ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಸ್ಥಳೀಯ ಬಿಜೆಪಿ ನಾಯಕ ಮತ್ತು ಕುಟುಂಬ ಸದಸ್ಯರ ಹತ್ಯೆ

Thursday, July 9th, 2020
vashim ahamed

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮೆರೆದಿದ್ದಾರೆ. ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಜೆಪಿಯ ಸ್ಥಳೀಯ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ ಜತೆಗೆ ಅವರ ಸೋದರ ಉಮರ್ ಬಾರಿ ಮತ್ತು ತಂದೆ ಬಶೀರ್ ಅಹ್ಮದ್ ಕೂಡ ಹತ್ಯೆಗೀಡಾಗಿದ್ದಾರೆ. ವಾಸೀಂ ಅಹ್ಮದ್ ಅವರು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬಂಡಿಪೊರದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಮೂವರೂ ತಮ್ಮ ಅಂಗಡಿಯಲ್ಲಿ ಇದ್ದ ವೇಳೆಗೆ […]

ಜಮ್ಮು -ಕಾಶ್ಮೀರದ ತ್ರಾಲ್​ನಲ್ಲಿ ಮೂವರು ಉಗ್ರರ ಹತ್ಯೆ

Wednesday, February 19th, 2020
bhadrata-pade

  ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಬುಧವಾರ ನಸುಕಿನಲ್ಲಿ ತ್ರಾಲ್ ನಲ್ಲಿ ನಡೆದ ಎನ್ಕೌಂಟರ್ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಹತರಾದ ಉಗ್ರರು ಅನ್ಸಾರ್ ಘಜ್ವಾ ಉಲ್ ಹಿಂದ್ ಸಂಘಟನೆಗೆ ಸೇರಿದವರಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದರು. ಹತರನ್ನು ಜಂಗೀರ್ ರಫೀಕ್ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್, ಉಜೈರ್ ಆಮಿನ್ ಭಟ್ ಎಂದು ಗುರುತಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.  

ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡಿಎಸ್ಪಿ ದೇವಿಂದರ್ ಸಿಂಗ್

Friday, January 17th, 2020
devindar

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ದೇವಿಂದರ್ ಸಿಂಗ್ ರಾಷ್ಟ್ರೀಯ ತನಿಖಾ ತಂಡ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ನಿಂತಿರುವ ಉಗ್ರರಿಗೆ ನೆರವು ನೀಡುವ ಪೊಲೀಸರಿಗೆ ಲಕ್ಷ ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ ಎಂದು ವಿಚಾರಣೆ ವೇಳೆ ಡಿಎಸ್ಪಿ ದೇವಿಂದರ್ ಸಿಂಗ್ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ಇಬ್ಬರು ಉಗ್ರರರನ್ನು […]

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಲಷ್ಕರ್​-ಇ-ತೋಯ್ಬಾ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

Saturday, January 4th, 2020
bhadrata-pade

ಜಮ್ಮು : ಭದ್ರತಾ ಪಡೆಯು ಲಷ್ಕರ್-ಇ-ತೋಯ್ಬಾ ಸಂಘಟನೆಗೆ ಸೇರಿದ ಉಗ್ರ ನಿಸಾರ್ ಅಹಮದ್ ದಾರ್ನನ್ನು ಶ್ರೀನಗರದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಿದೆ. ಉಗ್ರ ಅಡಗಿ ಕುಳಿತಿದ್ದಾನೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿತ್ತು. ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಶ್ರೀನಗರದ ಮಹಾರಾಜ ಹರಿ ಸಿಂಗ್ ಆಸ್ಪತ್ರೆಯಲ್ಲಿ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಅಂದರೆ 2019 ನವೆಂಬರ್ನಲ್ಲಿ ಕುಲ್ಲಾನ್ ಗಂದೇರ್ಬಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಿಸಾರ್ ತಪ್ಪಿಸಿಕೊಂಡಿದ್ದ. ಆತ […]

