ಪಡೀಲಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇರುವ ಅಡೆತಡೆಯನ್ನು ನಿವಾರಿಸಲು ತ್ವರಿತ ಕ್ರಮ: ರಮಾನಾಥ ರೈ
Saturday, October 15th, 2016ಮಂಗಳೂರು: ನಗರ ಹೊರವಲಯದ ಪಡೀಲಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇರುವ ಅಡೆತಡೆಯನ್ನು ನಿವಾರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ನೂತನ ಯೋಜನೆಗಳ ಅನುಷ್ಠಾನ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಕಚೇರಿಗೆ ಪಡೀಲಿನಲ್ಲಿ ಅರಣ್ಯ ಇಲಾಖೆಯ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಇದಕ್ಕೆ ಬೇಕಾದ 40 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಚೆನ್ನೈನ ಹಸಿರು ಪೀಠಕ್ಕೆ ಪರಿಸರದ ಹೆಸರಿನಲ್ಲಿ ಕೆಲವರು ದೂರು […]