೆ. ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಮಂಗಳೂರಿನಲ್ಲಿ ಇಂದು ನಡೆಯಿತು. ಬಿಜೆಪಿಯ ಹಿರಿಯ ಮುಖಂಡ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಚುನಾವಣಾ ಕಾರ್ಯಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ […]

ಸರಕಾರಿ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಶಾಲಾ ಶಿಕ್ಷಕರ ಒತ್ತಾಯ

Friday, March 16th, 2018
j-r-lobo

ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕಡ್ಡಾಯ ವರ್ಗಾವಣೆಯ ನೆಪದಲ್ಲಿ ನಗರ ಪ್ರದೇಶದ ಸರಕಾರಿ ಶಾಲಾ ಶಿಕ್ಷಕರನ್ನು ಗ್ರಾಮಾಂತರ ಪ್ರದೇಶಗಳಿಗೆ ಕಳುಹಿಸುವ ಕ್ರಮವು ತೀರಾ ಅವೈಜ್ಞಾನಿಕವಾಗಿದ್ದು, ಈಗಾಗಲೇ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಸರಕಾರಿ ಶಾಲಾ ಶಿಕ್ಷಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಎಸ್‌ಎಫ್‌ಐ, ಡಿವೈಎಫ್‌ಐ ಮಾರ್ಗದರ್ಶನದಲ್ಲಿ ಸರಕಾರಿ ಶಾಲಾ ಶಿಕ್ಷಕರು ಇಂದು (15-03-18) ದ.ಕ. ಜಿಲ್ಲಾಧಿಕಾರಿಗಳು, ಸಚಿವರಾದ ಯು.ಟಿ. ಖಾದರ್, ಶಾಸಕರಾದ ಜೆ.ಆರ್. ಲೋಬೊ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಐವನ್ ಡಿ’ಸೋಜರವರನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿದರು. ಶಿಕ್ಷಣ ಇಲಾಖೆಯು ಒಂದು ಜಿಲ್ಲೆಯನ್ನು […]

ದೇವಾಲಯ ವಶಕ್ಕೆ ಪಡೆಯುವ ನೋಟಿಸ್ ಕೊಟ್ಟು ನೋಡಿ :ಅನಂತಕುಮಾರ್ ಹೆಗಡೆ

Thursday, March 8th, 2018
ananth-kumar-hegde

ಮಂಗಳೂರು: ಸುಳ್ಳಿನ ಸಿದ್ದಣ್ಣ ಬೇಕೋ, ಗಂಡು ಯಡಿಯೂರಪ್ಪ ಬೇಕೋ ಎಂಬುದನ್ನು ನಿರ್ಧಾರ ಮಾಡುವ ಕಾಲ ಬಂದಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದರು. ನಗರದಲ್ಲಿ ಮಂಗಳವಾರ ಬಿಜೆಪಿ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರಲಿದ್ದಾರೆ. ಸಿದ್ದರಾಮಯ್ಯ ಮೇಲಕ್ಕೆ ಹೋಗುತ್ತಾರೆ ಎಂದು ಲೇವಡಿ ಮಾಡಿದರು. ‘ಕಾಂಗ್ರೆಸ್ ಒಂದು ಪಕ್ಷವಲ್ಲ. ಅದೊಂದು ಸಂಸ್ಕೃತಿ. ದೇಶ ವಿಭಜಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್. ಮಠ- ಮಂದಿರಗಳನ್ನು ವಶಕ್ಕೆ ಪಡೆಯಲು […]

ಹೆಚ್ಚುವರಿ ಶಿಕ್ಷಕರ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಿಂದ ಸರಿಪಡಿಸಬೇಕು: ಗಣೇಶ್‌ ಕಾರ್ಣಿಕ್‌

Thursday, July 28th, 2016
Capt-Ganesh-Karnink

ಮಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ. ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿಸಿದ್ದು, ಇದರಿಂದ ಶಿಕ್ಷಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ನಿರ್ಣಯಿಸಿದಂತೆ ಮಲೆನಾಡಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳನ್ನು ಗುರುತಿಸುವಾಗ […]

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷನಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಣೆ : ಗಣೇಶ್ ಕಾರ್ಣಿಕ್

Thursday, December 27th, 2012
Capt Ganesh Karnik

ಮಂಗಳೂರು : ವಿದೇಶದಲ್ಲಿರುವ ರಾಜ್ಯದ ಜನರ ಹಿತದೃಷ್ಟಿಯನ್ನು ಕಾಪಾಡುವ ಸಲುವಾಗಿ ಬಿಜೆಪಿ ಸರಕಾರದ ಅವಧಿಯಲ್ಲಿ ಅನಿವಾಸಿ ಭಾರತೀಯ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಇದರಲ್ಲಿ ತನಗೆ ಅವಧಿಗಿಂತ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ ಎಂದು ವಿಧಾನ ಪರಿಷತ್ ನೈರುತ್ಯ ಶಿಕ್ಷಕ ಕ್ಷೇತ್ರದ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿದ್ದು ತನ್ನನ್ನು ಇದರ ಉಪಾಧ್ಯಕ್ಷನನ್ನಾಗಿ ಮಾಡಿದೆ. ತನ್ನ […]