ವಿಶೇಷ ಹೂಡಿಕೆ ವಲಯ (SIR) ಕುರಿತು ಚರ್ಚೆಗೆ ಗುಜರಾತ್‌ ಭೇಟಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Friday, July 16th, 2021
Jagadish Shetter

ಗಾಂಧಿನಗರ : ಗುಜರಾತ್‌ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ದ ಕುರಿತು ಗುಜರಾತ್‌ ಸರಕಾರದೊಂದಿಗೆ ಚರ್ಚೆ ನಡೆಸಲು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದೇವೆ ಎಂದು ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್‌ ಶೆಟ್ಟರ್‌ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾಗಿರುವ ಧೋಲೇರಾ (SIR) ದೇಶದ ಮೊದಲ ವ್ಯವಸ್ಥಿತವಾಗಿ ಯೋಜನೆ ಮಾಡಿ ನಿರ್ಮಿಸಲಾಗುತ್ತಿರುವ ವಿಶೇಷ ಹೂಡಿಕೆ ವಲಯ. ದೇಶದ ಮೊದಲ […]

ಕೈಗಾರಿಕಾ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಶೀಘ್ರದಲ್ಲೇ ಜಂಟಿ ನಿರ್ಧಾರ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Thursday, July 8th, 2021
Shetter

ಬೆಂಗಳೂರು : ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು […]

ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಸಚಿವರಿಗೆ ಅಭಿನಂದನೆ

Wednesday, July 7th, 2021
shobha

ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು. ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ […]

ನಂ 1 ಕೈಗಾರಿಕಾ ಸ್ನೇಹೀ ರಾಜ್ಯವಾಗುವತ್ತ ದಾಪುಗಾಲು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Friday, July 2nd, 2021
Jagadish Shettar

ಬೆಂಗಳೂರು : ಕರೋನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತಿ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಹೇಳಿದರು. ಇಂದು ಬೆಂಗಳೂರು ನಗರದಲ್ಲಿ ಲಘು ಉದ್ಯೋಗ […]

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ

Thursday, July 1st, 2021
batteries

  ಬೆಂಗಳೂರು : ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ಇಂದು ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್‌ ಸೆಲ್‌ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್‌ ಶೆಟ್ಟರ್‌ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್‌ -ಅಯಾನ್‌ ಸೆಲ್‌ (Li-Ion) ಸೆಲ್‌ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ […]

ಕೇಂದ್ರ ಹಾಗೂ ರಾಜ್ಯಗಳು ಎಂಎಸ್‌ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Sunday, June 27th, 2021
jagadish-Shetter

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2020-2025 ರಲ್ಲಿ ಎಂಎಸ್‌ಎಂಇ ಗಳಿಗೆ ಹೆಚ್ಚಿನ ಸೌಲಭ್ಯ ಹಾಗೂ ಆದ್ಯತೆ ನೀಡಲಾಗಿದೆ. ಅಲ್ಲದೆ, ಸಾರ್ಥಕ್‌ ಯೋಜನೆಯ ಮೂಲಕ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಬಗ್ಗೆ ಉದ್ಯಮಿಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಲೆಕ್ಕಪರಿಶೋಧಕರ ಸಂಘದ ಪದಾಧಿಕಾರಿಗಳಿಗೆ ಕರೆ ನೀಡಿದರು. ಇಂದು ವಿಶ್ವ ಎಂಎಸ್‌ಎಂಇ ದಿನದ ಅಂಗವಾಗಿ ಬೆಂಗಳೂರು ಬ್ರಾಂಚ್‌ ಆಫ್‌ ಎಸ್‌ಐಆರ್‌ಸಿ – ದ ಇನ್ಸಿಟ್ಯೂಟ್‌ ಆಫ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ – […]

ರಾಜ್ಯದಲ್ಲಿ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರಕ್ಕೆ ಪತ್ರ

Thursday, June 17th, 2021
Jagadish Shetter

ಬೆಂಗಳೂರು : ದೇಶದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ರಾಜನಾಥ್‌ ಸಿಂಗ್‌ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಗುರುವಾರ  ಬೆಂಗಳೂರಿನಲ್ಲಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರೌಂಡ್‌ ಟೇಬಲ್‌ ವೆಬಿನಾರ್‌ ನಲ್ಲಿ […]

