ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್ ಡಾ.ಆರತಿ ಕೃಷ್ಣ ಚಾಲನೆ

Saturday, October 17th, 2020
Kudroli dasara

ಮಂಗಳೂರು: ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್ ಆಗಿ ಕಾರ್ಯನಿರ್ವಹಿಸಿದ ಎನ್ಆರ್ಐ ಫೋರಂನ ಮಾಜಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಇಂದು ಮಧ್ಯಾಹ್ನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಚಾಲನೆ ನೀಡಿದರು. ನವದುರ್ಗಾ, ಗಣಪತಿ ಹಾಗೂ ಶಾರದಾ ಮಾತೆಯ ಮೂರ್ತಿಯ ಪ್ರತಿಷ್ಠಾಪನೆಯ ಬಳಿಕ ಡಾ‌.ಆರತಿ ಕೃಷ್ಣ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಬಾರಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವು ‘ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ ವಾಕ್ಯದಡಿ ಆಚರಣೆಯಾಗಲಿದೆ. ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ […]

ಸಿದ್ದರಾಮಯ್ಯರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು : ಜನಾರ್ದನ ಪೂಜಾರಿ ಆರೋಪ

Tuesday, November 5th, 2019
Janardhan-Poojary

ಮಂಗಳೂರು : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ, ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು, ಹೈಕಮಾಂಡ್ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ. ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೇಳಿಕೆ ಬಗ್ಗೆ ತನ್ನ ವಿರುದ್ಧ ದೂರು ನೀಡಲಿ, ಪಕ್ಷದಿಂದ ತೆಗೆದು ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನಪಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಕರೆದರೂ ನಾನು ಹೋಗುವುದಿಲ್ಲ. ಅವರು ಏನು […]

ರಾಬರ್ಟ್ ವಾದ್ರಾ ಗುಣಮುಖರಾಗಲು ಜನಾರ್ದನ ಪೂಜಾರಿ ವಿಶೇಷ ಪೂಜೆ

Monday, July 8th, 2019
poojary

ಮಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಳಿಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕದ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಸಚಿವ ಜನಾರ್ದನ ಪೂಜಾರಿ ಭಾನುವಾರ  ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಅನಾರೋಗ್ಯದಿಂದ ಬಳಲುತ್ತಿರುವ ಪ್ರಿಯಾಂಕಾ ಗಾಂಧಿಯ ಪತಿ ರಾಬರ್ಟ್ ವಾದ್ರಾ ಆದಷ್ಟು ಬೇಗ ಗುಣಮುಖರಾಗಲೆಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಮುಖ ದೇವರಾದ ಶಿವ ಹಾಗೂ ಪರಿವಾರ ದೇವರುಗಳಿಗೆ ಪೂಜೆ […]

ಜನಾರ್ದನ ಪೂಜಾರಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ !

Friday, March 15th, 2019
janardhan poojary

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ಕೊಟ್ಟರೆ ತಾನು ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ರಾಜೇಂದ್ರ ಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯರೂ ಅಲ್ಲ. ರಾಜ್ಯದ ಕೆಲವು ಕಾಂಗ್ರೆಸ್ ಮುಖಂಡರಿಗೆ ಹಣ ಕೊಟ್ಟು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾಗಲೂ ಯೋಗ್ಯರಲ್ಲದ ರಾಜೇಂದ್ರ ಕುಮಾರ್‌ಗೆ ಯಾವ ಕಾರಣಕ್ಕೂ ಹೈಕಮಾಂಡ್ ಟಿಕೆಟ್ […]

ನನ್ನನ್ನು ಕೊಲ್ಲುವುದರಿಂದ ತೃಪ್ತಿ ಸಿಗುವುದಾದರೆ ಕೊಲ್ಲಲಿ: ಜನಾರ್ದನ ಪೂಜಾರಿ

Monday, December 10th, 2018
janardhan-poojary

ಮಂಗಳೂರು: ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದು, ಈ ಹೇಳಿಕೆ ವಿರೋಧಿಸಿ ನನ್ನನ್ನು ಎನ್ಕೌಂಟರ್ ಮಾಡಿ ಸಾಯಿಸಬೇಕು ಎಂದು ವ್ಯಕ್ತಿ ಒಬ್ಬ ಹೇಳಿದ್ದಾನೆ. ಆತನಿಗೆ ಅದರಿಂದ ತೃಪ್ತಿ ಸಿಗುವುದಾದರೆ ನನ್ನನ್ನು ಕೊಲ್ಲಲ್ಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ […]

ಜನಾರ್ದನ ಪೂಜಾರಿ ಗಡಿಪಾರು ಮಾಡಿ ಎಂದವನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್​ ನಾಯಕರ ಮನವಿ

Friday, December 7th, 2018
j-r-lobo

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಗಡಿಪಾರು ಮಾಡಬೇಕೆಂದು ಆಡಿಯೋ ಸಂದೇಶ ಕಳುಹಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮಾಜಿ ಶಾಸಕರುಗಳ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲಾಯಿತು. ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತಂತೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿವೋರ್ವ ಅವರನ್ನು ಎನ್ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಸಂದೇಶ ಕಳುಹಿಸಿದ್ದ. ಮಾಜಿ ಶಾಸಕರಾದ ಜೆ ಆರ್ ಲೋಬೋ, ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ನ ನಾಯಕರು […]

