ಬೈಯಪ್ಪನ ಹಳ್ಳಿಯಲ್ಲಿ ಗಿರೀಶ್ ಕಾರ್ನಾಡ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ
Monday, June 10th, 2019ಬೆಂಗಳೂರು : ಬೆಂಗಳೂರು, ಜೂನ್ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ,ಕನ್ನಡದ ಮೇರು ನಾಟಕಕಾರ, ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್(81) ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಗಿರೀಶ್ ಕಾರ್ನಾಡ್ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ […]