ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡಬೇಡಿ, ನಾನು ಆರೋಗ್ಯವಾಗಿದ್ದೇನೆ : ಸಿದ್ದರಾಮಯ್ಯ
Wednesday, December 11th, 2019ಬೆಂಗಳೂರು : ಗಾಳಿ ಸುದ್ದಿಗಳಿಗೆ ಆತಂಕಪಡಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆರೋಗ್ಯದ ಕುರಿತು ಟ್ವೀಟ್ ಮಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ 6:30 ಸುಮಾರಿಗೆ ಸಿದ್ದರಾಮಯ್ಯಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚೆಗೆ ಉಪಚುನಾವಣೆಯಲ್ಲಿ […]