ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ ಅಧಿಕಾರ ಸ್ವೀಕಾರ

Friday, March 1st, 2024
sadashiva-ullal

ಮಂಗಳೂರು: ನಾಲ್ಕೂವರೆ ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಸದಾಶಿವ ಉಳ್ಳಾಲ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಸದಾಶಿವ ಉಳ್ಳಾಲ್ ಮಾತನಾಡಿ ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವೆ. ಪಕ್ಷಕ್ಕೆ ಯಾವ ಬಗೆಯಲ್ಲೂ ಮುಜುಗರ ಆಗದಂತೆ ಬಡವರಿಗೆ ಸೂರು ನಿರ್ಮಿಸಿಕೊಳ್ಳಲು ಜಾಗ ಸಿಗುವಂತೆ ಮಾಡಲು ಪ್ರಯತ್ನಿಸುವೆ’ ಎಂದು ಹೇಳಿದ್ದಾರೆ. ವಕೀಲರಾಗಿರುವ ಸದಾಶಿವ ಉಳ್ಳಾಲ್ ಅವರು ಉಳ್ಳಾಲ ತಾಲ್ಲೂಕಿನ ಕೊಲ್ಯ ನಿವಾಸಿ. ಗ್ರಾಮ ಪಂಚಾಯಿತಿ ಮತ್ತು ಬೂತ್ ಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ […]