ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದದಲ್ಲಿ 1 ಲಕ್ಷ ಆಟದ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರ

Saturday, July 9th, 2022
Siradi Sai temple

ಬೆಂಗಳೂರು : ಪ್ರತಿವರ್ಷವೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸುವ ಜೆಪಿ ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ಈ ಬಾರಿ 1 ಲಕ್ಷ ಆಟದ ಸಾಮಗ್ರಿಗಳನ್ನು ಬಳಸಿ ವಿಶೇಷ ಅಲಂಕಾರ ವನ್ನು ಮಾಡಲಾಗಿದೆ. ಕ್ರೀಡೆಗಳು ಅದರಲ್ಲೂ ಸಾಂಪ್ರದಾಯಿಕ ಕ್ರೀಡೆಗಳು ನಮ್ಮ ಬದುಕಿನಲ್ಲಿ ಬಹಳ ಮಹತ್ವದ ಪಾತ್ರವಹಿಸುತ್ತವೆ. ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ವಿಕಸತೆ ಹೆಚ್ಚಾಗುತ್ತದೆ. ಹಾಗೆಯೇ ಆರೋಗ್ಯವೂ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಖೇಲೋ ಇಂಡಿಯಾ ಘೋಷಣೆಯ ಮೂಲಕ ಕ್ರೀಡಾ […]

ಗುರುಕೃಪಾಯೋಗಾನುಸಾರ ಸಾಧನೆ ಮಾಡುವಾಗ ಪ್ರತಿಭಾಶಕ್ತಿಯು ಬೇಗನೇ ಜಾಗೃತವಾಗುವುದು

Tuesday, June 30th, 2020
Guru Poornima

ಅ.ಅರ್ಥ ಕೃಪೆ ಶಬ್ದವು ‘ಕೃಪ್’ ಧಾತುವಿನಿಂದ ನಿರ್ಮಾಣವಾಗಿದೆ. ‘ಕೃಪ್’ ಎಂದರೆ ದಯೆ ತೋರಿಸುವುದು ಮತ್ತು ಕೃಪೆ ಎಂದರೆ ದಯೆ, ಕರುಣೆ, ಅನುಗ್ರಹ ಅಥವಾ ಪ್ರಸಾದ. ಗುರುಕೃಪೆಯ ಮಾಧ್ಯಮದಿಂದ ಜೀವವು ಶಿವನೊಂದಿಗೆ ಏಕರೂಪವಾಗುವುದಕ್ಕೆ, ಅಂದರೆ ಜೀವಕ್ಕೆ ಈಶ್ವರಪ್ರಾಪ್ತಿಯಾಗುವುದಕ್ಕೆ ‘ಗುರುಕೃಪಾಯೋಗ’ ಎಂದು ಹೇಳುತ್ತಾರೆ. ಆ.ಮಹತ್ವ ಬೇರೆಬೇರೆ ಯೋಗಮಾರ್ಗಗಳಿಂದ ಸಾಧನೆ ಮಾಡುವುದರಲ್ಲಿ ಅನೇಕ ವರ್ಷಗಳನ್ನು ವ್ಯರ್ಥಗೊಳಿಸದೇ, ಅಂದರೆ ಈ ಎಲ್ಲಾ ಮಾರ್ಗಗಳನ್ನು ಬದಿಗಿರಿಸಿ, ಗುರುಕೃಪೆಯನ್ನು ಬೇಗನೇ ಹೇಗೆ ಪಡೆಯುವುದು ಎಂಬುದನ್ನು ಗುರುಕೃಪಾಯೋಗವು ಕಲಿಸುತ್ತದೆ. ಆದುದರಿಂದ ಸಹಜವಾಗಿಯೇ ಈ ಮಾರ್ಗದಿಂದ ಆಧ್ಯಾತ್ಮಿಕ ಉನ್ನತಿಯು […]

ಗುರುಪೂರ್ಣಿಮೆ : ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಶೀರ್ವದಿಸಿದ ವಿಶ್ವೇಶತೀರ್ಥ ಸ್ವಾಮೀಜಿ

Tuesday, July 16th, 2019
Narebdra-modi

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಗುರುಪೂರ್ಣಿಮೆಯ ಶುಭ ದಿನ ಮಂಗಳವಾರ ಸುಮಾರು 20 ನಿಮಿಷಗಳನ್ನು ಅವರೊಂದಿಗೆ ಕಳೆದರು. ಕಳೆದ ಮೂರು ದಿನಗಳಿಂದ ಹೊಸದಿಲ್ಲಿಯಲ್ಲಿರುವ ಪೇಜಾವರಶ್ರೀ, ಮಂಗಳವಾರ ಗುರುಪೂರ್ಣಿಮೆಯ ಶುಭ ಅವಸರದಲ್ಲಿ ತಮ್ಮ ಶಿಷ್ಯೆ ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಕಾರ್ಯಾಲಯವೇ ವ್ಯವಸ್ಥೆಗೊಳಿಸಿದಂತೆ ಪ್ರಧಾನಿ ಅವರನ್ನು ಭೇಟಿಯಾದರು ಎಂದು ಸ್ವಾಮೀಜಿಗಳ ನಿಕಟವರ್ತಿ ಮೂಲಗಳು ತಿಳಿಸಿವೆ. ಪೇಜಾವರಶ್ರೀಗಳ […]