ಕೊನೆಯ ದಿನ ಎಂಟು ವಿಧಾನಸಭಾ ಕ್ಷೇತ್ರಗಳ 35 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
Thursday, April 20th, 2023
ಮಂಗಳೂರು : ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 35 ಅಭ್ಯರ್ಥಿಗಳು ಒಟ್ಟು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 82 ಅಭ್ಯರ್ಥಿಗಳಿಂದ 109 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ದನ್, ಬಿಜೆಪಿಯ ಹರೀಶ್ ಪೂಂಜ (2 ಸೆಟ್), ಜೆಡಿಎಸ್‌ನ ಅಶ್ರಫ್ ಆಲಿ ಕುಂಞಿ, ಪಕ್ಷೇತರ ಅಭ್ಯರ್ಥಿಯಾಗಿ ಕೆ. ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್‌ನ ಅಮರಶ್ರೀ ಅಮರನಾಥ ಶೆಟ್ಟಿ (2 ಸೆಟ್), ಬಿಜೆಪಿಯ […]