ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Friday, September 17th, 2021
Shobha Karandlaje

ಉಡುಪಿ : ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ, ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳಾಗಿವೆ ಅವುಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿಂ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು ಅಕ್ರಮ ಸ್ಥಳದಲ್ಲಿ ಶೃದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದು ಅವರು ಮನವಿ ಮಾಡಿದರು. ಜನರ ನಂಬಿಕೆ, ಭಕ್ತಿ  ಭಾವನೆಗೆ ನೋವಾದಾಗ […]

ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ

Saturday, October 17th, 2020
Mysuru Dasara

ಮೈಸೂರು:   ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 7:4ರಿಂದ 8:15ರ  ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ […]

ಅಂತೂ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಜಿ.ಟಿ.ದೇವೇಗೌಡ ಯಶಸ್ವಿ!

Tuesday, June 12th, 2018
G-T-Devegowda

ಬೆಂಗಳೂರು: ನಾನು ಕಲಿತದ್ದು 8 ನೇ ತರಗತಿ ನನಗೆ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಪಟ್ಟು ಹಿಡಿದಿದ್ದ ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಕೊನೆಗೂ ತಮ್ಮ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಜಿಟಿಡಿ ಮಾತುಕತೆ ನಡೆಸಿ ಖಾತೆ ಬದಲವಾಣೆಯನನು ಖಚಿತ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ ಖಾತೆ ಬದಲಾವಣೆ ಇವತ್ತು ನಾಳೆ ಅಂತಿಮವಾಗುತ್ತದೆ. ರೈತರಿಗೆ ಹತ್ತಿರವಾಗಿರುವ ಖಾತೆ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೆ ಈಗ ನೀಡಿರುವ ಖಾತೆಯಲ್ಲಿ ಪ್ರವೇಶ […]

ಚಾಮುಂಡೇಶ್ವರಿಯಲ್ಲಿ ಸಿಎಂಗೆ ಭಾರಿ ಮುಖಭಂಗ…!

Tuesday, May 15th, 2018
siddaramaih-loss

ಮೈಸೂರು: ಸಿಎಂ ತವರು ಜಿಲ್ಲೆಯಲ್ಲಿ ಈ ಭಾರಿ ಮುಖ್ಯಮಂತ್ರಿ ಅವರಿಗೇ ಮುಖಭಂಗವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ 15 ಸಾವಿರಕ್ಕೂ ಮತಗಳ ಹಿನ್ನಡೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 19 ನೇ ಸುತ್ತಿನ ಕ್ಷೇತ್ರದಲ್ಲೂ ಜೆಡಿಎಸ್ 17,986 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ತಿ. ನರಸಿಪುರದಲ್ಲಿ ಸಿಎಂ ಆಪ್ತ ಸಚಿವ ಮಹದೇವಪ್ಪ ಅವರಿಗೂ ಹಿನ್ನಡೆಯಾಗಿದೆ. ಜೆಡಿಎಸ್ 52,143 ಕಾಂಗ್ರೆಸ್ 34,157 ಹುಣಸೂರು ವಿಶ್ವನಾಥ್ 31452 ಮಂಜುನಾಥ್ 21773 ತಿ. ನರಸೀಪುರ 6 ನೇ ಸುತ್ತು ಮುಕ್ತಾಯ. ಜೆಡಿಎಸ್‌ ಅಶ್ವಿನ್ ಕುಮಾರ್ 39586 […]

ಚಾಮುಂಡೇಶ್ವರಿಯಲ್ಲಿ ಸಿಎಂಗೆ ಹಿನ್ನಡೆ… ಎಲ್ಲಿ ಯಾರು ಮುನ್ನಡೆ ನೋಡಿ

Tuesday, May 15th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಜೆಡಿಎಸ್‌ನ ಜಿ.ಟಿ. ದೇವೆಗೌಡ ಮುನ್ನಡೆಯಲ್ಲಿದ್ದಾರೆ. ಇದೇ ವೇಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ ಶ್ರೀರಾಮುಲು ಹಿನ್ನಡೆ ಅನುಭಿಸಿದ್ದಾರೆ. ಮತ ಅಂಚೆ ಶೃಂಗೇರಿ ಬಿಜೆಪಿ ಡಿ.ಎನ್.ಜೀವರಾಜ್ ಮುನ್ನಡೆ ಚಿಕ್ಕಮಗಳೂರು ಸಿ.ಟಿ.ರವಿ ಬಿಜೆಪಿ ಮುನ್ನಡೆ ಮೂಡಿಗೆರೆ ವಿಧಾನಸಭೆ ಕ್ಷೇತ್ರ ಬಿಜೆಪಿ ಮೊದಲನೇ ಸುತ್ತು 1634 ಮತಗಳ ಮುನ್ನಡೆ ತರೀಕೆರೆ ಪಕ್ಷೇತರ ಅಭ್ಯರ್ಥಿ ಜಿ.ಹೆಚ್.ಶ್ರೀನಿವಾಸ್ ಮುನ್ನೆಡೆ ಕಡೂರು ಜೆಡಿಎಸ್ ವೈಎಸ್ ವಿ ದತ್ತಾ ಮುನ್ನೆಡೆ ಶ್ರೀನಿವಾಸ್ ಮುನ್ನೆಡೆ : 400 ಮತಗಳು […]

ಮೈಸೂರು ದಸರಾ ಜಂಬೂ ಸವಾರಿ

Thursday, October 6th, 2011
Mysore-Dasara

ಮೈಸೂರು : ವೈಭವಯುತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಗಣ್ಯರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು 750ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಬಲರಾಮ ಆನೆಗಳಾದ ಸರಳ ಹಾಗೂ ಮೇರಿ ಮತ್ತು ಅಶ್ವಪಡೆಯೊಂದಿಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಉಸ್ತುವಾರಿ ಸಚಿವ ರಾಮದಾಸ್, ಮೇಯರ್ ಪುಷ್ಪಲತಾ ಚಿಕ್ಕಣ್ಣರವರಿಗೆ ತಮ್ಮ ಸೊಂಡಿಲನೆತ್ತಿ ಗಣ್ಯರಿಗೆ ಗೌರವಸಲ್ಲಿಸಿದವು. ಈ ಸಂದರ್ಭ ಕುಶಾಲತೋಪು ಸಿಡಿಸಲಾಯಿತು. ಬಳಿಕ ಅಂಬಾರಿಯನ್ನು ಹೊತ್ತು ರಾಜಗಾಂಭೀರ್ಯದಲ್ಲಿ […]

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ

Monday, October 18th, 2010
ಮೈಸೂರು ದಸರಾ

ಮೈಸೂರು : 400 ವರ್ಷಗಳ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ  ಭಾನುವಾರ ಮಧ್ಯಾಹ್ನ 1.45 ಕ್ಕೆ  ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು .  750 ಕಿ.ಗ್ರಾಂ. ತೂಕದ ಬಂಗಾರದ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿಗೆ ಹಸಿರು ಶಾಲು ಹೊದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಪುಷ್ಪ ಸಮರ್ಪಣೆ ಮಾಡಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಅಂಬಾರಿ ಹೊತ್ತಿದ್ದ ಬಲರಾಮ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಬಲರಾಮನ ಹಿಂದೆ ಸುಂದರವಾಗಿ ಅಲಂಕೃತಗೊಂಡ ಆನೆಗಳು ಜಂಬೂ ಸವಾರಿಯಲ್ಲಿ […]