ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯಾ ಶಿಕ್ಷಕ ಬಂಧನ

Sunday, August 8th, 2021
Gururaj

ಸುಬ್ರಹ್ಮಣ್ಯ :  ವಿದ್ಯಾರ್ಥಿನಿಯ ಮೇಲೆ  ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಶಾಲಾ ಶಿಕ್ಷಕನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಗುರುರಾಜ್‌ಗೆ ಸರಕಾರಿ ಉದ್ಯೋಗ, 25 ಲಕ್ಷ ರೂ.: ಸಚಿವ ಪ್ರಮೋದ್ ಮಧ್ವರಾಜ್

Friday, April 6th, 2018
gururaj-poojary

ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚೊಚ್ಚಲ ಪದಕ ಜಯಿಸಿಕೊಟ್ಟ ಕುಂದಾಪುರದ ಗುರುರಾಜ್ ಪೂಜಾರಿ ಅವರ ಸಾಧನೆ ಅವರಿಗೆ ಅವಕಾಶದ ಭಾಗ್ಯದ ಬಾಗಿಲನ್ನು ತೆರೆದುಕೊಟ್ಟಿದೆ. ರಾಜ್ಯದ ಕ್ರೀಡಾಪಟುವೊಬ್ಬನ ಈ ಸಾಧನೆಗೆ ಅತೀವ ಹರ್ಷ ವ್ಯಕ್ತಪಡಿಸಿದ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇದಕ್ಕಾಗಿ ಗುರುರಾಜ್‌ರನ್ನು ಸರಕಾರದ ಪರವಾಗಿ ಅಭಿನಂದಿಸಿದ್ದಾರೆ. ‘ರಾಜ್ಯದ ಕ್ರೀಡಾ ಸಚಿವನಾಗಿ ಗುರುರಾಜ್‌ರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಇದಕ್ಕಿಂತ ಸಂತೋಷದ ಕ್ಷಣ ಬೇರೆ ಇಲ್ಲ. […]

ತಂದೆ ಚಾಲಕ, ತಾಯಿ ಮನೆಯೊಡತಿ… ಕಡು ಬಡತನ ಮೆಟ್ಟಿನಿಂತ ಹಳ್ಳಿ ಹುಡುಗನ ‘ಬೆಳ್ಳಿ’ ಕಥೆ!

Thursday, April 5th, 2018
guraraj-fmly

ಉಡುಪಿ: ಆತ ದಟ್ಟ ಕಾಡಿನ ಮಧ್ಯದ ಇರುವ ಪ್ರದೇಶದಲ್ಲಿ ವಾಸಿಸುತ್ತಿದ್ದ. ತಂದೆ ವೃತ್ತಿಯಲ್ಲಿ ಚಾಲಕ. ತಾಯಿ ಮನೆಯೊಡತಿ. ಕಡು ಬಡತನವನ್ನು ಮೆಟ್ಟಿನಿಂತ ಆತ ಇಂದು ದೇಶಕ್ಕೆ ಕಾಮನ್‌ವೇಲ್ತ್‌ ವೇಯ್ಟ್‌‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ವಂಡ್ಸೆ ನಿವಾಸಿ ಮಹಾಬಲ ಪೂಜಾರಿ ಮತ್ತು ಪದ್ಧು ಪೂಜಾರಿಯವರ ಮಗ ಗುರುರಾಜ್. 56 ಕೆ.ಜಿ ವೇಯ್ಟ್‌ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ದೇಶದ ಕೀರ್ತಿಯನ್ನು ಗಗನದೆತ್ತರಕ್ಕೆ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ ನಮ್ಮ ಕನ್ನಡದ ಕುಡಿ. […]

ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಕುಂದಾಪುರದ ಗುರುರಾಜ್

Thursday, April 5th, 2018
gururaj

ಕುಂದಾಪುರ: ಕುಂದಾಪುರದ ಗುರುರಾಜ್ ಪೂಜಾರಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ 2018ರಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ವೇಟ್‌ಲಿಫ್ಟಿಂಗ್‌ನ ಪುರುಷರ 56 ಕೆಜಿ ವಿಭಾಗದಿಂದ ಸ್ಪರ್ಧಿಸಿದ್ದ ಭಾರತದ ಮಂಗಳೂರಿನ ಕುಂದಾಪುರದ ಗುರುರಾಜ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಕೊರಳಿಗೇರಿಸಿಕೊಂಡು ಬೀಗಿದ್ದಾರೆ.25 ವರ್ಷದ ಗುರುರಾಜ್ ಅವರು ವೈಯಕ್ತಿಕ ಅತ್ಯುತ್ತಮ ಸಾಧನೆಯಾದ 249 (111+134) ಕೆಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಳೆದ ಮೂರು ಬಾರಿ ಚಾಂಪಿಯನ್ ಎನಿಸಿಕೊಂಡಿರುವ ಮಲೇಷಿಯಾದ ಮೊಹಮ್ಮದ್ ಇಜಹಾರ್ ಅವರು ಪ್ರಥಮ […]