Blog Archive

ಕಂದಾಯಾಧಿಕಾರಿಗಳ ಸಭೆ : ಅಂಗನವಾಡಿಗಳಿಗೆ ಜಾಗ ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

Friday, January 17th, 2020
kandaya-sabhe

ಮಡಿಕೇರಿ : ಅಂಗನವಾಡಿ ಕಟ್ಟಡಗಳ ನಿರ್ಮಾಣ ಸಂಬಂಧ ಇನ್ನೂ ಹಲವು ಅಂಗನವಾಡಿಗಳಿಗೆ ಜಾಗ ನೀಡಬೇಕಿದ್ದು, ಕೂಡಲೇ ಜಾಗ ಗುರುತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿ ಅವರು ಕಂದಾಯ ನಿರೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಾಗೆಯೇ ಪಶುಪಾಲನಾ ಇಲಾಖೆಯ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಿವೇಶನ ನೀಡಲಾಗಿದ್ದು, ಆದರೆ ಆರ್‌ಟಿಸಿ ಒದಗಿಸಿರುವುದಿಲ್ಲ. ಆದ್ದರಿಂದ ಆರ್‌ಟಿಸಿಯನ್ನು ತಕ್ಷಣವೇ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. […]

ಸಾವರ್ಕರ್ ಬಗ್ಗೆ ಅಕ್ಷೇಪಾರ್ಹ ಪುಸ್ತಕ ನಿಷೇಧಿಸಿ, ಕ್ರಮಕೈಗೊಳ್ಳಿ; ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

Thursday, January 9th, 2020
DC

ಮಂಗಳೂರು : ಸ್ವಾ.  ಸಾವರ್ಕರ್ ಬಗ್ಗೆ ಅಶ್ಲೀಲವಾಗಿ ಪುಸ್ತಕವನ್ನು ಬರೆಯುವ ಲೇಖಕ ಹಾಗೂ ಅದನ್ನು ಪ್ರಕಾಶಿಸುವವರ ಮೇಲೆ ಕ್ರಮಕೈಗೊಳ್ಳಿ, ಅದೇರೀತಿ ಆ ಪುಸ್ತಕವನ್ನು ದೇಶಾದ್ಯಂತ ತಕ್ಷಣ ನಿಷೇಧಿಸಿ ಹಿಂದೂ ಜನಜಾಗೃತಿ ಸಮಿತಿಯ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಸಿಂಧೂ ಬಿ ರೂಪೇಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ಸಿನ ಸ್ವಾ. ಸಾವರ್ಕರ್ ದ್ವೇಷವು ಇಡೀ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದೆ ! ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಲದ ತರಬೇತಿ ಶಿಬಿರದಲ್ಲಿ ‘ವೀರ ಸಾವರ್ಕರ್  -ಕಿತನೆ ‘ವೀರ’ ?’ (ವೀರ ಸಾವರ್ಕರ್ ಎಷ್ಟು ವೀರರು?) ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ […]

ಭತ್ತಕ್ಕೆ ಬೆಂಬಲ ಬೆಲೆ : ಖರೀದಿಗೆ ಹೆಸರು ನೋಂದಾಯಿಸಲು ಜಿಲ್ಲಾಧಿಕಾರಿ ಮನವಿ

Wednesday, January 1st, 2020
DC-meeting

ಮಡಿಕೇರಿ : ಭತ್ತ ಖರೀದಿ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ರೈತರ ಹೆಸರು ನೋಂದಾಯಿಸುವ ಪ್ರಕ್ರಿಯೆಯು ಜನವರಿ 01 ರಿಂದ ಆರಂಭವಾಗಲಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಬಲ ಬೆಲೆಯಡಿ ಭತ್ತ ಖರೀದಿ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭತ್ತ ಬೆಳೆದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಬೆಂಬಲ ಬೆಲೆ ಘೋಷಿಸಿದ್ದು, ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತೆ […]

ಶಾಲೆಗಳಲ್ಲಿ ನೈತಿಕ ಶಿಕ್ಷಣ ಮತ್ತು ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ ನೀಡಿ : ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಹಿಂದೂ ಜನಜಾಗೃತಿ ಸಮಿತಿ

Friday, December 27th, 2019
HJS

ಮಂಗಳೂರು : ದೇಶಾದ್ಯಂತ ಸಿಎಎ ಕಾನೂನಿನ ಬಗ್ಗೆ ಗಲಭೆ ನಡೆಸುವ ಮತ್ತು ದಂಗೆ ನಡೆಸುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಹೈದರಾಬಾದ್ ನಡೆದ ಪಶುವೈದ್ಯಯ ಅತ್ಯಾಚಾರ ಮತ್ತು ಹತ್ಯೆಯಂತಹ ದುರ್ಘಟನೆಗಳು ನಡೆಯದಂತೆ ಶಾಲೆಗಳಲ್ಲಿ ನೈತಿಕ ಶಿಕ್ಷಣ ಮತ್ತು ಹೆಣ್ಣುಮಕ್ಕಳಿಗೆ ಅತ್ಮ ರಕ್ಷಣೆಯ ತರಬೇತಿಗಳನ್ನು ನೀಡಬೇಕು. ಆಂಧ್ರಪ್ರದೇಶದ ಶಾಲೆಗಳಲ್ಲಿ ಒಂದನೇ ತರಗತಿಯಿಂದ 6ನೇ ತರಗತಿ ವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕು. ಅಲ್ಲದೆ ಮುಂಬರುವ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಕಾನೂನು ಮತ್ತು ವ್ಯವಸ್ಥೆಯನ್ನು ಕೈಗೆ […]

