ತೋಟದಲ್ಲಿ ಗಾಂಜಾ ಗಿಡಗಳು : ಮಾಲು ಸಹಿತ ವ್ಯಕ್ತಿಯ ವಶ
Wednesday, December 18th, 2019ಮಡಿಕೇರಿ : ಗರಗಂದೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಅದೇ ತೋಟದ ರೈಟರ್‌ವೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಎಂಬುವವರ ತೋಟದಲ್ಲಿ ರೈಟರ್ ಆಗಿದ್ದ ಉಣ್ಣಿಕೃಷ್ಣ ಎಂಬುವವರೇ ಬಂಧಿತ ಆರೋಪಿ. ಖಚಿತ ಮಾಹಿತಿ ದೊರೆತ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪರಿಶೀಲನೆ ನಡೆಸಿದಾಗ ಕಾಫಿ ತೋಟದೊಳಗೆ ಅಕ್ರಮವಾಗಿ ಗಾಂಜಾಗಿಡಗಳನ್ನು ಬೆಳೆಸಿರುವುದು ಕಂಡು ಬಂತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ಉಣ್ಣಿಕೃಷ್ಣ ಅವರನ್ನು ಮಾಲು ಸಹಿತ ವಶಕ್ಕೆ ಪಡೆದು ತೋಟದ ಮಾಲೀಕ ಶಂಕರಪ್ಪ ವಿರುದ್ಧ ಕ್ರಮ ಕೈಗೊಂಡಿದ್ದಾರೆ. […]