ಧರ್ಮಸ್ಥಳ : ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮ ಸಮಾಪನ
Sunday, December 1st, 2024ಉಜಿರೆ: ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಲಕ್ಷದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಕಲಾವಿದರು ಶ್ರದ್ಧಾ-ಭಕ್ತಿಯಿಂದ ವೈವಿಧ್ಯಮಯ ಕಲಾಸೇವೆಯನ್ನು ಅರ್ಪಿಸಿದರು. ದೇವಸ್ಥಾನ ವಠಾರ, ವಸ್ತುಪ್ರದರ್ಶನ, ಅಮೃತವರ್ಷಿಣಿ ಸಭಾಭವನ – ಎಲ್ಲೆಲ್ಲೂ ಭಕ್ತರ ಗಡಣವೇ ಇತ್ತು. ಭಾನುವಾರ ರಾತ್ರಿ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ಅಷ್ಟವಿಧಾರ್ಚನೆ ಪೂಜೆಯೊಂದಿಗೆ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಿತು. ವಸ್ತುಪ್ರದರ್ಶನ ಮಂಟಪದಲ್ಲಿ ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನರ್ದೇಶನದಲ್ಲಿ […]