ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ನೀಡಬೇಕು : ಶೋಭಾ ಕರಂದ್ಲಾಜೆ

Saturday, October 10th, 2020
shobha

ಉಡುಪಿ :  ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವುದು ಸೂಕ್ತ, ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಇದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲ ಕಡೆಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ […]

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ಗಲ್ಲು ಶಿಕ್ಷೆ

Thursday, March 19th, 2020
nkrbhaya-case

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂದುಕೊಂಡಂತೆ ನಡೆದರೆ ಶುಕ್ರವಾರ ಮುಂಜಾನೆ ನಾಲ್ವರು ಅಪರಾಧಿಗಳನ್ನು ನೇಣಿಗೇರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊನೆಯ ಬಾರಿಗೆ ಅಪರಾಧಿಗಳನ್ನು ಭೇಟಿಯಾಗುತ್ತಿದ್ದಾರೆ. ನಿರ್ಭಯಾ ಪ್ರಕರಣದ ಮೂವರು ಅಪರಾಧಿಗಳು ಈಗಾಗಲೇ ಮುಚ್ಚಿದ ಕೋಣೆಯಲ್ಲಿ ಕುಟುಂಬಸ್ಥರನ್ನು ಕೊನೆಯ ಬಾರಿ ಭೇಟಿಯಾಗಿದ್ದಾರೆ. ನಿಯಮಗಳ ಪ್ರಕಾರ ಹೀಗೆ ಮುಚ್ಚಿದ ಕೋಣೆಯಲ್ಲಿ ಕೊನೆಯ ಬಾರಿ ಕುಟುಂಬಸ್ಥರನ್ನು ಭೇಟಿಯಾಗಲು, ಅವರನ್ನು ಸ್ಪರ್ಷಿಸಿ ಮಾತುಕತೆ ನಡೆಸಲು ಅವಕಾಶವಿದೆ. ಆದರೆ ಅಕ್ಷಯ್‌ ಠಾಕೂರ್‌ನನ್ನು […]

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲು ಶಿಕ್ಷೆ

Saturday, March 14th, 2020
yakapura

ಕಲಬುರ್ಗಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾಕಾಪುರದ ಯಲ್ಲಾಲಿಂಗ(35) ಮರಣದಂಡನೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯ ಕುಟುಂಬಕ್ಕೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಚಾಕಲೆಟ್ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು […]

ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ

Tuesday, February 18th, 2014
Rajiv-Gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಮಂಗಳವಾರ ಪರಿವರ್ತಿಸಿದೆ. ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಮೂವರು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ‘ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರಿಗೆ ಕ್ಷಮಾದಾನ ಇಲ್ಲ. ಅವರಿಗೆ ಗಲ್ಲು ಶಿಕ್ಷೆಯೇ ಸೂಕ್ತ’ ಎಂದು  ಸುಪ್ರೀಂಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಕೇಂದ್ರ […]

ಪ್ರವೀಣನ ಕ್ಷಮಾದಾನ ಅರ್ಜಿ ತಿರಸ್ಕೃತ, ಗಲ್ಲು ಶಿಕ್ಷೆ ಖಾಯಂ

Friday, April 5th, 2013
Praveen vaamanjur

ಮಂಗಳೂರು : ಒಂದೇ ಕುಟುಂಬದ ನಾಲ್ವರನ್ನು ಸಾಮೂಹಿಕ ಹತ್ಯೆ ಮಾಡಿದ್ದ ವಾಮಂಜೂರು ಪ್ರವೀಣನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕೃತಗೊಳಿಸಿದ್ದು ಈ ಮೂಲಕ ಸುಪ್ರೀಂಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ  ಖಾಯಂಗೊಂಡಿದೆ. ಆರೋಪಿ ಪ್ರವೀಣ 1993 ರ ಫೆಬ್ರವರಿ 23 ರಂದು ಹಣಕ್ಕಾಗಿ ತನ್ನ ಅತ್ತೆ ಅಪ್ಪಿ ಶೇರಿಗಾರ್ತಿ, ಆಕೆಯ ಮಗ ಗೋವಿಂದ, ಮಗಳು ಶಕುಂತಳಾ ಹಾಗೂ ಶಕುಂತಳಾರ ಪುತ್ರಿ ದೀಪಿಕಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಈತನಿಗೆ ಮಂಗಳೂರಿನ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ನಂತರ […]

ಗಲ್ಲು ಶಿಕ್ಷೆ : ಮದ್ರಾಸ್‌ ಹೈಕೋರ್ಟ್‌ ತಡೆಗೆ ಪೂಜಾರಿ ಆಕ್ರೋಶ

Wednesday, August 31st, 2011
Poojary Press

ಮಂಗಳೂರು : ಮದ್ರಾಸ್‌ ಹೈಕೋರ್ಟ್‌ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಿಗೆ ಸುಪ್ರೀಂ ಕೋರ್ಟ್‌ ವಿಧಿಸಿರುವ ಗಲ್ಲು ಶಿಕ್ಷೆಗೆ ಎಂಟು ವಾರಗಳ ತಡೆಯಾಜ್ಞೆ ನೀಡಿರುವುದರ ವಿರುದ್ಧ ಕೇಂದ್ರ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ . ತಮಿಳುನಾಡು ವಿಧಾನಸಭೆಯಲ್ಲಿ ಹಂತಕರಿಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ನಿರ್ಣಯ ಕೈಗೊಂಡಿರುವುದು ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ. ಹಂತಕರಿಗೆ ಈಗಾಗಲೇ 20 ವರ್ಷ ಜೀವದಾನ ನೀಡಲಾಗಿದೆ. ಇನ್ನು ವಿಳಂಬ ಮಾಡದೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು […]