ಸರ್ಪ ಸಂಸ್ಕಾರ ವಿಚಾರದಲ್ಲಿ ಹಲ್ಲೆ ಆರೋಪ: ಕುಕ್ಕೆ ಸುಬ್ರಹ್ಮಣ್ಯ ಬಂದ್

Thursday, October 25th, 2018
subramanya

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಚೈತ್ರಾ ಕುಂದಾಪುರ ಮತ್ತು ತಂಡ ನಿನ್ನೆ ಹಿಂದೂ ಜಾಗರಣ ವೇದಿಕೆಯ ಮುಖಂಡನಿಗೆ ನಡೆಸಿದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಆಚರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಿನ್ನೆ ಸಂಜೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಡೆದಾಟ: ಚೈತ್ರಾ ಕುಂದಾಪುರ ಸಹಿತಾ ಏಳು ಮಂದಿ ಪೊಲೀಸರ ವಶಕ್ಕೆ

Thursday, October 25th, 2018
chaitra-kundapura

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಪೂಜೆಯೊಂದಕ್ಕೆ ಸಂಬಂಧಪಟ್ಟಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಯೊಂದರ ನಾಯಕಿ ಚೈತ್ರಾ ಕುಂದಾಪುರ ತಂಡದ ನಡುವೆ ನಡೆದ ಘರ್ಷಣೆಯಿಂದ ಓರ್ವ ಗಾಯಗೊಂಡಿದ್ದು, ಚೈತ್ರಾ ಕುಂದಾಪುರ ಸಹಿತಾ ಆಕೆಯ ಬೆಂಬಲಿಗರೆನ್ನಲಾದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂದು ಹೆಸರಿಸಲಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ […]