ಅಡಿಕೆ ಬೆಳೆಗಾರರ ಶಾಪ ಬಿಜೆಪಿ ಶಾಸಕರಿಗೆ ತಟ್ಟಲಿದೆ: ಮಾಜಿ ಸಚಿವ ರೈ

Monday, January 2nd, 2023
kisan

ಬಂಟ್ವಾಳ: ವಿಧಾನಸಭೆಯಲ್ಲಿ ಅಡಿಕೆ ಬೆಳೆ ಮತ್ತು ಅಡಿಕೆ ಬೆಳೆಗಾರರ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸದೆ ಮೌನವಾಗಿರುವ ಕರಾವಳಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಡಿಕೆ ಬೆಳೆಗಾರರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭೂ ಮಸೂದೆ ಕಾಯ್ದೆ ಬಳಿಕ ಕರಾವಳಿ ಭಾಗದಲ್ಲಿ […]

ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಭೇಟಿ

Wednesday, November 23rd, 2022
Araga-Jnanedra-padil

ಮಂಗಳೂರು : ನಗರದ ನಾಗುರಿಯಲ್ಲಿ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಅವರು‌ ನವೆಂಬರ್ 23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್‌, ಡಿಸಿಪಿ ಅನ್ಶು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ ಮತ್ತಿತರರು ಈ ವೇಳೆ ಹಾಜರಿದ್ದರು. ಸ್ಥಳ ಪರಿಶೀಲನೆ ಬಳಿಕ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡ […]

ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಐದು ಲಕ್ಷ ರೂಪಾಯಿಗಳ ಚೆಕ್​ ವಿತರಿಸಿದ ಶೋಭಾ ಕರಂದ್ಲಾಜೆ

Sunday, July 31st, 2022
shobha karandlaje

ಮಂಗಳೂರು : ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ ಐದು ಲಕ್ಷ ರೂಪಾಯಿಗಳ ಚೆಕ್​ ಅನ್ನು ಕುಟುಂಬಸ್ಥರಿಗೆ ನೀಡಿ ಸಾಂತ್ವನ ಹೇಳಿದ್ದಾರೆ. ಪ್ರವೀಣ್ ಸಾವು ದುಃಖ ತಂದಿದೆ. ಹಲವರ ಸಮಸ್ಯೆ, ಕಷ್ಟಗಳಿಗೆ ಪ್ರವೀಣ್ ಸ್ಪಂದಿಸುತ್ತಿದ್ದ. ಆದರೆ ಈಗ ಆತ ಇಲ್ಲ ಎನ್ನುವುದು ಕಷ್ಟ. ಪ್ರಕರಣದ ತನಿಖೆ ಎನ್ ಐ ಎ ಗೆ ಒಪ್ಪಿಸಲಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ಕೊಡುವ ಭರವಸೆಯಿದೆ ಎಂದರು. ಇನ್ನು ಈ ಘಟನೆಯ ಕುರಿತು ತೀವ್ರ […]

ಮತಾಂತರ ಕಾಯ್ದೆಗೆ ವಿರೋಧ ಅನಗತ್ಯ : ಗೃಹ ಸಚಿವ

Saturday, December 25th, 2021
Araga-Jnanedra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ  ಶನಿವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಮತಾಂತರ ಕಾಯ್ದೆ ವಿಧಾನ ಸಭೆಯಲ್ಲಿ ಪಾಸ್ ಆಗಿದೆ. ನಾವೆಲ್ಲರೂ ಪಕ್ಷ ಮೀರಿ ಈ ಬಗ್ಗೆ ಯೋಚನೆ ಮಾಡಬೇಕು. ನಾವು ಮತಾಂತರ ಕಾಯ್ದೆ ಏಕೆ ತಂದೆವು ಎಂದು ಯೋಚಿಸಬೇಕು.ಇದನ್ನು ನಿವಾರಿಸಲು ನಾವು ಈ ಕಾಯ್ದೆ ತಂದಿದ್ದೇವೆ. ಇದಕ್ಕೆ ವಿರೋಧ ಅನಗತ್ಯ ಎಂದರು. ಮತಾಂತರ ನಿಷೇಧ ವಿಧೇಯಕಕ್ಕೆ ಆಕ್ಷೇಪಣೆಗಳು ಸಹಜ. ಮುಂದಿನ […]

ಧರ್ಮಸ್ಥಳದಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Wednesday, November 10th, 2021
dharmasthala

ಧರ್ಮಸ್ಥಳ : ಕರಾವಳಿ ಮೂಲಕ ನಮ್ಮ ದೇಶಕ್ಕೆ ವಿದೇಶೀಯರ ಅಕ್ರಮ ಪ್ರವೇಶ ತಡೆಗಟ್ಟಲು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸದೃಢ ಕರಾವಳಿ ಕಾವಲು ಪಡೆ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗುವುದು. ಈ ಬಗ್ಯೆ ಈಗಾಗಲೆ 30 ಬೋಟ್‌ಗಳನ್ನು ಖರೀದಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಎರಡು ಕೋಟಿ ಮೂವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸೆಟಲೈಟ್ ಫೋನ್ ಬಳಕೆ ಹಾಗೂ […]

ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ ಬಸವರಾಜ ಬೊಮ್ಮಾಯಿ ಕರ್ನಾಟಕ ಮುಖ್ಯಮತ್ರಿಯಾಗಿ ನೇಮಕ

Tuesday, July 27th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ […]

ರಾಜಕೀಯದ ದುರುದ್ಧೇಶದಿಂದ ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ವೈರಲ್ ಮಾಡಿದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ : ಶಾಸಕ ವೇದವ್ಯಾಸ್ ಕಾಮತ್

Tuesday, July 20th, 2021
Vedavyas Kamath

ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. […]

ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ, ಪೊಲೀಸ್ ಇಲಾಖೆಗೆ ತಿರುವು ನೀಡುವ ದಿನ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Tuesday, July 13th, 2021
Bommai

ಬೆಂಗಳೂರು: ಕರ್ನಾಟಕ ಪೊಲೀಸ್ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದುವರೆಗೆ ಅಪರಾಧ ತಡೆ ಮತ್ತು ನಿಯಂತ್ರಣದಲ್ಲಿ ಮಾಡಿದ್ದೇವೆ. ಇನ್ನು ಮುಂದೆ ಅಪರಾಧ ಶೋಧ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ. ಇವು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸದ ನುಡಿಗಳು. ಮಂಗಳವಾರ ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಪೊಲೀಸ್ ಇಲಾಖೆಯ ಸಬಲೀಕರಣಕ್ಕೆ ಹೊಸ ಯೋಜನೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ವಿಶ್ವಾಸದ ನುಡಿಗಳನ್ನು ಆಡಿದರು. ಪೊಲೀಸ್ […]

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ತಪಾಸಣೆ : ಬಸವರಾಜ ಬೊಮ್ಮಾಯಿ

Tuesday, July 13th, 2021
Home Minister

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಗಡಿಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಈ ಸೂಚನೆ ನೀಡಿದರು. ಮಹಾರಾಷ್ಟ್ರ, ಕೇರಳ ರಾಜ್ಯಗಳ ಮೂಲಕ ಕರ್ನಾಟಕ ಪ್ರವೇಶ ಮಾಡುವ […]

ಪೊಲೀಸರು ಜಪ್ತಿ ಮಾಡಿದ 35 ಸಾವಿರ ವಾಹನಗಳ ದಂಡದ ಮೊತ್ತ ನೋಡಿ ಗೃಹ ಸಚಿವರೇ ಶಾಕ್!

Saturday, May 29th, 2021
Bommai

ಬೆಂಗಳೂರು : ಕೋವಿಡ್ 19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗೆ ಇಳಿದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ ಪೊಲೀಸರು ಬರೋಬ್ಬರಿ 35905 ಸಾವಿರ ವಾಹನ ಜಪ್ತಿ ಮಾಡಿದ್ದಾರೆ. ಅದರಲ್ಲೂ 32 ಸಾವಿರ ದ್ವಿಚಕ್ರ ವಾಹನ. ಇವುಗಳಿಂದ ಸರಾಸರಿ ದಂಡ ಎಷ್ಟು ಸಂಗ್ರಹವಾಗುತ್ತದೆ. ಈ ದಂಡದ ಮೊತ್ತವನ್ನು ಏನು ಮಾಡುತ್ತಾರೆ ಎಂಬುದರ ಪೂರ್ಣ ವಿವರ ಇಲ್ಲಿದೆ ನೋಡಿ! 35 ಸಾವಿರ ವಾಹನ ಜಪ್ತಿ ರಾಜಧಾನಿಯಲ್ಲಿ ಬೆಳಗ್ಗೆ […]