ಬಿಟ್ಕಾಯಿನ್ ಸ್ಕ್ಯಾಮ್ ಅಲ್ಲ. ಇದು ಬಿಟ್ ಕಾಯಿನ್ ಒಳಗೊಂಡ ಹಗರಣ

Wednesday, November 17th, 2021
Govinda-Karajola

ಬೆಂಗಳೂರು  : ಇದು ಸೈಬರ್ ಕ್ರೈಮ್ ಆಗಿದೆ. ಶ್ರೀಕಿ ಒಬ್ಬ ಹ್ಯಾಕರ್. ಸರ್ಕಾರಿ ಸೈಟ್ ಅನ್ನು ಹ್ಯಾಕ್ ಮಾಡಿಕೊಂಡಿರುವುದಾಗಿ ಆತನೇ ಹೇಳಿಕೊಂಡಿದ್ದಾನೆ. ಕಿಂಗ್ಪಿನ್ ಶ್ರೀಕಿಯನ್ನು ಬಿಟ್ಕಾಯಿನ್ ಬಳಕೆಯಿಂದ ಮಾದಕವಸ್ತು ಕಳ್ಳಸಾಗಾಣೆಗಾಗಿ NDPS ಕಾಯ್ದೆಯ ಅಡಿಯಲ್ಲಿ ಬಂಧಿಸಲಾಗಿದೆ. ಪ್ರತಿಪಕ್ಷಗಳು ಮಾಡುತ್ತಿರುವ ʼಬಿಟ್ಕಾಯಿನ್ʼ ಸ್ಕ್ಯಾಮ್ ಎನ್ನುವುದು ಒಂದು “ಭೂತ ಬಂತು ಭೂತ” ಎಂದು ಮಕ್ಕಳನ್ನು ಹೆದರಿಸುವ ಆಟಿಕೆಯಂತಿದೆ ಜಲಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಹೇಳಿದ್ದಾರೆ. ಭೂತ ಏನು ಎಂಬುದನ್ನು ಆಪಾದನೆ ಮಾಡುತ್ತಿರುವ ಪ್ರತಿಪಕ್ಷಗಳು ಮೊದಲು ಸಾಮಾನ್ಯಜನರಿಗೆ ಅರ್ಥ ಆಗುವ ಎಲ್ಲ […]

ನಾಳೆಯೇ (ಆಗಸ್ಟ್4 ರಂದು) ಹೊಸ ಮಂತ್ರಿ ಮಂಡಲ ರಚನೆ, ನೂತನ ಸಚಿವರ ಪ್ರಮಾಣ ವಚನ

Tuesday, August 3rd, 2021
bommai cm

ನವದೆಹಲಿ  : ಮಂತ್ರಿ ಮಂಡಲ ವಿಸ್ತರಣೆಯ ಅಂತಿಮ ಪಟ್ಟಿ ಸಿದ್ಧಗೊಂಡಿದ್ದು  ನಾಳೆ ಬುಧವಾರ (ಆಗಸ್ಟ್4)ರಂದು 26 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಹೈಕಮಾಂಡ್ ಹೇಳಿದ ತಿದ್ದುಪಡಿಗಳ ಜೊತೆಗೆ ಕೇಂದ್ರ ನಾಯಕರಿಗೆ ಒಲವಿರುವ ಒಂದಷ್ಟು ಮಂದಿಯನ್ನು ಸಚಿವರ ಪಟ್ಟಿಯಲ್ಲಿ ಸೇರಿಸಿ, ಅಂತೂ ಇಂತು ಒಪ್ಪಿಗೆ ಪಡೆದಿದ್ದಾರೆ, ಎರಡು ರಾತ್ರಿ, ಎರಡು ಹಗಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಸಿಎಂ ಬೊಮ್ಮಾಯಿ ಅವರು ನೂತನ ಸಚಿವರ ಪಟ್ಟಿಯೊಂದಿಗೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. […]

ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ

Sunday, July 25th, 2021
BS Yediyurappa

ಬೆಳಗಾವಿ : ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ (ಜು.25) ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ […]

