ವಿವೇಕಾನಂದರು ಯುವಜನತೆಗೆ ನಂದಾದೀಪವಿದ್ದಂತೆ: ಎಸ್. ಮಹೇಶ್ ಕುಮಾರ್

Thursday, January 13th, 2022
Vivekananda-Jayanthi

ಮಂಗಳೂರು: ಸ್ವಾಮಿ ವಿವೇಕಾನಂದರು ಭಾರತೀಯರ ಆತ್ಮಾಭಿಮಾನವನ್ನು ಬಡಿದೆಬ್ಬಿಸದ ಸಂತ. ಅವರ ಜೀವನ, ತತ್ವಗಳು ಯುವಜನತೆಗೆ ನಂದಾದೀಪದಂತೆ, ಎಂದು ಮಂಗಳೂರು ನಗರ ಉತ್ತರ ಸಹಾಯಕ ಪೊಲೀಸ್ ಆಯುಕ್ತ ಎಸ್. ಮಹೇಶ್ ಕುಮಾರ್ ಅಭಿಪ್ರಾಯಪಟ್ಟರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮತ್ತು ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಬುಧವಾರ ತಣ್ಣೀರುಬಾವಿಯ ವೃಕ್ಷ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ- ʼರಾಷ್ಟ್ರೀಯ ಯುವ ದಿನಾಚರಣೆʼ ಹಾಗೂ ಯುವ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ವರ್ಷದ ಜನ್ಮ ದಿನಾಚರಣೆ

Thursday, November 25th, 2021
Veerendra Hegde Birthday

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ದೇವಳದ ನೌಕರರು, ಊರಿನ ನಾಗರಿಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ,  ಆಪ್ತರು, ಅಭಿಮಾನಿಗಳು ಹಾಗೂ ಭಕ್ತರು ಶ್ರದ್ಧಾ-ಭಕ್ತಿಯಿಂದ ಹೆಗ್ಗಡೆಯವರಿಗೆ ಜನ್ಮ ದಿನದ ಶುಭಾಶಯ ಅರ್ಪಿಸಿದರು. ಮೂಡಬಿದ್ರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆ ದಂಪತಿಗಳಿಗೆ ವಿಶೇಷ ಪ್ರಸಾದ ನೀಡಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಟ್ನಶೆಟ್ಟಿ ಸುಧೇಶ್ ಕುಮಾರ್ ಜೈನ್, ಬಸದಿಗಳ ಆಡಳಿತ ಮೊಕ್ತೇಸರ ಆನಡ್ಕ […]

ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ ಶಾಸಕ ಕಾಮತ್

Tuesday, December 8th, 2020
vedavyas kamath

ಮಂಗಳೂರು : ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ತಮ್ಮ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜನ್ಮದಿನವನ್ನು ಬಡ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಆಚರಿಸಿಕೊಂಡಿದ್ದಾರೆ. ಮರೋಳಿಯ ಗೀತಾ ಎಂಬವರ ಮನೆಗೆ ವಿದ್ಯುತ್ ಸಂಪರ್ಕವಿಲ್ಲದೆ ಚಿಮಿಣಿ ಹಾಗೂ ಕ್ಯಾಂಡಲ್ ಮೂಲಕ ಬದುಕು ಸಾಗಿಸುತ್ತಿದ್ದರು. ಈ ವಿಚಾರವಾಗಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಶಾಸಕರ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಒದಗಿಸುವಂತೆ ಕೋರಿದ್ದರು. ತಕ್ಷಣವೇ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಸಂಪರ್ಕ ಒದಗಿಸಲು […]

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್‌ರವರ 137ನೆ ಜನ್ಮ ದಿನಾಚರಣೆ

Friday, August 4th, 2017
SCDCC-BANK

ಮಂಗಳೂರು : ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮೊಳಹಳ್ಳಿ ಶಿವರಾವ್ ಸಭಾಂಗಣದ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್‌ರವರ 137ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್  ಉದ್ಘಾಟಿಸಿದರು. ಸಹಕಾರಿ ಕ್ಷೇತ್ರದಲ್ಲೂ ನಗದುರಹಿತ ವ್ಯವಹಾರಕ್ಕೆ ಸಿದ್ಧತೆ ನಡೆಸಲಾಗಿದೆ,  ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್‌ರವರು ಸಹಕಾರ ವ್ಯವಸ್ಥೆಯ ಮೂಲಕ ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣರಾದರು. ಇದರಿಂದಾಗಿಯೇ ವಾಣಿಜ್ಯ ಬ್ಯಾಂಕ್‌ಗಳ ನಡುವಿನ ಪೈಪೋಟಿಯ ಹೊರತಾಗಿಯೂ ಸಹಕಾರಿ ಬ್ಯಾಂಕುಗಳು ಉತ್ಕೃಷ್ಟವಾದ ಸೇವೆಯನ್ನು ಒದಗಿಸುವ […]