ಜಮ್ಮು-ಕಾಶ್ಮೀರ : ಬಸ್ ನಲ್ಲಿದ್ದ 15 ಕೆ.ಜಿ ಸ್ಪೋಟಕ ಪತ್ತೆ

Tuesday, October 1st, 2019
bhadrata-pade

ಜಮ್ಮು-ಕಾಶ್ಮೀರ : ಬಸ್ ನಲ್ಲಿದ್ದ 15 ಕೆ.ಜಿ ಭಾರೀ ಸ್ಪೋಟಕಗಳನ್ನು ವಶಪಡಿಸಿಕೊಳ್ಳುವ ಮೂಲಕ ಭದ್ರತಾ ಪಡೆಗಳು ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದಾರೆ. ಕಥುವಾ ಜಿಲ್ಲೆಯ ಬಿಲಾವರ್ ನಿಂದ ಜಮ್ಮು ನಗರಕ್ಕೆ ಬಂದಿರುವ ಬಸ್ ನಲ್ಲಿ ಈ ಭಾರೀ ಸ್ಪೋಟಕಗಳು ಪತ್ತೆಯಾಗಿದ್ದವು. ಬೆಳಗ್ಗೆಯಷ್ಟೆ ಕೆರಾನ್ ಸೆಕ್ಟರ್ ನಲ್ಲಿ ಪಾಕಿಸ್ಥಾನ ಕದನ ವಿರಾಮ ಉಲ್ಲಂಘಿಸಿ ನಿರಂತರ ಗುಂಡಿನ ಮಳೆಗೆರೆದಿತ್ತು. ಉಗ್ರರು ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಭಯೋತ್ಪಾದನ ದಾಳಿ ನಡೆಸುವ ಹುನ್ನಾರ ಇದೀಗ ವಿಫಲಗೊಂಡಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ […]

ಉಗ್ರರ ವಿರುದ್ಧ ಸತತ 10ಗಂಟೆಗಳ ಸೇನಾ ಕಾರ್ಯಾಚರಣೆ ಅಂತ್ಯ : ಮೂವರು ಉಗ್ರರ ಹತ್ಯೆ

Saturday, September 28th, 2019
sene

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ರಂಬಾನ್ ಜಿಲ್ಲೆಯ ಬಾಟೋಟೆ ನಗರದ ಮನೆಯೊಂದರಲ್ಲಿ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇರಿಸಿಕೊಂಡಿದ್ದ ಉಗ್ರರ ವಿರುದ್ಧ ಸತತ ಹತ್ತು ಗಂಟೆಗಳ ಕಾಲ ಸೇನಾಪಡೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹತ್ಯೆಗೈದಿದ್ದು, ಒತ್ತೆಯಾಳನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಂಬಾನ್ ನ ಬಾಟೋಟೆ ಪ್ರದೇಶದಲ್ಲಿನ ಮನೆಯೊಳಕ್ಕೆ ನುಗ್ಗಿದ್ದ ಮೂವರು ಉಗ್ರರು, ಮನೆಯಲ್ಲಿದ್ದ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇಟ್ಟುಕೊಂಡು, ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸೇನೆ ಪ್ರತಿದಾಳಿ ಮೂಲಕ ಕಾರ್ಯಾಚರಣೆ ನಡೆಸಿತ್ತು. ಸತತ ಹತ್ತು ಗಂಟೆಗಳ […]

ಜಮ್ಮು ಕಾಶ್ಮೀರ ಐತಿಹಾಸಿಕ ನಿರ್ಣಯಕ್ಕೆ ನಳಿನ್ ಸಂತಸ

Monday, August 5th, 2019
nalin

ಮಂಗಳೂರು  : ಜಮ್ಮು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಣಯವಾಗಿದೆ. ದೇಶದೆಲ್ಲೆಡೆ ಜನತೆ ಕೇಂದ್ರದ ದಿಟ್ಟ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಕಾಶ್ಮೀರದಲ್ಲಿ ಇನ್ನು ಶಾಂತಿ ನೆಲೆಸಲಿದೆ. ಕೇಂದ್ರದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದರೆ ಕಾಶ್ಮೀರದ ವಿಶೇಷ ಸ್ಥಾನಮಾನನ ರದ್ದು ಮಾಡುವುದಾಗಿ ಚುನಾವಣೆಯ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನುಡಿದಂತೆ ನಡೆದಿದ್ದಾರೆ. ಕೋಟ್ಯಾಂತರ ದೇಶಪ್ರೇಮಿಗಳ ದಶಕಗಳ […]