ಬೆಂಗಳೂರು ಛೇಂಬರ್‌ ಆಫ್‌ ಕಾಮರ್ಸ್‌ ಮುಂದಾಳತ್ವದಲ್ಲಿ ಬಿಬಿಎಂಪಿಗೆ ವಿವಿಧ ನೆರವು

Tuesday, June 15th, 2021
BCC

ಬೆಂಗಳೂರು :  ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರು ಬೆಂಗಳೂರು ಛೇಂಬರ್‌ ಆಫ್‌ ಕಾಮರ್ಸ್‌ ಮುಂದಾಳತ್ವದಲ್ಲಿ ವಿವಿಧ ಕಂಪನಿಗಳು ತಮ್ಮ ಸಿಎಸ್‌ಆರ್‌ ಅನುದಾನದ ಅಡಿಯಲ್ಲಿ ನೀಡುತ್ತಿರುವ 2 ಎಲ್‌ಪಿಜಿ ಬಳಸಿ ಶವದಹನ ಮಾಡುವ ಚಿತಾಗಾರಗಳನ್ನು, 5 ದೇಹವನ್ನು ಕಾಪಿಡುವ ಶೈತ್ಯಾಗಾರಗಳನ್ನು, ಐಟಿಐ ಕೋವಿಡ್‌ ಆಸ್ಪತ್ರೆಗೆ 10 ಆಕ್ಸಿಜನ್‌ ಕಾನ್ಸನ್ಟ್ರೇಟರ್‌ ಮತ್ತು ಜಿಗಣಿ ಸರಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ಮಂಗಳವಾರ  ಬಿಬಿಎಂಪಿ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಬಿಸಿಐಸಿ ಯ ಅಧ್ಯಕ್ಷರಾದ […]

ಟೈ ಹುಬ್ಬಳ್ಳಿ ಯಿಂದ ಕಿಮ್ಸ್ ಆಡಳಿತ ಮಂಡಳಿಗೆ ಅಂಬ್ಯುಲೆನ್ಸ್ ವಾಹನ ಹಸ್ತಾಂತರ

Monday, June 14th, 2021
Kims Ambulance

ಹುಬ್ಬಳ್ಳಿ :  ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ಟೈ ಹುಬ್ಬಳ್ಳಿ ಅವರ ವತಿಯಿಂದ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಲೆಂದು ನೀಡಿದ ಅಂಬ್ಯುಲೆನ್ಸ್ ವಾಹನವನ್ನು ಕಿಮ್ಸ್ ಆಡಳಿತ ಮಂಡಳಿಗೆ ಸಚಿವ ಜಗದೀಶ್ ಶೆಟ್ಟರ್ ಹಸ್ತಾಂತರಿಸಿದರು. ವೈದ್ಯಕೀಯ ತುರ್ತು ಅಗತ್ಯತೆಗಳನ್ನು ಪೂರೈಸಲು ಮತ್ತು ಪ್ರಥಮ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆಯುಳ್ಳ ಸುಸಜ್ಜಿತ ಅಂಬ್ಯುಲೆನ್ಸ್ ವಾಹನ ಇದಾಗಿದ್ದು, ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ತುಂಬಾ ಸಹಕಾರಿಯಾಗಲಿದೆ. ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡು, ಜನರ ಆರೋಗ್ಯ ದೃಷ್ಟಿಯಿಂದ ಇಂತಹ ಸೇವೆ ಒದಗಿಸುತ್ತಿರುವ ತಂಡಕ್ಕೆ […]

‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯಲ್ಲಿ ಶೆಟ್ಟರ್ ಚಾಲನೆ

Monday, May 31st, 2021
Shettar

  ಹುಬ್ಬಳ್ಳಿ: ಸೋಂಕು ತಗುಲಿದ ವ್ಯಕ್ತಿಗಳನ್ನು ತಕ್ಷಣ ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಲೇಬೇಕು. ಜೊತೆಗೆ ಸ್ಥಳದಲ್ಲಿಯೇ ಕೊರೊನಾ ಪರೀಕ್ಷೆ ಮಾಡುವ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕಿತರನ್ನು ಕಡಿಮೆ ಮಾಡುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಕಿಮ್ಸ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಧಾರವಾಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಧಾರವಾಡ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗಳ ಸಹಯೋಗದ ವೈದ್ಯರ […]