ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ: ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ!

Monday, November 11th, 2024
court

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಪ್ರಕಾಶ್ ನಾಯಕ್ ಅವರಿಗೆ ಮತದಾನದ ಹಕ್ಕು ಮತ್ತು ಸ್ಪರ್ಧಿಸುವ ಹಕ್ಕನ್ನು ನಿರಾಕರಿಸಲಾಗಿತ್ತು. ಈ ಷರಾ ಕಾನೂನುಬಾಹಿರವಾಗಿದ್ದು, ಈ ಷರಾವನ್ನು ತೆಗೆದುಹಾಕುವಂತೆ ಕೋರಿ ಪ್ರಕಾಶ್ ನಾಯಕ್, ಸಂಘದ ಜವಾಬ್ದಾರಿಯುತ ಪ್ರತಿನಿಧಿಗೆ ಮತ್ತು […]

ಅಜಿತ್ ಕುಮಾರ್ ರೈ ಮಾಲಾಡಿಯಿಂದ ಚುನಾವಣಾಧಿಕಾರಿ, ಪೊಲೀಸ್ ಇಲಾಖೆಗೆ ದೂರು

Wednesday, March 20th, 2019
Ajith Kumar

ಮಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದ್ವೇಷದಿಂದ ಅಥವಾ ರಾಜಕೀಯ ಲಾಭಗಳನ್ನು ಪಡೆಯುವ ಉದ್ದೇಶಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪಸರಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ. ತನ್ನನ್ನು ಎಲ್ಲ ರಾಜಕೀಯ ಪಕ್ಷದ ಅಭ್ಯರ್ಥಿಗಳೂ ಸಂಪರ್ಕಿಸಿದ್ದಾರೆ. ಆದರೆ, ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆಯನ್ನು ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದೇನೆ. ಸಂಘವು ಯಾವುದೇ ವ್ಯಕ್ತಿ, ಪಕ್ಷ ಅಥವಾ […]

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಏರ್ಪಡಿಸಲು ಆದೇಶ

Monday, April 11th, 2016
Eelection Commission

ಕಾಸರಗೋಡು : ವಿಧಾನಸಭಾ ಚುನಾವಣೆಯ ಅಂಗವಾಗಿ ಕಾಸರಗೋಡು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲೂ ಅಗತ್ಯದ ಮೂಲಭೂತ ಸೌಲಭ್ಯಗಳನ್ನು ಎ.30 ರೊಳಗೆ ಖಚಿತಪಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಇ.ದೇವದಾಸನ್ ತಿಳಿಸಿದ್ದಾರೆ. ಕಾಸರಗೋಡು ಕಲೆಕ್ಟರೇಟ್‌ನ ಮಿನಿ ಕಾನರೆನ್ಸ್ ಹಾಲ್‌ನಲ್ಲಿ ಜರಗಿದ ಚುನಾವಣಾ ಸೆಕ್ಟರಲ್ ಆಫೀಸರ್‌ಗಳ ಅವಲೋಕನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶಿಸಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ಶೌಚಾಲಯ, ರ‍್ಯಾಂಪ್, ಕುಡಿಯುವ ನೀರು, ಪೀಠೋಪಕರಣಗಳು, ಗಾಲಿ ಕುರ್ಚಿ, ಪ್ರಥಮ ಚಿಕಿತ್ಸೆ , ವಿದ್ಯುತ್, ದೂರವಾಣಿ ಮೊದಲಾದ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಬೇಕಾಗಿದೆ. ಶೌಚಾಲಯದ ವ್ಯವಸ್ಥೆ […]

ಮಂಗಳೂರು ಪ್ರೆಸ್ ಕ್ಲಬ್ಬಿಗೆ ನೂತನ ಸಮಿತಿ

Wednesday, August 12th, 2015
Ronald Balepuni

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ 2015-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,ಕೋಶಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ರಾವ್ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಸುರೇಶ್ ಬೆಳಗಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಆರ್, ಕಿರಣ್ ಯು ಸಿರ್ಸಿಕರ್, ಮುಹಮ್ಮದ್ ಆರೀಫ್, ಇಬ್ರಾಹಿಂ ಅಡ್ಕಸ್ಥಳ, ಆತ್ಮ ಭೂಷಣ್, ರಾಜೇಶ್ ಶೆಟ್ಟಿ […]

ಜಿಲ್ಲೆಯಲ್ಲಿ ಒಟ್ಟು 1212 ಮತಗಟ್ಟೆಗಳು-183 ಅತೀ ಸೂಕ್ಷ್ಮ -ಎ.ಬಿ.ಇಬ್ರಾಹಿಂ

Saturday, May 23rd, 2015
GP election

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 29ರಂದು ಒಟ್ಟು 1212 ಮತಗಟ್ಟೆಗಳಲ್ಲಿ 227ಗ್ರಾಮ ಪಂಚಾತ್ ಗಳ ಒಟ್ಟು 3399 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 378 ಸೂಕ್ಷ್ಮ, 183 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 54 ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳು ಇವೆ. ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಮುಕ್ತ ಹಾಗೂ ನಿಷ್ಪಕ್ಷಪಾತ ಮತದಾನಕ್ಕೆ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ಚುನಾವಣಾಧಿಕಾರಿಗಳು, ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು […]

ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ ಒದಗಿಸುವಂತೆ ಮನವಿ

Thursday, April 3rd, 2014
Press Club

ಮಂಗಳೂರು : ಪತ್ರಕರ್ತರಿಗೆ ಅಂಚೆ ಮತ ಅಥವಾ ಚುನಾವಣಾ ಕರ್ತವ್ಯ ದೃಢಪತ್ರದ (ಇಡಿಸಿ) ಸೌಲಭ್ಯ ಒದಗಿಸುವಂತೆ ಕೋರಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ. ಕ. ಚುನಾವಣಾಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಬುಧವಾರ ಮನವಿ ನೀಡಲಾಯಿತು. ದ. ಕ. ಜಿಲ್ಲೆಯಲ್ಲಿ ನಕ್ಸಲ್‌ ಪೀಡಿತ ಪ್ರದೇಶವಿರುವುದರಿಂದ ಗ್ರಾಮೀಣ ಪ್ರದೇಶಗಳಿಗೆ ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡುವ ಅವಶ್ಯಕತೆ ಇರುತ್ತದೆ. ಚುನಾವಣೆ ದಿನದಂದು ಪತ್ರಕರ್ತರು ಬೆಳಗ್ಗಿನಿಂದ ರಾತ್ರಿ ವರೆಗೆ ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ […]

ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ

Tuesday, March 18th, 2014
Anil Zha

ಬೆಂಗಳೂರು : ಮತದಾನದ ಅವಧಿ ವಿಸ್ತರಣೆ ಮಾಡಲು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದ್ದು, ರಾಜ್ಯದ 28 ಲೋಕಾಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅನಿಲ್ ಕುಮಾರ್ ಝಾ, ಬೇಸಿಗೆ ಹಿನ್ನಲೆಯಲ್ಲಿ ಮತದಾನದ ಅವಧಿಯನ್ನು ಹೆಚ್ಚಿಸಲು ಮನವಿಗಳು ಬಂದಿದ್ದವು. ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಒಪ್ಪಿಗೆ ನೀಡಿದ್ದು, ಏ.17 ರಂದು […]

ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪೂಜಾರಿ ನಾಮ ಪತ್ರ ಸಿಂಧುಗೊಳಿಸಿದ ಚುನಾವಣಾಧಿಕಾರಿ

Tuesday, February 26th, 2013
Ganesh Pujari electoral nomination

ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪೂಜಾರಿ ಪಾಲಿಕೆಯ ಕಟ್ಟಡದಲ್ಲಿ ವಾಣಿಜ್ಯ ಮಳಿಗೆಯನ್ನು ಬಾಡಿಗೆ ಪಡೆದು ಬಾಡಿಗೆಯನ್ನು ಹಲವು ತಿಂಗಳುಗಳಿಂದ ಪಾವತಿಸುತ್ತಿಲ್ಲ ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಹಾಗೂ ನಾಮ ಪತ್ರವನ್ನು ತಿರಸ್ಕರಿಸಬೇಕು ಎಂದು ಸೋಮವಾರ ಬಿಜೆಪಿಯ ಅಭ್ಯರ್ಥಿ ನವೀನಚಂದ್ರ ಚುನಾವಣಾಧಿಕಾರಿಯವರಲ್ಲಿ ಕೇಳಿಕೊಂಡಿದ್ದರು. ಇದಕ್ಕೆ ಚುನಾವಣಾಧಿಕಾರಿಯು ಮಂಗಳವಾರ ಸರಿಯಾದ ದಾಖಲೆ ಪತ್ರಗಳನ್ನು ಸಲ್ಲಿಸುವಂತೆ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆ ಬಿಜೆಪಿಯ ಅಭ್ಯರ್ಥಿ ನವೀನಚಂದ್ರ ಹಾಗೂ ಅವರ ಕಾನೂನು ಸಲಹೆಗಾರರು ಚುನಾವಣಾಧಿಕಾರಿಯವರ ಮುಂದೆ ದಾಖಲೆಗಳನ್ನು ಪ್ರಸ್ತುತ […]

ಪಾಲಿಕೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ನಾಮ ಪತ್ರ ತಿರಸ್ಕರಿಸುವಂತೆ ಜೆಡಿಎಸ್ ಒತ್ತಾಯ

Monday, February 25th, 2013
Congress candidate Appi

ಮಂಗಳೂರು :ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ವಿವಿಧ ಪಕ್ಷಗಳ ಅಭ್ಯರ್ಥಿ ಗಳು ನಾಮಪತ್ರ ಸಲ್ಲಿಸಿರುವ ಹಿನ್ನಲೆಯಲ್ಲೇ ಇಂದು ಪಾಲಿಕೆ ಕಚೇರಿಯಲ್ಲಿ ಜೆಪ್ಪು ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಪ್ಪಿ ಅವರ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಕಾರ್ಯಕರ್ತರು ಚುನಾವಣಾಧಿಕಾರಿ ಯವರನ್ನು ಒತ್ತಾಯಿಸಿದ ಘಟನೆ ನಡೆಯಿತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಪ್ಪಿಯವರು ಸರ್ಕಾರಿ ಸೇವೆಯಲ್ಲಿದ್ದರು ಹಾಗೂ ಉಚ್ಚಾಟಿತರಾಗಿರುವ ಬಗ್ಗೆ ತಮ್ಮಲ್ಲಿ ದಾಖಲೆಗಲಿದ್ದು, ಈ ಬಗ್ಗೆ ಅಪ್ಪಿಯವರು ನಾಮ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲಿಯೂ ಪ್ರಸ್ತಾಪವನ್ನು ಮಾಡಿಲ್ಲ […]