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

Sunday, July 25th, 2021
Karajola

ಬಾಗಲಕೋಟೆ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾನಿಯುಂಟಾಗಿದ್ದು, ಮಿರ್ಜಿ, ಆಲಗುಂಡಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ ಒಂಟಿಗೋಡಿ, ಉತ್ತೂರು, ಸೇರಿದಂತೆ ವಿವಿಧ ಪ್ರದೇಶಗಳಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆಗಳ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಪರಿಶೀಲನೆ‌ ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಸಂತ್ರಸ್ತರಿಗೆ ಕೂಡಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆರೈಕೆ […]

ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಅನುಮೋದನೆ : ಶ್ರೀ ಗೋವಿಂದ ಕಾರಜೋಳ

Thursday, July 22nd, 2021
Karajola

ಬೆಂಗಳೂರು : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಪಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ ಉಕ್ಕಿ ಸಂಭವಿಸಬಹುದಾದ ಹಾನಿ ಪ್ರಮಾಣವನ್ನು ಕಡಿಮೆ […]

ಕಲ್ಲೋಳ ಬ್ಯಾರೇಜ್ ನಿರ್ಮಾಣ ಪ್ರಸ್ತಾವಕ್ಕೆ ಶೀಘ್ರ ಮಂಜೂರಾತಿ: ಗೋವಿಂದ ಕಾರಜೋಳ

Sunday, July 18th, 2021
Karjojala

ಬೆಳಗಾವಿ : ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್ ಹೊಸದಾಗಿ ನಿರ್ಮಿಸುವ 35 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಲಜೀವನ ಮಿಷನ್, ಬಹುಗ್ರಾಮ ಕುಡಿಯುವ ನೀರು, ಕೋವಿಡ್ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.18) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 1980 ರಲ್ಲಿ […]

ಜರ್ಮನ್ ಬಹುಕೌಶಲ್ಯ ಅಭಿವೃದ್ದಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸಚಿವಸಂಪುಟ ಅಸ್ತು : ಶ್ರೀ ಗೋವಿಂದ ಕಾರಜೋಳ

Thursday, July 15th, 2021
Govinda Karajola

ಬೆಂಗಳೂರು : ವಿಶ್ವ ಯುವ ಕೌಶಲ್ಯ ದಿನಾಚರಣೆಯ ದಿನವೂ ಆಗಿರುವ ಇಂದು ವೇಗವಾಗಿ ಬದಲಾಗುತ್ತಿರುವ ತಾಂತ್ರಿಕತೆಯಲ್ಲಿ ಕೌಶಲ್ಯ ವೃದ್ದಿಯ ಪ್ರಾಮುಖ್ಯತೆಗೆ ಅನುಗುಣವಾಗಿ ಬೆಳಗಾವಿಯಲ್ಲಿ ಈಗಾಗಲೇ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ […]

ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಸಚಿವರಿಗೆ ಅಭಿನಂದನೆ

Wednesday, July 7th, 2021
shobha

ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು. ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ […]

ಉಪವಿದ್ಯುತ್ ವಿತರಣಾ ಕೇಂದ್ರಗಳ ತ್ವರಿತ ನಿರ್ಮಾಣಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ

Saturday, July 3rd, 2021
karajola

ಬೆಂಗಳೂರು : ಸಮರ್ಪಕ ವಿದ್ಯುತ್ ವಿತರಣೆಗಾಗಿ ಈಗಾಗಲೇ ಮಂಜೂರಾಗಿರುವ ಉಪವಿದ್ಯುತ್ ವಿತರಣೆ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಿ, ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಾಸಸೌಧದಲ್ಲಿಂದು ನಡೆದ ಬಾಗಲಕೋಟೆ ಪ್ರಸರಣ ವಲಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ವಲಯದಲ್ಲಿ ಒಟ್ಟು ೪೧೬ ಉಪ ವಿದ್ಯುತ್ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ೧೩೫ ಉಪ ವಿದ್ಯುತ್ ವಿತರಣಾ ಕೇಂದ್ರಗಳು ಮಂಜೂರಾಗಿವೆ. […]

ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ : ಕಾರಜೋಳ

Wednesday, June 23rd, 2021
Karajola

ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ‌  ಗೋವಿಂದ ಕಾರಜೋಳ ತಿಳಿಸಿದರು. ಹಂತ ಹಂತವಾಗಿ ನೀರು‌ ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ […]