ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕಡಬ ನಿವಾಸಿ ಸ್ವದೇಶಕ್ಕೆ ವಾಪಾಸ್

Sunday, November 19th, 2023
sudi-hacker

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ನವೆಂಬರ್ 20ರಂದು ಸ್ವದೇಶಕ್ಕೆ ಆಗಮಿಸಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್‌ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಅಲ್ಲಿಅಲ್ಪಾನರ್‌ […]

ಮೈಸೂರು : ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

Tuesday, December 17th, 2019
apollo

ಮೈಸೂರು : ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕರೋರ್ವರ ಮೆದುಳು ನಿಷ್ಕ್ರೀಯಗೊಂಡ ಕಾರಣ ಅವರ ದೇಹದ ವಿವಿಧ ಅಂಗಾಂಗಗಳನ್ನು ಅವರ ಮನೆಯವರು ದಾನ ಮಾಡುವ ಮೂಲಕ ಚಂದ್ರಶೇಖರ್ ಸಾವಿನಲ್ಲೂ ಸಾರ್ಥಕತೆ ಕಾಣುವಂತೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಡಿ.14ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೈಸೂರು ನಿವೇದಿತಾ ನಗರದ 27ವರ್ಷದ ಚಂದ್ರಶೇಖರ್ ಎಂಬ ಯುವಕರೋರ್ವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ಚಕಿತ್ಸೆಗಾಗಿ ದಾಖಲಿಸಲಾಗಿತ್ತು. 24ಗಂಟೆಗಳ ಕಾಲ ತೀವ್ರ ನಿಗಾಘಟಕದಲ್ಲಿರಿಸಿ […]

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು..ಇಂದು ಶಿಕ್ಷೆ ಪ್ರಮಾಣ ಪ್ರಕಟ

Saturday, December 15th, 2018
atttempt

ಮಂಗಳೂರು: ನಾಲ್ಕು ವರ್ಷದ ಬಾಲಕಿ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಮೇಲಿನ‌ ಆರೋಪ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೊಕ್ಸೋ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕಂಕನಾಡಿ ನಿವಾಸಿ ಚಂದ್ರಶೇಖರ್ ಅಲಿಯಾಸ್ ರಾಜೇಶ್ (49) ಅಪರಾಧಿ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಈತನಿಗೆ ವಿವಾಹವಾಗಿ ಮಕ್ಕಳೂ ಇವೆ. ಈ ಹಿಂದೆ ಅಸೈಗೋಳಿ ಸಮೀಪದ ಗ್ರಾಮವೊಂದರಲ್ಲಿ ಈತ ವಾಸವಾಗಿದ್ದ ಸಂದರ್ಭ ಸಂತ್ರಸ್ತ ಬಾಲಕಿಯ ಮನೆಯವವರು ಪಕ್ಕದ ಮನೆಯಲ್ಲಿದ್ದರು. […]

ಬಿಜೆಪಿಗೆ ಬಿಗ್ ಶಾಕ್: ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷ..!

Thursday, November 1st, 2018
chandrashekar

ರಾಮನಗರ: ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ಚಂದ್ರಶೇಖರ್ ಗೆ ಟಿಕೆಟ್ ಕೊಟ್ಟಿದ್ದ ಬಿಜೆಪಿ ರಾಮನಗರದಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿತ್ತು. ನಿನ್ನೆಯವರೆಗೂ ಅಭ್ಯರ್ಥಿ ಪರ ಭಾರೀ ಪ್ರಚಾರ ಕೂಡ ನಡೆಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ತಾನು ಚುನಾವಣ ಕಣದಿಂದಲೇ ಹಿಂದಕ್ಕೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಗ್ […]

ಸ್ಕೂಟರ್-ಬಸ್ ನಡುವೆ ಡಿಕ್ಕಿ… ಸವಾರ ಸ್ಥಳದಲ್ಲೇ‌ ಸಾವು

Tuesday, March 27th, 2018
accident

ಮಂಗಳೂರು: ಸ್ಕೂಟರ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟರ್ ಸವಾರ ಸ್ಥಳದಲ್ಲೇ‌ ಸಾವಿಗೀಡಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ನಡೆದಿದೆ. ಕಲ್ಲೇರಿ ನಿವಾಸಿ ಚಂದ್ರಶೇಖರ್ ಮೃತ ಸವಾರ. ಚಂದ್ರಶೇಖರ್ ಮೇಲೆ ಬಸ್‌‌ ಹರಿದಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿರಿಯ ನಟ ಚಂದ್ರಶೇಖರ್ ಇನ್ನಿಲ್ಲ

Saturday, January 27th, 2018
chandrashekar

ಬೆಂಗಳೂರು: ಹಿರಿಯ ನಟ ‘ಎಡಕಲ್ಲು‌ ಗುಡ್ಡ’ ಚಿತ್ರದ ಖ್ಯಾತಿಯ ನಟ ಚಂದ್ರಶೇಖರ್ ಅವರು ಹೃದಯಾಘಾತದಿಂದ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಇವರು ಇಂದು ಮುಂಜಾನೆ ಹೃದಯಾಘಾತದಿಂದ ಕೆನಡಾದಲ್ಲಿ ‌ಇಹಲೋಕ ತ್ಯಜಿಸಿದ್ದಾರೆ. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಚಂದ್ರಶೇಖರ್‌, ವಿಷ್ಣುವರ್ಧನ್, ರಾಜ್‌ಕುಮಾರ್‌ ಸೇರಿದಂತೆ ಹಲವು ನಟರೊಂದಿಗೆ ನಟಿಸಿದ್ದರು. ನಮ್ಮ ಮಕ್ಕಳು, ಸಂಸ್ಕಾರ, ಪಾಪಪುಣ್ಯ, ವಂಶವೃಕ್ಷ, ಸೀತೆಯಲ್ಲ ಸಾವಿತ್ರಿ, ಎಡಕಲ್ಲು ಗುಡ್ಡದ ಮೇಲೆ, ಸಂಪತ್ತಿಗೆ ಸವಾಲ್‌ ಕಸ್ತೂರಿ ವಿಜಯ, ಸೊಸೆ ತಂದ ಸೌಭಾಗ್ಯ ಸೇರಿದಂತೆ ಇತ್ತೀಚಿನ ತಾರಕ್, ಶಿವಲಿಂಗ ಅಸ್ತಿತ್ವ ಮುಂತಾದ […]

ಭಾವಿ ಪತ್ನಿ ಆತ್ಮಹತ್ಯೆ ಮಾಡುವ ಮೊದಲು ತಾನೊಬ್ಬ ಸಲಿಂಗಕಾಮಿ ಎಂದಿದ್ದ

Thursday, February 16th, 2017
chandrashekar

ಮಂಗಳೂರು : ತನ್ನ ಭಾವಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ  ಕೆಲವು ದಿನಗಳ ಅಂತರದಲ್ಲಿ ಮದುವೆಯಾಗ ಬೇಕಿದ್ದ ಯುವಕನು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಚಲಿಯಾಂಗೋಡ್ ಎಂಬಲ್ಲಿ ನಡೆದಿದೆ. ಚಂದ್ರಶೇಖರ್ (38) ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕ. ಮಂಗಳೂರಿನ ನಾಗುರಿಯ ಕೃಷ್ಣ ಎಂಬುವರ ಮಗಳು ನಂದಿತಾಗೆ ಕಾಸರಗೋಡಿನ ಚಂದ್ರಶೇಖರ್ ಜೊತೆ ಮದುವೆ ನಿಶ್ಚಯವಾಗಿತ್ತು. ಅಂದುಕೊಂಡಂತೆ ನಡೆದಿದ್ದರೆ ಫೆ.13 ರಂದು ಇವರಿಬ್ಬರು ಸಪ್ತಪದಿ ತುಳಿಯುತ್ತಿದ್ದರು. ಆದರೆ ಮದುವೆ ಇನ್ನೇನು ಐದು ದಿನ ಬಾಕಿ ಇದ್ದಂತೆ ನಂದಿತಾ ಅವಳಿಗೆ ಕಾಲ್ ಮಾಡಿದ ಚಂದ್ರಶೇಖರ್, […]

ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಸ್ತರಣೆ

Monday, November 14th, 2016
Section-144

ಮಂಗಳೂರು: ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ಠಾಣಾ ವಾಪ್ತಿಯಲ್ಲಿ ವಿಧಿಸಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಸ್ತರಿಸಿರಲಾಗಿದೆ. ಅಲ್ಲದೆ ಈ ಪ್ರಕರಣಗಳನ್ನು ಬೇಧಿಸಲು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 13ರ ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 16ರ ರಾತ್ರಿ 10 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ. 144 […]

ಪಾರ್ಕಿಂಗ್ ಸ್ಥಳದಲ್ಲಿ ಮಳಿಗೆ ನಿರ್ಮಿಸಿ ಕಾನೂನು ಉಲ್ಲಂಘನೆ: ಚಂದ್ರಶೇಖರ್

Wednesday, October 5th, 2016
chandra-sekhar

ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ 194 ವಾಣಿಜ್ಯ ಕಟ್ಟಡಗಳು ಪಾರ್ಕಿಂಗ್ ಸ್ಥಳದಲ್ಲಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಪೈಕಿ ನಿಯಮ ಉಲ್ಲಂಘಿಸಿರುವ 69 ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಪತ್ರದ ಮೂಲಕ ಸೂಚಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳಾವಕಾಶವಿದ್ದರೂ ಅಲ್ಲಿ ಮಳಿಗೆ ನಿರ್ಮಿಸಿ ಕಾನೂನು ಉಲ್ಲಂಘಿಸಿರುವುದು ದೃಢಪಟ್ಟಿದೆ ಎಂದರು. 69 […]

ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ

Monday, October 3rd, 2016
Mangaluru dasara

ಮಂಗಳೂರು: ಅದ್ಧೂರಿ ಮಂಗಳೂರು ದಸರಾಕ್ಕೆ ಇಂದು ಪೊಲೀಸ್ ಕಮಿಷನರ್ ಚಂದ್ರಶೇಖರ್ ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದುಷ್ಟ ಸಂಹಾರದ ವಿಜಯೋತ್ಸವವನ್ನು ಆಚರಿಸುವ ದಸರಾ ಹಬ್ಬ ಸಮಾಜಕ್ಕೆ ಸಂದೇಶವನ್ನು ಸಾರಿದೆ. ಜನರು ದುಷ್ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕೆಂದು ಸಂದೇಶ ನೀಡಿದರು. ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನದ ಆವರಣದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸುವ ಮೂಲಕ ಇಂದಿನಿಂದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ನಗರ ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡಿದೆ.