ಗ್ರಾಮ ಪಂಚಾಯತ್ ಮತ್ತು ನಗರ, ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಲಸಿಕೆ ನೀಡಲು ಸರ್ಕಾರಿ ಆದೇಶ – ಸಚಿವ ಕೋಟ ಹೇಳಿಕೆ

Saturday, June 5th, 2021
kota srinivas poojary

ಮಂಗಳೂರು :  ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಮಾಡಿದ […]

ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದಾಗಿ ಆದಾಯ ತೆರಿಗೆ ಕಚೇರಿ ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ : ಖಾದರ್ :

Sunday, September 6th, 2020
UT Khader

ಮಂಗಳೂರು: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ‌. ಜಿಲ್ಲೆಯಲ್ಲಿದ್ದ ಆದಾಯ ತೆರಿಗೆ ಇಲಾಖೆಯನ್ನು ಗೋವಾಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಈ ಮೂಲಕ ಅಭಿವೃದ್ಧಿ ಆಗುವ ಜಿಲ್ಲೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಬದಲು ಇನ್ನಷ್ಟು ಸಂಕಷ್ಟಕ್ಕೆ ದೂಡುವ ಸ್ಥಿತಿಯನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು,  ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆದಾಯ ತೆರಿಗೆ ಕಚೇರಿ  ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ ಈ ಮೂಲಕ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ, ಇವತ್ತು ಸಂಜೆ ನಿರ್ಧಾರ

Wednesday, July 22nd, 2020
koto Srinivas

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ  ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ […]

ಕೊಡಗಿನ ಕುಲದೇವಿಯ ದರ್ಶನ ಪಡೆಯಲು ಬರುವವರಿಗೆ ಬಸ್ ವ್ಯವಸ್ಥೆಯೇ ಇಲ್ಲ : ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಭಕ್ತರ ಅಸಮಾಧಾನ

Monday, January 20th, 2020
talakaveri

ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಹಾಗೂ ಭಕ್ತರು ಒತ್ತಾಯಿಸಿದ್ದಾರೆ. ಭಕ್ತಿಯ ಕ್ಷೇತ್ರವಾಗಿರುವ ತಲಕಾವೇರಿಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಪ್ರತಿದಿನ ಸಾವಿರಾರು ಭಕ್ತರು ಬಂದು, ಹೋಗುತ್ತಾರೆ. ಆದರೆ ಭಕ್ತರ ಅನುಕೂಲಕ್ಕಾಗಿ ಯಾವುದೇ ಬಸ್ ವ್ಯವಸ್ಥೆಗಳಿಲ್ಲ. ಬೆಳಗ್ಗೆ 7.30ರಿಂದ 8.30ರ ಅವಧಿಯಲ್ಲಿ ಒಂದು ಖಾಸಗಿ ಮತ್ತು ಒಂದು ಕೆಎಸ್‌ಆರ್‌ಟಿಸಿ ಬಸ್ ಮಾತ್ರ ತಲಕಾವೇರಿಗೆ ತೆರಳುತ್ತದೆ. ಆ ನಂತರ ಯಾವುದೇ ಬಸ್‌ಗಳ ಸಂಚಾರ ಇರುವುದಿಲ್ಲ, ಇದರಿಂದ ಭಕ್ತರು […]

ಜನಪ್ರತಿನಿಧಿಗಳಿಗೆ ಮಗ್ಗುಲ ಮುಳ್ಳಾಗಲಿದಿಯೇ ಎತ್ತಿನ ಹೊಳೆ?

Monday, December 18th, 2017
janaprathinidi

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ.ಒಂದೆಡೆ ರಥಯಾತ್ರೆಗಳು ಆರಂಭವಾದರೆ ಇನ್ನೊಂಡೆದಡೆ ಪಾದಯಾತ್ರೆಗಳಿಗೆ ಚಾಲನೆ ನೀಡಲಾಗಿದೆ.ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯ ಎತ್ತಿನಹೊಳೆ ಯೋಜನೆ ಹೋರಾಟ ಮುಂಬರು ಚುನಾವಣೆಯ ಪ್ರಮುಖ ವಿಷಯವಾಗಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ಆರಂಭಗೊಂಡಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರು ದುಮುಕಲು ಮುಂದಾಗಿದ್ದಾರೆ.ಬಯಲು ಸೀಮೆಗೆ ನೀರುಣಿಸುವ ಉದ್ದೇಶಹೊಂದಿರುವ ಎತ್ತಿನಹೊಳೆ ಯೋಜನೆ ವಿವಾದದ ಮೂಲ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಎತ್ತಿನಹೊಳೆ ಹೋರಾಟಗಾರರು ಚುನಾವಣೆಗೆ ಸ್ಪರ್ದಿಸಲು ಮುಂದಾಗಿದ್ದಾರೆ. ಕರಾವಳಿಯನ್ನೇ […]