ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ: ಕುಮಾರಸ್ವಾಮಿ

Wednesday, November 14th, 2018
kumarswamy

ಬೆಂಗಳೂರು: ಈ ವಿಚಾರದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ. ಅವರ ಆಪ್ತರೊಬ್ಬರು 18 ಕೋಟಿಯನ್ನು ತಿರುಪತಿ ಹುಂಡಿಗೆ ಹಾಕಿದ್ದೇವೆ ಎಂದಿದ್ದಾರೆ. ಇದು ವ್ಯಂಗ್ಯವೋ ಸತ್ಯವೋ ನನಗೆ ತಿಳಿಯುತ್ತಿಲ್ಲ. ಇದರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಗಮನಿಸಬೇಕು. ನಾನಾಗಲಿ ನಮ್ಮ ಸರ್ಕಾರದ ಸಚಿವರಾಗಲಿ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು. ಪತ್ರಕರ್ತ ಸಂತೋಷ ತಮ್ಮಯ್ಯ ಬಂಧನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಇದು ಅಧಿಕಾರಿಗಳ ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕೈಗೊಂಡ ಕ್ರಮವಾಗಿದ್ದು, ಮಾಹಿತಿ ಪಡೆದು ಈ ಬಗ್ಗೆ ಮಾತಾನಾಡುತ್ತೇನೆ […]

ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ..ರೆಡ್ಡಿ ಸೇರಿ 30ಕ್ಕೂ ಹೆಚ್ಚು ಮಂದಿ ಕೋರ್ಟ್​ಗೆ ಹಾಜರು!

Thursday, June 28th, 2018
janardhan-reddy

ಬೆಂಗಳೂರು: ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಆನಂದ್ ಸಿಂಗ್, ಸುರೇಶ್ ಬಾಬು ಮತ್ತು ಸತೀಶ್ ಸೈಲ್ ಸೇರಿದಂತೆ 30 ಕ್ಕೂ ಹೆಚ್ಚು ಆರೋಪಿತರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸಿಟಿ ಸಿವಿಲ್ ಕೋರ್ಟ್ನಲ್ಲಿರುವ ಹಾಲ್ ನಂಬರ್ 80 ರಲ್ಲಿ ಈ ವಿಚಾರಣೆ ನಡೆಯಿತು. ಕೇಸಿಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣದ ವಿಚಾರಣೆ ಇತ್ತೀಚೆಗಷ್ಟೇ ಸಿಬಿಐ ಕೋರ್ಟ್ನಿಂದ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರ್ಗವಾಗಿದೆ. ಕೇಸಿಗೆ ಸಂಬಂಧಿಸಿದಂತೆ […]

ಅಮಿತ್‌ ಶಾ ‘ಗೂಬೆಲ್‌’ ತಂತ್ರ ನಡೆಯಲ್ಲ: ರಾಜ್ಯದಲ್ಲಿ ಅದಕ್ಕೆ ಅವಕಾಶವೂ ಇಲ್ಲ: ಸಿದ್ದರಾಮಯ್ಯ

Friday, May 18th, 2018
siddaramaih

ಬೆಂಗಳೂರು: ನಾಳೆಯೇ ಬಿ.ಎಸ್‌‌.ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತು ಪಡಿಸಲು ಸೂಚಿಸಿರುವ ಸುಪ್ರೀಂಕೋರ್ಟ್‌ ಆದೇಶವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ತೀರ್ಪು ನೀಡಿರುವ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ. ದೇಶದ ಇತಿಹಾಸದಲ್ಲಿ ಇದು ಮೈಲಿಗಲ್ಲಾಗುವ ತೀರ್ಪು ಎಂದು ಸಿದ್ದರಾಮಯ್ಯ ಹೇಳಿದರು. ಸುಪ್ರೀಂಕೋರ್ಟ್‌ ಆದೇಶ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್‌ ನಗರದ ಕೆಪಿಪಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ತೀರ್ಪಿನ ಮೂಲಕ ನ್ಯಾಯಾಧೀಶರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಮಾಡುವ ಕರ್ತವ್ಯ ನಿರ್ವಹಿಸಿದ್ದಾರೆ. ಸುಪ್ರೀಂ ನ್ಯಾಯಾಧೀಶರಿಗೆ […]

ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ: ಸಿಎಂ ಸಿದ್ದರಾಮಯ್ಯ

Friday, April 27th, 2018
bantwala

ಮಂಗಳೂರು: ಈ ಬಾರಿ ಉಡುಪಿ, ಮಂಗಳೂರಲ್ಲಿ ಬಿಜೆಪಿಗೆ ಒಂದೂ ಸೀಟು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ. ಚುನಾವಣೆ ಘೋಷಣೆಯಾದ ಕೂಡಲೇ 2008 ರ ಲೂಟಿ ಕೋರರು ಮತ್ತೆ ಒಂದಾಗಿದ್ದಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಟೀಂ ವಿರುದ್ಧ ಸಿಎಂ ಆಕ್ರೋಷ ವ್ಯಕ್ತಪಡಿಸಿದರು. ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, […]

ಶ್ರೀರಾಮುಲು ನಾಮಪತ್ರ ಸಲ್ಲಿಕೆ… ಎಂಪಿ ಸಿಎಂ, ಬಿಎಸ್‌ವೈ, ಜನಾರ್ದನ ರೆಡ್ಡಿ ಸಾಥ್‌

Saturday, April 21st, 2018
shri-ramalu

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಜೆ ಅಭ್ಯರ್ಥಿ ಬಿ.ಶ್ರೀರಾಮುಲು ಇಂದು ನಾಮಪತ್ರ ಸಲ್ಲಿಸಿದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಇತ್ತೀಚೆಗೆ ಪಕ್ಷ ಸೇರಿರುವ ಎನ್.ವೈ.ಗೋಪಾಲಕೃಷ್ಣ ಉಪಸ್ಥಿತರಿದ್ದು ಗಮನ ಸೆಳೆದರು. ಸ್ನೇಹಿತ ಶ್ರೀರಾಮುಲುಗೆ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಘೋಷಣೆ ಆಗುವ ಮೊದಲೇ ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಟಿಕೆಟ್ ಘೋಷಣೆ ನಂತರ ಪಟ್ಟಣದ ಹೊರವಲಯದಲ್ಲಿ ಮನೆ ಬಾಡಿಗೆ ಪಡೆದು ನೆಲೆಯೂರಿದ್ದಾರೆ. ಮೊಳಕಾಲ್ಮೂರು ಪಟ್ಟಣದಲ್ಲಿ […]

ಚುನಾವಣಾ ಅಖಾಡಕ್ಕೆ ಜನಾರ್ದನ ರೆಡ್ಡಿ… ಗೆಳೆಯನ ಪರ ಪ್ರಚಾರಕ್ಕೆ ರೆಡಿ

Wednesday, April 18th, 2018
janardhan-reddy

ತುಮಕೂರು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಳೆಯ ಶ್ರೀರಾಮುಲು ಪರ ಜನಾರ್ದನ ರೆಡ್ಡಿ ಪ್ರಚಾರಕ್ಕೆ ಅಣಿಯಾಗಿದ್ದಾರೆ‌. ಇಂದು ತುಮಕೂರಿನ ಕ್ಯಾತ್ಸಂದ್ರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀಗಳ ಆಶೀರ್ವಾದ ಪಡೆದು ಶ್ರೀರಾಮುಲು ಪರ ಪ್ರಚಾರಕ್ಕೆ ತೆರಳಿದರು. ಇದೇ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ, ಬಸವ ಜಯಂತಿ ಹಿನ್ನೆಲೆ ಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದಿರುವೆ. ನಾನು ಮೂರನೇ ಬಾರಿ ಶ್ರೀಮಠಕ್ಕೆ ಬಂದಿದ್ದು, ನನ್ನ ಸ್ನೇಹಿತ ಶ್ರೀರಾಮುಲುಗೆ ಬೆಂಬಲ ನೀಡಿ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಇಂದಿನಿಂದ ಪ್ರಚಾರ […]

