ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ₹1 ಲಕ್ಷ ಪರಿಹಾರ ವಿತರಿಸಿದ ಸಚಿವ ಡಾ.ಕೆ.ಸುಧಾಕರ್

Thursday, August 5th, 2021
Sudhakar

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನೊಂದ ಕುಟುಂಬಗಳ‌ ಮನೆಗೆ ಭೇಟಿ ಕೊಟ್ಟ ಸಚಿವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ನೀಡಿದರು. ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ […]

107 ವರ್ಷದ ಈ ಅಜ್ಜಿ ಕೊರೊನಾ ಜಯಿಸಿದ್ದು ಹೇಗೆ ಗೊತ್ತಾ?

Tuesday, May 25th, 2021
kalamma

ಬೆಂಗಳೂರು : ಚಿಕ್ಕಬಳ್ಳಾಪುರ ಮೂಲದ 107 ವರ್ಷದ ವೃದ್ಧೆಯೊಬ್ಬರು ಸೋಂಕಿನ ವಿರುದ್ಧ ಹೋರಾಡಿ ಸಂಪೂರ್ಣ ಗುಣಮುಖರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟತಾಲೂಕಿನ ಯನ್ನೂರು ಗ್ರಾಮದ ಕಾಳಮ್ಮ (107) ಸೋಂಕು ಗೆದ್ದವರು. ನಗರದ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಯಲ್ಲಿ ಶತಾಯುಷಿ ಕಾಳಮ್ಮ ಅವರಿಗೆ ಚಿಕಿತ್ಸೆ ನೀಡಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾಜ್‌ ಮಾಡಿ ಮನೆಗೆ ಕಳುಹಿಸಲಾಯಿತು. ವೈದ್ಯರ ಚಿಕಿತ್ಸೆ ಹಾಗೂ ಇಚ್ಛಾಶಕ್ತಿಯಿಂದ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿರುವ ಕಾಳಮ್ಮ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಯನ್ನೂರಿನಲ್ಲಿ ನೆಲೆಸಿರುವ ಕಾಳಮ್ಮ ಅವರಿಗೆ […]

ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ

Saturday, March 20th, 2021
Amzad

ಚಿಕ್ಕಬಳ್ಳಾಪುರ:  ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಶನಿವಾರ ನಡೆದಿದೆ. ಕೊಲೆಯಾದ ಕಾಂಗ್ರೆಸ್ ಮುಖಂಡ ಅಮಜದ್ (43) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಅಮಜದ್ ನನ್ನು ಒಮ್ನಿ ಕಾರಿನ ಮೂಲಕ ಹಿಂಬಾಲಿಸಿ ಬಂದ ಅಪರಿಚಿತರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಅಮಜದ್ ಮಿನಲ್ ಹಿನ್ನೆಲೆ ಹೊಂದಿದ್ದವನಾಗಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿದ್ದ. ಶಿಡ್ಲಘಟ್ಟ ನಗರ ಪೊಲೀಸರು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆಯ ಉದ್ದೇಶ ತಿಳಿದುಬಂದಿಲ್ಲ. ಹಾಡಹಗಲೇ […]

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ, ಒಂದೇ ದಿನ 143 ಹೊಸ ಪ್ರಕರಣ ಪತ್ತೆ,

Thursday, May 21st, 2020
Corona Bengaluru

ಬೆಂಗಳೂರು:  ಗುರುವಾರ ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 13, ಮಂಡ್ಯದಲ್ಲಿ 33, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 9, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ 1, ಉತ್ತರ ಕನ್ನಡದಲ್ಲಿ 7, ಉಡುಪಿಯಲ್ಲಿ 26, ಬಳ್ಳಾರಿಯಲ್ಲಿ 11, ತುಮಕೂರಿನಲ್ಲಿ 1, ಗದಗ 2, ರಾಯಚೂರಿನಲ್ಲಿ 5, ಕೋಲಾರದಲ್ಲಿ 2 ಪ್ರಕರಣಗಳು ವರದಿಯಾಗಿವೆ. ಜೊತೆಗೆ, ಕ್ವಾರಂಟೈನ್ ಗೆ ಒಳಪಟ್ಟಿರುವ ಅನ್ಯ ರಾಜ್ಯ ಮತ್ತು ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ ಐವರಲ್ಲಿ […]

ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು ಎಂದು ಹೆಂಡತಿಯನ್ನು ಕೊಲೆ ಮಾಡಿದ ಗಂಡ

Monday, May 11th, 2020
chicken-cury

ಚಿಕ್ಕಬಳ್ಳಾಪುರ  :  ಗಂಡನೊಬ್ಬ ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು  ಎಂದು ಆರೋಪಿಸಿ ಹೆಂಡತಿಯನ್ನೇ  ಕೊಲೆ  ಮಾಡಿದ ಘಟನೆ  ಬಾಗೆಪಲ್ಲಿ ಜಿಲ್ಲೆಯ   ಹೋಶಹುಡಾಯಾ (ಉಪ್ಪಕುಂಟೆ) ಗ್ರಾಮದಲ್ಲಿ ನಡೆದಿದೆ. ಘಟನೆಗೆ  ಸಂಬಂಧಿಸಿದಂತೆ ಚೆಲೂರ್ ಪೊಲೀಸರು ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ಬಾಲಚಂದ್ರ ಚೆಲೂರು (28) ಅವರ ಪತ್ನಿ ಮಧುರಾ (24) ಎಂದು ಗುರುತಿಸಲಾಗಿದೆ. ದಂಪತಿಗೆ 11 ತಿಂಗಳ ಮಗು ಇದೆ. ಮೂಲಗಳ ಪ್ರಕಾರ, ಆಲ್ಕೊಹಾಲ್ ವ್ಯಸನಿಯಾಗಿರುವ ಬಾಲಚಂದ್ರ ಆಕೆ ಸಿದ್ಧಪಡಿಸಿದ ಮಾಂಸಾಹಾರಿ  ಪದಾರ್ಥ ತುಂಬಾ ಉಪ್ಪು […]

