ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಗಂಡ ಹೆಂಡತಿ ಸೆರೆ
Saturday, July 16th, 2022
ಮಂಗಳೂರು : ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತ್ರತ್ವದ ಮಂಗಳೂರು […]