ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಭಾನುವಾರ ನಿರ್ಧಾರ, ಏಪ್ರಿಲ್ 20ರ ವರೆಗೆ ಯಥಾಸ್ಥಿತಿ
Friday, April 16th, 2021ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಆತಂಕಕಾರಿ ಮಟ್ಟದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುವ ಸೂಚನೆ ಇದೆ. ನಗರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಬಿಗಿಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಆದರೆ, ಏಪ್ರಿಲ್ 20, ಮಂಗಳವಾರದವರೆಗೂ ಈಗಿರುವ ಕ್ರಮಗಳನ್ನ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಜನತಾ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೊದಲಾದ ಕ್ರಮಗಳ ಬಗ್ಗೆ ಭಾನುವಾರ ನೋಡೋಣ. […]