ಸೆಪ್ಟಂಬರ್ 2ರಂದು ಮೂಡಬಿದ್ರೆಯಲ್ಲಿ ‘ಸದಾಭಿನಂದನೆ’

Thursday, July 6th, 2017
A Sadananada

ಮಂಗಳೂರು :  ಎ. ಸದಾನಂದ ಶೆಟ್ಟಿಯವರ 75ನೆ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 2ರಂದು ‘ಸದಾಭಿನಂದನೆ’ ಕಾರ್ಯಕ್ರಮವನ್ನು ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಅಮರನಾಥ ಶೆಟ್ಟಿ  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ, ಶ್ರೀದೇವಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಕರಾವಳಿಯ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ, ಉದ್ಯಮ ಹಾಗೂ ಸೇವಾ ವಲಯದಲ್ಲಿ ಕೊಡುಗೈದಾನಿಯಾಗಿ ಅಪ್ರತಿಮ ಮಾತೃಸಂಘದ ಮಾಜಿ ಅಧ್ಯಕ್ಷ, ಸ್ಪೋರ್ಟ್ಸ್ ಪ್ರಮೋಟರ್ಸ್ ಕ್ಲಬ್, ದ.ಕ. ಬ್ಯಾಡ್‌ಮಿಂಟನ್ ಅಸೋಸಿಯೇಶನ್, ದ.ಕ. […]

ಬಿಷಪ್ ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರ 76ನೇ ಜನ್ಮ ದಿನಾಚರಣೆ

Wednesday, June 21st, 2017
Alosius poul

ಮಂಗಳೂರು :  ಬದುಕು ದೇವರ ವರ, ಅದನ್ನು ಪರರ ಸೇವೆ ಮತ್ತು ಇತರ ಒಳ್ಳೆಯ ಕೆಲಸಗಳಿಗೆ ವಿನಿಯೋಗಿಸಿದಾಗ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಮಂಗಳೂರಿನ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರು ಹೇಳಿದರು. ಅವರು ಬುಧವಾರ ತಮ್ಮ 76 ನೇ ಜನ್ಮದಿನದ ಅಂಗವಾಗಿ ಬಿಜೈ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನಲ್ಲಿ ನಡೆದ ಕೃತಜ್ಞಾತರ್ಪಣೆಯ ಬಲಿಪೂಜೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಹೆತ್ತವರು ತಮ್ಮ ಮಕ್ಕಳಿಗೆ ದೇವರ ಪ್ರೀತಿ ಮತ್ತು ಮೌಲ್ಯಗಳ ಬಗ್ಗೆ ತಿಳಿಸಿ ಅವರನ್ನು […]

ಧರ್ಮಸ್ಥಳ: ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆ

Friday, November 25th, 2016
veerendra heggade

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆಯನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ಸರಳವಾಗಿ ಆಚರಿಸಲಾಯಿತು. ಊರ-ಪರವೂರ ಅಭಿಮಾನಿಗಳು ಬಂದು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮೂಡಬಿದ್ರೆಯ ಡಾ. ಎಂ. ಮೋಹನ ಆಳ್ವ, ಜಿಲ್ಲಾ ಕೃಷಿಕ ಸಮಾಜದ ಆಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಮಂಗಳೂರಿನ ಕೆ. ರಾಜವರ್ಮ ಬಳ್ಳಾಲ್, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ರಾಜೇಂದ್ರ ಶೆಟ್ಟಿ ಮೊದಲಾದ ಗಣ್ಯರು […]

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಜನ್ಮ ದಿನಾಚರಣೆ

Thursday, August 21st, 2014
Rajiv-gandhi-birthday

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜೀ ಪ್ರಧಾನಿ ದಿ| ರಾಜೀವ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ| ದೇವರಾಜ್ ಅವರಸ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ಜಿ.ಆರ್.ಲೋಬೋರವರು ಮಾತನಾಡುತ್ತಾ, ಇಬ್ಬರು ಮಹಾ ನಾಯಕರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು ರಾಜೀವ್ ಗಾಂಧಿಯವರು ದೇಶದ ಪ್ರಧಾನಿಯಾಗಿ ದೇಶದ ಆಥರ್ಿಕತೆ, ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಟ್ಟು ಬಲಿಷ್ಠ ಭಾರತ ನಿರ್ಮಾಣಕ್ಕಾಗಿ […]