ಜನಾರ್ದನ ಪೂಜಾರಿಗೆ ನಿಂದನೆ: BSNDPಯಿಂದ ಸೆನ್ ಸೈಬರ್ ಠಾಣೆಗೆ ದೂರು

Thursday, December 6th, 2018
kundapur

ಕುಂದಾಪುರ: ಮಾಜಿ ಕೇಂದ್ರ ಸಚಿವ, ಬಿಲ್ಲವ ಸಮಾಜದ ಮುಂದಾಳು ಜನಾರ್ದನ ಪೂಜಾರಿಯವರನ್ನು ಸಾಮಾಜಿಕ ತಾಣಗಳಲ್ಲಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘ (ರಿ) ವತಿಯಿಂದ ಉಡುಪಿ ಸೆನ್ ಸೈಬರ್ ಪೋಲೀಸ್ ಠಾಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ BSNDP ಜಿಲ್ಲಾಧ್ಯಕ್ಷ ಮಹೇಶ್ ಪೂಜಾರಿ, ಚಂದ್ರಶೇಖರ ಬಿಲ್ಲವ, ಸಂದೇಶ್ ಪೂಜಾರಿ, ಕೃಷ್ಣ ಪೂಜಾರಿ, ಕೇಶವ ಸಸಿಹಿತ್ಲು ಮತ್ತು ಸುರೇಂದ್ರ ಪೂಜಾರಿ ಉಪಸ್ಥಿತರಿದ್ದರು.

ರಾಮ ಮಂದಿರ ಕಟ್ಟಿದರೆ ಮುಂದೆ ಹೋರಾಟ ಖಚಿತ: ಆನಂದ ಮಿತ್ತಬೈಲು

Wednesday, December 5th, 2018
protest

ಮಂಗಳೂರು: ಸಂವಿಧಾನಕ್ಕೆ ವಿರುದ್ಧವಾಗಿ ಇತಿಹಾಸ, ದಾಖಲೆಗಳೇ ಇಲ್ಲದೆ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದರೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಕೊರೆಗಾಂವ್ನಂತಹ ಹೋರಾಟ ಖಂಡಿತವಾಗಿ ನಡೆಯಲಿದೆ ಎಂದು ಆರ್ಎಸ್ಎಸ್ನವರು ತಿಳಿಯಬೇಕಾಗಿದೆ ಎಂದು ದಲಿತ ಸಂಘಟನೆಯ ಮುಖಂಡ ಆನಂದ ಮಿತ್ತಬೈಲು ಹೇಳಿದರು. ಎಸ್ಡಿಪಿಐ ವತಿಯಿಂದ ನಡೆದ ಬಾಬರಿ ಮಸೀದ್ ಮರಳಿ ಪಡೆಯೋಣ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪನೆ ಮಾಡಿಯೇ ಸಿದ್ಧ ಎಂದು ಈ ದೇಶದ ಗೌರವಾನ್ವಿತ ಮಾಜಿ ಮಂತ್ರಿಯಾಗಿದ್ದಂತಹ ಜನಾರ್ದನ ಪೂಜಾರಿಯವರು ಹೇಳಿದ ಮಾತನ್ನು ಮೊನ್ನೆ […]

ರಾಮ ಮಂದಿರ ನಿರ್ಮಾಣ ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಜನಾರ್ದನ ಪೂಜಾರಿ

Monday, December 3rd, 2018
janardhan-poojary

ಮಂಗಳೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲವೆಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡಬಾರದು ಎಂದರು. ರಾಮಮಂದಿರ ನಿರ್ಮಾಣವಾಗುವುದನ್ನು ಮುಸ್ಲಿಮರು, ಕ್ರಿಶ್ಚಿಯನ್ನರು ಬಯಸುತ್ತಾರೆ. ಸುಮ್ಮನೆ ಯಾವುದೇ ವಿವಾದವನ್ನು ಸ್ಪಷ್ಟಿಸುವುದು ಬೇಡ ಎಂದು ಹಿರಿಯ ನಾಯಕ ತಿಳಿಸಿದ್ರು.

ಜನಾರ್ದನ ಪೂಜಾರಿಗೆ ಅನಾರೋಗ್ಯ ವದಂತಿ: ಸುಳ್ಳು ಸುದ್ದಿ ಹರಿಡಿದವರ ವಿರುದ್ಧ ದೂರು

Tuesday, November 27th, 2018
janardhan-poojary

ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತೀವ್ರ ಅನಾರೋಗ್ಯದಲ್ಲಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಎಂದು ಸುಳ್ಳು ಸಂದೇಶ ಹರಡಿದವರ ವಿರುದ್ಧ, ಬಂಟ್ವಾಳ ನಗರ ಠಾಣೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ ದೂರು ನೀಡಿದ್ದಾರೆ. ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅನಾರೋಗಕ್ಕೀಡಾಗಿರುವ ಜನಾರ್ದನ ಪೂಜಾರಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ಸಂದೇಶ ಹರಡುತ್ತಿದ್ದಾರೆ. ಇದರ ಹಿಂದಿರುವ ಆರೋಪಿಳನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಆರೋಗ್ಯವಾಗಿದ್ದು ಬಂಟ್ವಾಳದ ಸ್ವಗೃಹದಲ್ಲಿ […]