ಚುನಾವಣಾ ನೀತಿ ಸಂಹಿತೆ : ಪಿಲಿಕುಳ ಕಂಬಳ ಮುಂದೂಡಿಕೆ

Wednesday, November 13th, 2024
pilikula-kamabala

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ […]

ಗೋಳ್ತಮಜಲು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

Saturday, May 16th, 2015
jcb

ಮಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಕಲ್ಲಡ್ಕದಲ್ಲಿ ನಾಗರೀಕರು ಚರಂಡಿ ಸ್ವಚ್ಛಗೊಳಿಸಲು ಬಂದ ಜೆಸಿಬಿಯ ಕಾರ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿ ತಡೆದ ಘಟನೆ ನಡೆದಿದೆ. ನಾಗರೀಕರು 5 ವರ್ಷಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿ ಚರಂಡಿ ಸ್ವಚ್ಛಗೊಳಿಸಲು ಆಗ್ರಹಿಸಿದ್ದರೂ ಸ್ಪಂದಿಸದೆ ಇದೀಗ ಚುನಾವಣಾ ಅಧಿಸೂಚನೆ ಪ್ರಕಟವಾದ ನಂತರ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿರುವ ಗ್ರಾಮ ಪಂಚಾಯತ್ ನಡೆಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಚುನಾವಣಾ ನೀತಿ […]

ಮಹಾಯುದ್ಧ ಆರಂಭ 9 ಹಂತಗಳಲ್ಲಿ ಸಂಸತ್ ಚುನಾವಣೆ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Thursday, March 6th, 2014
Lok-Shaba

ನವದೆಹಲಿ: ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಒಂಬತ್ತು ಹಂತದ ಮತದಾನದ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 1ರಿಂದ ಅಸ್ತಿತ್ವಕ್ಕೆ ಬರಬೇಕಿರುವ ಹದಿನಾರನೇ ಲೋಕಸಭೆಗೆ 543 ಸದಸ್ಯರನ್ನು  81.4 ಕೋಟಿ ಜನರು ಆಯ್ಕೆ ಮಾಡಲಿದ್ದಾರೆ. ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಇನ್ನು ಮುಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಮನಸೋ ಇಚ್ಛೆ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಏಪ್ರಿಲ್ 7ರಿಂದ ಆರಂಭವಾಗುವ ಮತದಾನ ಪ್ರಕ್ರಿಯೆ ಒಂಬತ್ತು ಹಂತಗಳಲ್ಲಿ ನಡೆಯಲಿದೆ. ಲೋಕಸಭಾ […]

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

Saturday, March 2nd, 2013
dco election

ಮಂಗಳೂರು : ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ರೂಪಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೋರ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳ ನೋಂದಣಿ ಸಂಖ್ಯೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ನೀಡಿ ಅವರಿಂದ ಅನುಮತಿ ಪತ್ರ ಬರೆದು ಅದನ್ನು ಉಪಯೋಗಿಸುತ್ತಿರುವ ವಾಹನದಲ್ಲಿ ಅಂಟಿಸಿ ಚುನಾವಣಾ ಪ್ರಚಾರ ಮಾಡಲು ಅವಕಾಶವಿದೆ, ಚುನಾವಣಾ ಪ್ರಚಾರಕ್ಕಾಗಿ ಅನುಮತಿ ಪಡೆದ ಧ್ವನಿ ವರ್ಧಕಗಳನ್ನು […]