ಚಿಕ್ಕಬಳ್ಳಾಪುರ : ಹೊಸ ಜಿಲ್ಲಾಧಿಕಾರಿಯಾಗಿ ಆರ್. ಲತಾ ಅಧಿಕಾರ ಸ್ವೀಕಾರ

Thursday, August 29th, 2019
R.latha

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಆರ್ . ಲತಾ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಜಿಲ್ಲಾಧಿಕಾರಿ ಕಛೇರಿಯಲ್ಲಿ ದಾಖಲಾತಿಗಳಿಗೆ ಸಹಿ ಮಾಡಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಆರ್ ಲತಾ ಅವರನ್ನು ಆಗಸ್ಟ್ 27ರಂದು ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ನೂತನ […]

ನವವಿವಾಹಿತೆ ಆತ್ಮಹತ್ಯೆಗೆ ಶರಣು: ಪತಿಯೇ ಕೊಲೆ ಮಾಡಿದ ಆರೋಪ

Thursday, November 22nd, 2018
murdered

ಬೆಂಗಳೂರು: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ರೋಜಾ (18) ನೇಣು ಬಿಗಿದುಕೊಂಡವಳು. ಈಕೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ನಿವಾಸಿಯಾಗಿದ್ದು, 3 ತಿಂಗಳ ಹಿಂದೆ ರೋಜಾ ಮತ್ತು ಆಕೆಯ ಗಂಡ ಬಾಬಜಾನ್ ಬ್ಯಾಟರಯನಪುರ ಬಳಿ ವಾಸವಾಗಿದ್ದರು. ಬಾಗೇಪಲ್ಲಿ ನಿವಾಸಿಯಾದ ಬಾಬಜಾನ್ 1 ವರ್ಷದ ಹಿಂದೆ ರೋಜಾಳನ್ನ ಪ್ರೀತಿಸಿ ಜಾತಿ ವಿರೋಧದ ಮಧ್ಯೆಯು ಮದುವೆಯಾಗಿದ್ದು, ಬಳಿಕ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ರೋಜಾ ನೇಣಿಗೆ ಶರಣಾಗಿದ್ದಾಳೆ. ಇನ್ನು […]

ಇಂದಿನಿಂದ ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ

Friday, November 2nd, 2018
bengalore

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೂ ಕೂಲ್ ಕೂಲ್ ವಾತಾವರಣ ಇದೆ. ಇದೇನಪ್ಪ ಮಳೆ ಬರೋ ಹಾಗಿದೆಯಲ್ಲ ಅಂತೆಲ್ಲ ನೀವು ಅನ್ಕೊಂಡ್ರೆ ನಿಮ್ಮ ಊಹೆ ಸರಿ. ಹೌದು, ಇಂದಿನಿಂದ ಹಿಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಆಗಲಿದೆ. ನಿನ್ನೆಯೇ ಕೇರಳ ಹಾಗೂ ತಮಿಳುನಾಡಿಗೆ ಮಳೆಯಾಗಿದ್ದು, ಇಂದು ರಾಜ್ಯಕ್ಕೆ ಪ್ರವೇಶ ಆಗಲಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಾದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ […]

ಚಲಿಸುತ್ತಿದ್ದ ವ್ಯಾನ್‌ಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು

Friday, September 14th, 2018
maruthi-van

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಮಾರುತಿ ವ್ಯಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಶಾದಿಮಹಲ್ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಚಾಲಕ ವ್ಯಾನ್‌ ಬಿಟ್ಟು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ಸಂಬಂಧ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಟ್ಟದ ಪ.ಪೂ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾಟ, ಆಳ್ವಾಸ್ ಬಾಲಕಿಯರಿಗೆ ಪ್ರಶಸ್ತಿ

Tuesday, November 7th, 2017
alvas

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಬೆಥನಿ ಪದವಿಪೂರ್ವ ಕಾಲೇಜು ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನೆಲ್ಯಾಡಿಯಲ್ಲಿ ಬಡೆದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಬಾಕಿಯರ ತಂಡವು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಫೈನಲ್‌ನಲ್ಲಿ ಆಳ್ವಾಸ್ ಬಾಲಕಿಯರ ತಂಡವು ಸೈಂಟ್ ಅಲೋಶಿಯಸ್ ಪ.ಪೂ. ಕಾಲೇಜು ತಂಡವನ್ನು ೨೮-೫ ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ರಾಜ್ಯ ಮಟ್ಟದ ಪಂದ್ಯಾಟವು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ.