ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿಗೂ ತಗುಲಿದ ಕೊರೊನಾ ಸೋಂಕು
Friday, March 13th, 2020ಒಟ್ಟಾವ : ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿ ಸೋಫಿ ಗ್ರೆಗೊಯಿರ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಕೆನಡಾದ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿ ಸ್ಪಷ್ಟಪಡಿಸಿದೆ. ಸೋಫಿ ಗ್ರೆಗೊಯಿರ್ ಅವರ ದೇಹದಲ್ಲಿ ಜ್ವರ ತರಹದ ರೋಗಲಕ್ಷಣ ಕಾಣಿಸಿಕೊಂಡದ್ದರಿಂದ ಪರೀಕ್ಷೆಗೆ ಒಳಪಡಿಲಾಯ್ತು. ಈ ವೇಳೆ ಧನಾತ್ಮಕ ಫಲಿತಾಂಶ ಬಂದಿದೆ. ವೈದ್ಯಕೀಯ ಸಲಹೆಗಳನ್ನು ಅನುಸರಿಸಿ ಆಕೆಯನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು […]