ಹಬ್ಬ, ಉತ್ಸವಗಳ ಹಿಂದಿನ ಶಾಸ್ತ್ರ ಮತ್ತು ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವುದರ ಮಹತ್ವ !

Monday, September 6th, 2021
Ganesha

ಮಂಗಳೂರು  : ಹಬ್ಬ, ಉತ್ಸವ ಇತ್ಯಾದಿಗಳೆಡೆ ಕೇವಲ ರೂಢಿಯೆಂದು ನೋಡಬೇಡಿ, ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಅರಿತುಕೊಳ್ಳಿ ! ಭಾರತದಲ್ಲಿ ಅನೇಕ ಹಬ್ಬ, ಉತ್ಸವ ಮತ್ತು ಪರಂಪರೆಗಳಿವೆ. ಬಹುತೇಕ ಜನರು ಅದರೆಡೆಗೆ ಕೇವಲ ರೂಢಿಯೆಂದು ನೋಡುತ್ತಾರೆ ಮತ್ತು ಆ ದೃಷ್ಟಿಯಿಂದಲೇ ಆಚರಿಸುತ್ತಾರೆ; ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಪ್ರಾದೇಶಿಕ-ಭಿನ್ನತೆ, ಜನಜೀವನ, ಉಪಾಸನೆಯ ಪದ್ಧತಿ ಇತ್ಯಾದಿಗಳಿಂದ ಹಬ್ಬ, ಉತ್ಸವಗಳನ್ನು ಆಚರಿಸುವಾಗ ವಿವಿಧೆಡೆಗಳಲ್ಲಿ ಲೋಕರೂಢಿಯಂತೆ ಕೆಲವೊಮ್ಮೆ ವ್ಯತ್ಯಾಸಗಳು ಕಂಡುಬರುತ್ತವೆ. ಶಾಸ್ತ್ರದ ಆಧಾರವಿಲ್ಲದಿರುವಾಗಲೂ ಕೇವಲ ಹಿಂದಿನ […]

ಮಂಗಳೂರು : ಗಣೇಶ ಚತುರ್ಥಿ ವೇಳೆ ಮುಸ್ಲಿಂ ವ್ಯಾಪಾರಿಯಿಂದ ಜನರಿಗೆ ಜ್ಯೂಸ್ ವಿತರಣೆ

Tuesday, September 3rd, 2019
ganesha-chaturti

ಮಂಗಳೂರು : ಕೋಮು ಸೂಕ್ಷ್ಮ ಜಿಲ್ಲೆ ಎಂದೆ ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸೌಹಾರ್ದತೆ ಸಾರುವ ಘಟನೆಯೊಂದು ನಡೆದಿದೆ. ಗಣೇಶ ಮೂರ್ತಿ ನಿಮಜ್ಜನಕ್ಕೆ ತೆರಳುತ್ತಿದ್ದ ಜನರಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ಜ್ಯೂಸ್ ಹಾಗೂ ಮಜ್ಜಿಗೆ ವಿತರಿಸಿದ್ದಾರೆ. ಮೆರವಣಿಗೆಯಲ್ಲಿ ಆಗಮಿಸಿದ ಸಾವಿರಾರು ಮಂದಿಗೆ ಜ್ಯೂಸ್ ಹಾಗೂ ಮಜ್ಜಿಗೆ ಹಂಚಿದ್ದಾರೆ. ಇಸ್ಮಾಯಿಲ್ ಅವರು ಕಳೆದ ಕೆಲವು ವರ್ಷಗಳಿಂದ ಈ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದು ಹಿಂದೂ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದಾರೆ.    

ಬೆಂಗಳೂರು : ಪಿಒಪಿ ಗಣೇಶ ಮೂರ್ತಿಯ ಬಳಕೆ

Saturday, August 31st, 2019
ganesha-murthi

ಬೆಂಗಳೂರು : ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ವಿಭಿನ್ನವಾಗಿ ಆಲೋಚಿಸಿದ್ದಾರೆ. ಪಿಒಪಿ ಗಣೇಶ ಮೂರ್ತಿ ನಿಷೇಧದ ಬಳಿಕ ಮಣ್ಣಿನ ಗಣೇಶ ಟ್ರೆಂಡ್‌ ಹೆಚ್ಚಾಗಿದ್ದು, ವಿಸರ್ಜನೆ ವೇಳೆ ನಡೆಯುವ ಅದ್ದೂರಿ ಉತ್ಸವಕ್ಕೆ ಹಳೆಯ ಪಿಒಪಿ ಗಣೇಶ ಮೂರ್ತಿಗಳನ್ನೇ ಬಳಸುವ ಟ್ರೆಂಡ್‌ ಜೋರಾಗಿದೆ. 2016ರಿಂದ ರಾಜ್ಯದಲ್ಲಿ ಪಿಒಪಿ ಗಣೇಶ ಮಾರಾಟ ಮತ್ತು ಬಳಕೆ ನಿಷೇಧವಾಗಿದ್ದು, ಸಾರ್ವಜನಿಕರಲ್ಲಿ ಪರಿಸರ ಸ್ನೇಹ ಗಣೇಶ ಹಬ್ಬದ ಜಾಗೃತಿ ಹೆಚ್ಚಾಗಿದೆ. ಈ ನಡುವೆಯೂ ವರ್ಷಕ್ಕೊಮ್ಮೆ ಬರುವ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಬೇಕೆಂಬ […]

ಪರಿಸರಮಾಲಿನ್ಯ ಆಗದಂತೆ ಗಣೇಶ ಮೂರ್ತಿ ವಿಸರ್ಜನೆ

Saturday, September 15th, 2018
Ganesha-Idol

ಬೆಂಗಳೂರು: ಪರಿಸರಮಾಲಿನ್ಯ ಆಗದಂತೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರೀಸ್ ) ಹಾಗೂ ಬಣ್ಣದ ಗಣೇಶ ಮೂರ್ತಿಯನ್ನು ಬಳಸದಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಾಕಷ್ಟು ಜನಜಾಗೃತಿ ಕಾರ್ಯಕ್ರಮದ ಪರಿಣಾಮವಾಗಿ ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿಯ ಬಳಕೆ ಪ್ರಮಾಣದಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪಿಒಪಿ ಗಣೇಶ ವಿಸರ್ಜನೆಯಾಗಿದೆ. ಇದರ ಅಂಕಿ ಅಂಶವನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆಗೊಳಿಸಿದೆ. ಪ್ರಾದೇಶಿಕ ಕಚೇರಿಗಳಲ್ಲಿ ಒಟ್ಟು 7169 ಗಣೇಶ ಮೂರ್ತಿಗಳು ವಿಸರ್ಜನೆಯಾಗಿದೆ. ಇವುಗಳಲ್ಲಿ 80 […]