ಬಿಎಸ್‍ವೈ- ಜನಾರ್ದನ ರೆಡ್ಡಿ ನಡುವಿನ ಬಾಂಧವ್ಯ ವೃದ್ಧಿಗೆ ಶ್ರೀರಾಮುಲು ಯತ್ನ

Wednesday, April 4th, 2018
shri-ramoolu

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇಂದು ಸಂಸದ ಶ್ರೀರಾಮುಲು ವಿಶೇಷ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲೇ ಬೇಕಿರುವ ಸಂದರ್ಭದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಬಿಜೆಪಿಗೂ, ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಡಿರುವ ಮಾತಿನ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆ ಎಲ್ಲಿ, ಯಾವ ಸಮಯಕ್ಕೆ ನಡೆಯಲಿದೆ ಎನ್ನುವ ಮಾಹಿತಿ […]

ಕುಟುಂಬದವರಿಗೆ ಟಿಕೆಟ್‌ ಕೊಟ್ರೆ ಜನಾರ್ದನ ರೆಡ್ಡಿ ರಾಜಕೀಯ ಎಂಟ್ರಿ!?

Wednesday, March 28th, 2018
janardhan-reddy

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿದಿದ್ದ ಬಳ್ಳಾರಿ ಗಣಿ-ಧಣಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ತಮ್ಮನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ನಾಲ್ಕೈದು ಜಿಲ್ಲೆಗಳಲ್ಲಿ ತಾವು ಬಿಜೆಪಿ ಪರ ಸಕ್ರಿಯವಾಗಿ ಕೆಲಸ ಮಾಡಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜನಾರ್ಧನರೆಡ್ಡಿ ವರಿಷ್ಠರಿಗೆ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ತಮ್ಮ ಆಪ್ತರ ಬಳಿ ಪಕ್ಷ ಸೇರ್ಪಡೆ ಕುರಿತಂತೆ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿರುವ […]

ಮಾಜಿ ಸಚಿವ ಜನಾರ್ದನ ರೆಡ್ಡಿ ಕಟೀಲು ಕ್ಷೇತ್ರಕ್ಕೆ ಭೇಟಿ

Tuesday, December 6th, 2016
Janardana-Reddy

ಮಂಗಳೂರು: ಇತ್ತೀಚೆಗೆ ಕೋಟ್ಯಂತರ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ಮಗಳ ವಿವಾಹ ನೆರವೇರಿಸಿ ಸುದ್ದಿಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ದೇವಳಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ. ಜನಾರ್ದನ ರೆಡ್ಡಿ ನಿನ್ನೆ ತಡರಾತ್ರಿ ರಹಸ್ಯವಾಗಿ ಕಟೀಲು ಕ್ಷೇತ್ರಕ್ಕೆ ಕುಟುಂಬ ಸಮೇತ ಆಗಮಿಸಿದ್ದು, ಸ್ಥಳೀಯ ವಸತಿ ಗೃಹವೊಂದರಲ್ಲಿ ವಾಸ್ತವ್ಯವಿದ್ದರು. ಇಂದು ಅವರು ಕುಟುಂಬದೊಂದಿಗೆ ಕಟೀಲು ಕ್ಷೇತ್ರದಲ್ಲಿ ಚಂಡಿಕಾ ಯಾಗ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅದ್ದೂರಿ ಮದುವೆ ಬಗ್ಗೆ ಟೀಕಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಈ ದುಂದು ವೆಚ್ಚ ಮಾಡಿದ್ದು ಸರಿಯೇ: ಎಚ್.ಡಿ.ಕುಮಾರಸ್ವಾಮಿ

Wednesday, November 23rd, 2016
siddaramaiah

ಬೆಳಗಾವಿ: ಅದ್ದೂರಿ ಮದುವೆ ಎಂಬ ಕಾರಣಕ್ಕೆ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಮದುವೆಯಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರಣಕ್ಕೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ರಮೇಶ್ ಜಾರಕಿಹೊಳಿ ಅವರ ಪುತ್ರನ ಮದುವೆ ಸಂಭ್ರಮದಿಂದ ದೂರ ಉಳಿದಿದ್ದರು. ಆದರೆ ಇದೀಗ ಅದ್ದೂರಿ ಮದುವೆ ಹೋಗಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಜಾರಕಿಹೊಳಿ ಮಗನ ಮದುವೆಗೆ ಶುಭಾಶಯ ಹೇಳಲು ಖಾಸಗಿ ಹೆಲಿಕಾಪ್ಟರ್ ಬಳಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸಿಎಂ ಅವರು […]