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರು ಆರೋಪಿಗಳಾಗಿದ್ದರೆ ಪರಿಹಾರ ಇಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ

Wednesday, December 25th, 2019
CM

ಮಂಗಳೂರು : ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರು ಅಂದು ನಡೆದ ಹಿಂಸಾಚಾರ ಪ್ರಕರಣದ ಆರೋಪಿಗಳಾಗಿದ್ದರೆ ಸಂತ್ರಸ್ತ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಗೋಲಿಬಾರ್‌ಗೆ ಬಲಿಯಾದವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದ್ದರಿಂದ ಸದ್ಯ 1 ರೂ. ಪರಿಹಾರ ಕೂಡಾ ಕೊಡಲಾಗದು ಎಂದು ಮುಖ್ಯಮಂತ್ರಿ […]

ಗೋದಾಮುಗಳಲ್ಲಿ 50 ಕ್ವಿಂಟಾಲ್ ಈರುಳ್ಳಿ ದಾಸ್ತಾನು ಮಿತಿಗೊಳಿಸಿ : ಜಿಲ್ಲಾಧಿಕಾರಿ

Tuesday, December 10th, 2019
irulli

ಮೈಸೂರು : ಮುಕ್ತ ಮಾರುಕಟ್ಟೆಯಲ್ಲಿ ಮತ್ತು ಸಗಟು ಗೋದಾಮುಗಳಲ್ಲಿ ಈರುಳ್ಳಿ ದಾಸ್ತಾನಿರಿಸುವುದನ್ನು 50 ಕ್ವಿಂಟಾಲ್ ಗೆ ಮಿತಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶಿಸಿದ್ದಾರೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಅವರು ಸರ್ಕಾರವು ಉಲ್ಲೇಖಿತ ಅಧಿಸೂಚನೆಯಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಪರವಾನಿಗೆ ಆದೇಶ 1986 ಅಡಿಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಈರುಳ್ಳಿ ಸಗಟು ಮಾರಾಟಗಾರರಲ್ಲಿ/ಡೀಲರ್ ಗಳಲ್ಲಿ/ಉತ್ಪಾದಕರಲ್ಲಿ/ಕಮಿಷನ್ ಏಜೆಂಟ್ ಗಳಲ್ಲಿ ದಾಸ್ತಾನಿನ ಮಿತಿಯನ್ನು 250ಕ್ವಿಂಟಾಲ್ ಗೆ ಹಾಗೂ ಈರುಳ್ಳಿ ಚಿಲ್ಲರೆ ಮಾರಾಟಗಾರರಲ್ಲಿ ದಾಸ್ತಾನಿನ ಮಿತಿಯನ್ನು 50ಕ್ವಿಂಟಾಲ್ ಗೆ ಮಿತಿಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ. […]

ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

Tuesday, December 3rd, 2019
handi-cap day

ಮಂಗಳೂರು: ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು. ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಮಂಗಳವಾರ ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ […]

ಚಾರ್ಮಾಡಿ ಘಾಟ್ ರಸ್ತೆ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ : ಜಿಲ್ಲಾಧಿಕಾರಿ ಆದೇಶ

Thursday, November 28th, 2019
Charmadi-Ghat

ಮಂಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿ, ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ. ಈ ರಸ್ತೆಯಲ್ಲಿ ಲಘು ವಾಹನಗಳಿಗೆ ನ.28ರಿಂದ ದಿನದ 24 ಗಂಟೆಯೂ ಮುಕ್ತ ಪ್ರವೇಶವಿದೆ. ಆದರೆ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಚಾರ್ಮಾಡಿ ಘಾಟ್‌ನಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ ರಸ್ತೆಗಳು […]

ಮಿಷನ್ ಇಂದ್ರ ಧನುಷ್ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ : ಜಿಲ್ಲಾಧಿಕಾರಿ ಸೂಚನೆ

Tuesday, November 19th, 2019
Madikeri

ಮಡಿಕೇರಿ : ಜಿಲ್ಲೆಯಾದ್ಯಂತ ಡಿ.2 ರಿಂದ 10 ರವರೆಗೆ ನಡೆಯುವ ಮೊದಲನೇ ಸುತ್ತಿನ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಿಷನ್ ಇಂದ್ರಧನುಷ್ ಮತ್ತು ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಿಷನ್ ಇಂದ್ರಧನುಷ್ ಅಭಿಯಾನದಲ್ಲಿ ಯಾವುದೇ ಮಗು […]

ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ : ಜಿಲ್ಲಾಧಿಕಾರಿ

Friday, November 15th, 2019
Kanakadasa-Jayanthi

ಮಡಿಕೇರಿ :  ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ಶುಕ್ರವಾರ ನಡೆದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನಕದಾಸರು ’ನಾನು ಹೋದರೆ, ಹೋದೇನೂ’ ಎಂಬ ಸಂದೇಶ ಸಾರಿದ್ದಾರೆ. ’ನಾನು’ ಎಂಬುದನ್ನು ಬಿಡಬೇಕು, […]