ಅಂಬರೀಶ್ ಅವರ ವೈಕುಂಠ ಸಮಾರಾಧನೆಗಾದರೂ ನಟಿ ರಮ್ಯಾ ಬರಬಹುದು: ಸಚಿವೆ ಜಯಮಾಲಾ

Saturday, December 1st, 2018
jayamala

ಉಡುಪಿ: ಅಂಬರೀಶ್ ಅಂತ್ಯಸಂಸ್ಕಾರದಲ್ಲಿ ಭಾಗವಹಿಸದ ನಟಿ ರಮ್ಯಾ ಅವರು ಅಂಬರೀಶ್ ಅವರ ವೈಕುಂಠ ಸಮಾರಾಧನೆಗಾದರೂ ಬರಬಹುದು ಎಂದು ಸಚಿವೆ ಜಯಮಾಲಾ ಹೇಳಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಮ್ಯಾಗೆ ಹುಷಾರಿಲ್ಲ ಅಂತ ಅವರೇ ಹೇಳ್ಕೊಂಡಿದಾರಲ್ವಾ? ಹೆಣ್ಣು ಮಕ್ಕಳಿಗೆ ಸಮಸ್ಯೆಗಳು ಇರ್ತವೆ. ಬೇರೇನೂ ರಾಜಕೀಯ ಕಾರಣ ಇರ್ಲಿಕ್ಕಿಲ್ಲ. ಅಂಬರೀಶ್ ಅವರ ವೈಕುಂಠ ಸಮಾರಾಧನೆಯಂದಾದರೂ ಅವರು ಬರಬಹುದು ಎಂದು ಹೇಳಿದರು. ವಿಷ್ಣುವರ್ಧನ್ ಸ್ಮಾರಕ ವಿವಾದದ ಕುರಿತು ಮಾತನಾಡಿದ ಅವರು, ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ […]

ಶಬರಿಮಲೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಜಯಮಾಲಾ

Thursday, October 18th, 2018
jayamala

ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ‌ವಿಚಾರ ಪ್ರತಿಕ್ರಿಯೆ ಕೊಡಲು ಸಚಿವೆ ಜಯಮಾಲ ನಿರಾಕರಿಸಿದ್ದಾರೆ. ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯ ಕಾನೂನು ಜಾರಿ ವಿಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರು ಶಬರಿಮಲೆ ಬಗ್ಗೆ ಪ್ರಶ್ನೆ ಮಾಡ್ತಿದ್ದಂತೆ ನಮಸ್ಕಾರ ಎಂದು ಕೈಮುಗಿದು ತೆರಳಿದರು. ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶ ಬಗ್ಗೆ ನೀಡಿದ ಆದೇಶ ಸ್ವಾಗಿತಿಸಿದ್ರು. ಆದರೆ, ಇದೀಗ ಕೇರಳದಲ್ಲಿ ಮಹಿಳೆಯರ ಪ್ರವೇಶದ ಬಗ್ಗೆ ಗಲಾಟೆ ಆಗ್ತಿದ್ದಂತೆ ಮೌನ ವಹಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಜಾಹೀರಾತು […]

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿದ ಜಯಮಾಲಾ

Sunday, August 5th, 2018
jayamala

ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಮೊದಲ ಬಾರಿ ಭಾನುವಾರ ಜಿಲ್ಲೆಗೆ ಆಗಮಿಸಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಪಕ್ಷದ ಕಾರ್ಯಕರ್ತ ರೊಂದಿಗೆ ಸಮಾಲೋಚನೆ ನಡೆಸಿದರು. ಉಡುಪಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಕರಾವಳಿಯವಳೇ ಆಗಿರುವುದರಿಂದ ಉಡುಪಿ ಉಸ್ತುವಾರಿ ಸಚಿವೆಯಾಗಿ ನೇಮಕಗೊಂಡಿರುವುದು ಅತ್ಯಂತ ಖುಷಿ ನೀಡಿದೆ. ನಾನು ಬಯಸದೇ, ತಾನಾಗಿ ಒಲಿದು ಬಂದಿರುವುದರಿಂದ ಒಳ್ಳೆಯ ಕೆಲಸ ಮಾಡುವುದು ನನ್ನ ಆದ್ಯತೆ. ಸರಕಾರ ರೂಪಿಸಿರುವ ಎಲ್ಲಾ ಯೋಜನೆ ಗಳನ್ನು […]

ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಸಚಿವೆ ಜಯಮಾಲಾ

Wednesday, July 25th, 2018
jayamala

ಮಂಗಳೂರು: ಅಂಗನವಾಡಿ ವ್ಯವಸ್ಥೆ ಪಾರದರ್ಶಕವಾಗಿಸಲು ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ ಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದರು. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿಗಳ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಇಲಾಖೆಯ ಕೆಲಸಗಳಿಗೆ ಬಿಟ್ಟು ಅನ್ಯ ಕೆಲಸಗಳಿಗೆ ಬಳಸುವಂತಿಲ್ಲ. […]

ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಜಯಮಾಲಾಗೆ ಸಾಹಿತ್ಯ ಪರಿಷತ್ತಿನಿಂದ ಮನವಿ

Tuesday, July 24th, 2018
congress-jaymala

ಮಂಗಳೂರು: ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಪೋಷಿಸುವ ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಅಗತ್ಯವೆನಿಸುವ ರಂಗಮಂದಿರ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಡಾ. ಜಯಮಾಲಾ ಅವರನ್ನು ಸಾಹಿತ್ಯ ಪರಿಷತ್ತಿನ ನಿಯೋಗದೊಂದಿಗೆ ಭೇಟಿಮಾಡಿ ರಂಗಮಂದಿರದ ಅಗತ್ಯತೆಯ ಬಗ್ಗೆ ಕಲ್ಕೂರ ಅವರು ಪ್ರಸ್ತಾಪಿಸಿದರಲ್ಲದೆ ಸಚಿವರಿಗೆ ಸಾಹಿತ್ಯ ಪರಿಷತ್ತಿನಿಂದ ಮನವಿಯೊಂದನ್ನು ಸಲ್ಲಿಸಿದರು. ಈ ಸಂದರ್ಭಪುತ್ತೂರಿನ […]

ರಾಜ್ಯದಲ್ಲಿರುವ ಸಾಹಿತ್ಯ ಅಕಾಡೆಮಿಗಳಿಗೆ ತಲಾ 10 ಲಕ್ಷ ರೂ. ಅನುದಾನ: ಜಯಮಾಲಾ

Tuesday, July 24th, 2018
jayamala

ಮಂಗಳೂರು: ರಾಜ್ಯದಲ್ಲಿರುವ ಸಾಹಿತ್ಯ ಅಕಾಡೆಮಿಗಳಿಗೆ ತಲಾ 10 ಲಕ್ಷ ರೂ. ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ. ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಜಯಮಾಲಾ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ನನಗೆ ನೀಡಿರುವ ಎಲ್ಲ ಇಲಾಖೆಗಳಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಶಬರಿ ಮಲೆಗೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, […]

ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಅನ್ನೋದು ಜಗತ್ತಿಗೆ ಗೊತ್ತಿರುವ ವಿಚಾರ: ಲಕ್ಷ್ಮಿ ಹೆಬ್ಬಾಳ್ಕರ್

Monday, June 18th, 2018
laxmi-hebbalkar

ಬೆಂಗಳೂರು: ಜಯಮಾಲಾರ ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಅನ್ನೋದು ಜಗತ್ತಿಗೆ ಗೊತ್ತಿರುವ ವಿಚಾರವೆಂದು ಮಾರ್ಮಿಕವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಕಡೆ ಸೇವೆ ಅಂದ್ರೆ ಬೇರೆ ಇದೆ. ಸೇವೆ ಅಂದ್ರೆ ದೇವ್ರ ಸೇವೆ, ಅಭಿಷೇಕದ ಸೇವೆ, ಉರುಳು ಸೇವೆ, ಪಕ್ಷದ ಸೇವೆ, ಆಗಿರಬಹುದು. ಜಯಾಮಾಲರ ರಾಜಕೀಯ ಸೇವೆ ಪಕ್ಷಕ್ಕೆ ಇಷ್ಟವಾಗಿರಬಹುದು. ಹೀಗಾಗಿ ಅವರಿಗೆ ಸಚಿವ ಸ್ಥಾನ ಸಿಕ್ಕಿರಬಹುದು. ಅವರು ಯಾವ ಅರ್ಥ ತಿಳಿದುಕೊಂಡಿದ್ದಾರೋ ಗೊತ್ತಿಲ್ಲವೆಂದು […]