ಕೊರೋನಾ ಪಾಸಿಟಿವ್ ಇದ್ದು ಮದುವೆ ಕಾರ್ಯಕ್ರಮಕ್ಕೆ ಹಾಜರಾದ ವಕೀಲ, ಪ್ರಕರಣ ದಾಖಲು
Friday, May 14th, 2021ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದು ಮದುವೆ ಕಾರ್ಯಕ್ರಮಕ್ಕೆ ಹಾಜರಾದ ಹಿನ್ನೆಲೆ ಬಂಟ್ವಾಳದ ನ್ಯಾಯವಾದಿಯೋರ್ವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿನಾಲ್ಕೂರು ಗ್ರಾಮದ ರಾಜೇಶ್ ಪೂಜಾರಿ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ. ಬಂಟ್ವಾಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇ.10ರಂದು ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಮೇ.11ರಂದು ರಾಜೇಶ್ ಮನೆಗೆ ತೆರಳಿದ ಆಶಾ ಕಾರ್ಯಕರ್ತೆಯರು ಕ್ವಾರೆಂಟೈನ್ ಆಗುವಂತೆ ಸೂಚಿಸಿದ್ದರು. ಆಶಾ ಕಾರ್ಯಕರ್ತೆಯರು ಮೇ.13ರಂದು ಮತ್ತೆ ಪರಿಶೀಲನೆಗೆ […]