ಜಮ್ಮು-ಕಾಶ್ಮೀರದಲ್ಲಿ ಮುರಿದು ಬಿದ್ದ ಬಿಜೆಪಿ-ಪಿಡಿಪಿ ಮೈತ್ರಿ

Tuesday, June 19th, 2018
jammu-kashmir

ಶ್ರೀನಗರ: ಜಮ್ಮು-ಕಾಶ್ಮೀರದ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ಬಂದಿದೆ. 2014ರಲ್ಲಿ ನಡೆದ ಜಮ್ಮು-ಕಾಶ್ಮೀರದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಸುಮಾರು ಎರಡು ತಿಂಗಳ ಕಾಲ ಸರ್ಕಾರ ರಚನೆ ಕಸರತ್ತು ನಡೆಸಿದ ಬಳಿಕ, ತಮ್ಮ-ತಮ್ಮ ಸಿದ್ಧಾಂತಗಳನ್ನು ಬದಿಗೊತ್ತಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ರಚಿಸಿದ್ದವು. ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇಂದು ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರ್ಕಾರದಿಂದ ಕೇಂದ್ರದ ಆಡಳಿತಾರೂಢ […]

ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಎಂದು ಕಾಂಗ್ರೆಸ್ ನಾಯಕಿ ಎಡವಟ್ಟು

Monday, April 16th, 2018
shalo-pintu

ಮಂಗಳೂರು: ಜಮ್ಮು- ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಖಂಡಿಸಿ, ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಆದರೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಘಟನೆ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ಪ್ರತಿಭಟನೆ ಆಯೋಜಿನಲಾಗಿತ್ತು. ನಗರದ ಲಾಲ್ ಬಾಗ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸೇರಿದ ಕಾಂಗ್ರೆಸ್ […]

ಜಮ್ಮು ಕಾಶ್ಮೀರದಲ್ಲಿ ‌ಉಗ್ರರ ಸದೆಬಡಿದ ಯೋಧನಿಗೆ ಹುಟ್ಟೂರಿನಲ್ಲಿ ಸನ್ಮಾನ!

Monday, April 2nd, 2018
jammu-kashmir

ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾದ ಯೋಧ ಝುಬೈರ್ ಅವರನ್ನು ಸನ್ಮಾನಿಸಲಾಯಿತು. ಕಡಬ ತಾಲೂಕಿನ ಆತೂರು ಸಮೀಪದ ಬಜತ್ತೂರು ಗ್ರಾಮದ ನೇರೆಂಕಿಯ ಮೇಲೂರು ನಿವಾಸಿ ಸಮೂನ್ ಬ್ಯಾರಿ ಹಾಗೂ ಆಮಿನಮ್ಮ ದಂಪತಿಯ ದ್ವಿತೀಯ ಪುತ್ರ ಝುಬೈರ್ ಎಂ.ನೇರಂಕಿ ರವಿವಾರ ಹುಟ್ಟೂರಿಗೆ ಆಗಮಿಸಿದ್ದರು. ಈ ಸಂದರ್ಭ ಸಾರ್ವಜನಿಕರು ಅವರನ್ನು ಮೆರವಣಿಗೆ ನಡೆಸಿ ಸನ್ಮಾನಿಸಿದರು. ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿ ದಾಳಿ ನಡೆಸಿದ್ದ ಉಗ್ರರನ್ನು ಭಾರತದ ಸೈನಿಕರು ಹೊಡೆದುರುಳಿಸಿದ್ದರು. ಲಷ್ಕರ್ ಎ […]