ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ

Friday, May 21st, 2021
KFCC

ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ: ದರ್ಶನ್ ಅಕ್ರೋಶ

Thursday, September 8th, 2016
dharshan

ಮಂಡ್ಯ: ಕರ್ನಾಟಕದ ರೈತರು, ಜನತೆಯ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ. ಮಹದಾಯಿ ವಿಚಾರದಲ್ಲೂ ಹೀಗೆಯೇ ಆಗಿತ್ತು. ಈಗ ಮತ್ತೆ ಕಾವೇರಿ ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಚಿತ್ರನಟ ದರ್ಶನ್ ಅಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಚಿತ್ರನಟರು ನಡೆಸಿದ ಕಾವೇರಿ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್‌, ಕನ್ನಡದ ಜನ ತುಂಬಾ ಹೃದಯ ವೈಶಾಲ್ಯತೆ ಉಳ್ಳವರು ಎಂಬ ಕಾರಣಕ್ಕೆ ನಿರಂತರ ದಬ್ಬಾಳಿಕೆ ನಡೆಯುತ್ತಲೇ ಇದೆ. ಇದು ಸರಿಯಲ್ಲ. ನಾವೇನು ಬೆಳೆ ಬೆಳೆಯಲು ನೀರು ಕೇಳುತ್ತಿಲ್ಲ. ಕುಡಿಯಲು ನೀರು ಕೇಳುತ್ತಿದ್ದೇವೆ. […]

ಡಬ್ಬಿಂಗ್ ಬಗ್ಗೆ ಪುನೀತ್ ರಾಜ್ ಕುಮಾರ್ ಹೇಳಿದ್ದೇನು?

Tuesday, January 28th, 2014
Punith

ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಡಬ್ಬಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಡಾ.ರಾಜ್ ಕುಮಾರ್ ವೇದಿಕೆಯಲ್ಲಿ ಮಾತನಾಡುತ್ತಿದ್ದರು. ಡಬ್ಬಿಂಗ್ ಯಾಕೆ ಬೇಡ ಎಂಬುದನ್ನು ಅವರು ಬಹಳ ಸಂಯಮದಿಂದ ಹೇಳಿದರು. ಓವರ್ ಟು ಪುನೀತ್ ರಾಜ್ ಕುಮಾರ್… ನಾವು ಯಾರನ್ನೂ ದ್ವೇಷಿಸುತ್ತಿಲ್ಲ. ಯಾವ ಭಾಷೆಯನ್ನೂ ದ್ವೇಷಿಸುತ್ತಿಲ್ಲ. ನಮಗೆ ಎಲ್ಲರೂ ಬೇಕು. ಏಕೆಂದರೆ ಚಿತ್ರರಂಗ ಎಂದರೆ ಒಂದು ಕುಟುಂಬ ಇದ್ದಂತೆ. ಕಲಾವಿದರು ಇಲ್ಲಿರಬಹುದು, ತಮಿಳುನಾಡಿನಲ್ಲಿರಬಹುದು ಎಲ್ಲಿ ಬೇಕಾದರೂ ಇರಬಹುದು. ಇದು ಒಂದು ಕುಟುಂಬ. […]

ಕಡಲ್ ನಲ್ಲಿ ಹುಡುಕಬೇಕಾದ ಮಣಿರತ್ನಂ !

Wednesday, February 13th, 2013
Mani Ratnam

ಮಂಗಳೂರು : ಆ ನಿರ್ದೇಶಕನ ಮೊದಲ ಸಿನಿಮಾವದು. ಚೊಚ್ಚಲ ಹೆರಿಗೆಯನ್ನು ನಿರೀಕ್ಷಿಸುತ್ತಿರುವ ಗರ್ಭಿಣಿಯ ಪ್ರಸವ ವೇದನೆಯ ಕಾಲವದು. ಬೆಂಗಳೂರಿನ ಕೆಂಪೇಗೌಡ ಸರ್ಕಲ್ ನಲ್ಲಿರುವ ಥಿಯೇಟರ್ ಒಳಗೆ ಅಳುಕುತ್ತಲೇ ಕಾಲಿಟ್ಟ ಆ ನಿರ್ದೇಶಕನ ದುಗುಡವನ್ನು ಯಾರೂ ಗುರುತಿಸಲಿಲ್ಲ. ಅಸಲಿಗೆ ಆತ ಒಬ್ಬ ನಿರ್ದೇಶಕನೆಂದೇ ಅಲ್ಲಿಯವರೆಗೆ ಗೊತ್ತಿರಲಿಲ್ಲ. ಅದೊಂದು ಆರಂಭ ಅಷ್ಟೇ. ಆನಂತರ ಆ ನಿರ್ದೇಶಕನಿಗೆ ತನ್ನ ಸಿನಿಮಾಕ್ಕೆ ಪ್ರೇಕ್ಷಕರನ್ನು ಹುಡುಕುವುದು ಕಷ್ಟವಾಗಲಿಲ್ಲ. ಪ್ರೇಕ್ಷಕರೇ ಆ ನಿರ್ದೇಶಕನ ಸಿನಿಮಾವನ್ನು ಹುಡುಕಿಕೊಂಡು ಬಂದರು. ಆ ನಿರ್ದೇಶಕನೇ ಮಣಿರತ್ನಂ. ಮಣಿಯ ಚಿತ್ರಗಳು ಉಳಿದ […]