ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Saturday, October 24th, 2020
KhalilShoot

ಬಂಟ್ವಾಳ : ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ  ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶರಣಾಗುವಂತೆ ಸೂಚಿಸಿದರು ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.  ಘಟನೆಯಲ್ಲಿ  ಬಂಟ್ವಾಳ  ಎಸ್ಸೈ  ಪ್ರಸನ್ನ  ಗಾಯಗೊಂಡಿದ್ದಾರೆ ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು […]

ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ​​​ಉದ್ಘಾಟಿಸಿದ ಶಾಸಕ ಎಸ್.ಅಂಗಾರ

Wednesday, July 15th, 2020
s Angara

ಸುಳ್ಯ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ಅನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಇಲ್ಲಿ ಒಂದು ಸುಸಜ್ಜಿತವಾದ ಚೆಕ್ ಪೋಸ್ಟ್ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳು, ಪುತ್ತೂರು ಉಪ ಆಯುಕ್ತರು, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆಗೆ ಉಪ್ಪಿನಂಗಡಿ ಠಾಣಾಧಿಕಾರಿ ಈರಯ್ಯ ಅವರು ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಉಪ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗ್ಸ್, ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಉಮೇಶ್ […]

ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Thursday, September 19th, 2019
puttur

ಪುತ್ತೂರು : ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಸೆ.19 ರಂದು ಮಧ್ಯಾಹ್ನ ನಡೆದಿದೆ. ಮೃತ ಚಾಲಕನನ್ನು ಬೆಂಗಳೂರು ಜಾಲ ಹಳ್ಳಿ ನಿವಾಸಿ ನಾಗರಾಜ(60) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಬೆಂಗಳೂರು ಜಾಲಹಳ್ಳಿ ನಿವಾಸಿ ಹನುಮಂತ ನಾಯಕ್ (26) ಎಂಬವರು ಗಾಯಗೊಂಡು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಇಂದು ಕೂಡ ದ.ಕ ಜಿಲ್ಲೆಯಲ್ಲಿ ವರುಣನ ಅಬ್ಬರ..ಜನಜೀವನ ಅಸ್ತವ್ಯಸ್ತ!

Friday, August 17th, 2018
heavy-rain

ಮಂಗಳೂರು: ಇಂದು ಕೂಡ ದ.ಕ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ನೆರೆ ಹಾವಳಿ ಮುಂದುವರಿದಿದೆ. ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ನೆರೆ ಹಾವಳಿಯಿಂದ ಹಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ನೆರೆಯಿಂದ ಸಂತ್ರಸ್ತರಾದ 101 ಮನೆಗಳ 539 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಆಲಡ್ಕ, ಕಡಬ, ಕೂಟೇಲು, ಉಪ್ಪಿನಂಗಡಿ, ಗುಂಡ್ಯ, ಶಿರಾಡಿ, ಉದನೆ, ಇಚಿಲಂಪಾಡಿ, ಕುರಿಯಾಳಕೊಪ್ಪ, ಪಡುಬೆಟ್ಟು, ಪಟ್ರಮೆ, ಶಿಶಿಲ, ಶಿಬಾಜೆ ಹಾಗೂ ಸುಳ್ಯ ಭಾಗಗಳಲ್ಲಿ […]