ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ : ಕಾರಜೋಳ
Wednesday, June 23rd, 2021ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ […]