ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಸಲು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಆಗ್ರಹ

Tuesday, March 8th, 2022
Manjunatha Bhandary

ಮಂಗಳೂರು  : ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಇಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಿಯಮ 330ರ ಅಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿರು. ಅಧಿವೇಶನದಲ್ಲಿ ಮಾತನಾಡಿದ ಅವರು ‘ಪ್ರಜಾ ಪ್ರಭುತ್ವದಲ್ಲಿ ಗ್ರಾಮ ಪಂಚಾಯತಿಯೇ ತಳಹದಿ. ಆ ತಳಹದಿಯನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ […]

ಬಜೆಟ್ ಅತ್ಯಂತ ನಿರಾಶಾದಾಯಕ – ಮಂಜುನಾಥ ಭಂಡಾರಿ

Friday, March 4th, 2022
Manjunatha Bhandary

ಮಂಗಳೂರು  : ಈ ವರ್ಷದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಗ್ರಾಮ ಪಂಚಾಯತಿಗೆ ಕೊಡುವಂತಹ ಅನುದಾನ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಬೇಕೆಂದು ಚುನಾಯಿತ ಪ್ರತಿನಿಧಿಗಳಾದ ನಾವು ಸರಕಾರದ ಮುಂದಿಟ್ಟ ಬೇಡಿಕೆಯನ್ನು ನಿರ್ಲಕ್ಷಿಸಿದ್ದಕ್ಕೆ ಅತ್ಯಂತ ಬೇಸರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಮಾರ್ಗಸೂಚಿಯಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೇ ಮಹತ್ವದ ಘೋಷಣೆಯಾಗಿಲ್ಲ ಹಾಗೂ ಈಗಾಗಲೇ ಇದ್ದ ಸರಕಾರಿ ಕಾಲೇಜುಗಳನ್ನು ನಡೆಸಲು ಸಾಧ್ಯವಾಗದ ಸರಕಾರ ಹಳೆಯ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಹೆಸರನ್ನು ಕರ್ನಾಟಕ […]

ಸೀಲ್ ಡೌನ್ ಇದ್ದರೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರು

Wednesday, June 16th, 2021
Subrahmanya

ಸುಬ್ರಹ್ಮಣ್ಯ : ಸೋಮವಾರದಿಂದ  ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಆಗಮಿಸುತ್ತಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಆನ್ ಲಾಕ್ ಇರುವುದರಿಂದ ಮತ್ತು ಮಂಗಳವಾರ ಆಶ್ಲೇಷ ನಕ್ಷತ್ರ ಇದ್ದುದರಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಸೋಮವಾರದಿಂದ ಸುಬ್ರಹ್ಮಣ್ಯ   ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು […]

ಗ್ರಾಮ ಪಂಚಾಯತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

Monday, March 2nd, 2020
madikeri-pratibatane

ಮಡಿಕೇರಿ : ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ವತಿಯಿಂದ ಹಂಡ್ಲಿ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ಎರಡು ವರ್ಷದಿಂದ ಗ್ರಾಮ ಪಂಚಾಯತಿ ಸಿಬ್ಬಂದಿಗಳ ವೇತನ ಬಾಕಿ ಉಳಿದಿದೆ. ಮೂರು ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ ಎರಡು ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. ಎರಡು ವರ್ಷಗಳಿಂದ ಎಂಟು ತಿಂಗಳು ಬಾಕಿಯಾಗಿದೆ. ಸಮಯಕ್ಕೆ ಸರಿಯಾಗಿ ವೇತನ ಸಿಗದೆ ಬಾದಾಮಿ ಹಾಗೂ ಚಿಂತಾಮಣಿ ತಾಲ್ಲೂಕಿನಲ್ಲಿ ತಲಾ ಒಬ್ಬರಂತೆ ಗ್ರಾಮ ಪಂಚಾಯತಿ […]