Blog Archive

ನ.2 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ಆಗಮನ : ಕೂಳೂರು-ಸುರತ್ಕಲ್ ಹೆದ್ದಾರಿ ತಕ್ಷಣ ದುರಸ್ತಿಗೆ ಜಿಲ್ಲಾಧಿಕಾರಿ ಸೂಚನೆ

Thursday, October 31st, 2019
Sindhu

ಮಂಗಳೂರು : ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನವೆಂಬರ್ 2ರಂದು ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೂಳೂರಿನಿಂದ ಸುರತ್ಕಲ್ ಎನ್‍ಐಟಿಕೆವರೆಗೆ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ನಡೆಸಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಾಕೀತು ಮಾಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪರಾಷ್ಟ್ರಪತಿಗಳ ಆಗಮನ ಪ್ರಯುಕ್ತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ನಿರಂತರ ಮಳೆಯಿಂದ ದುರಸ್ತಿ ಕಾಮಗಾರಿಗೆ ಅಡ್ಡಿಯಾಗಿದೆ. ಆದರೂ, ಉಪರಾಷ್ಟ್ರಪತಿಗಳ ಆಗಮನ […]

ಮಂಗಳೂರು ಮಹಾನಗರ ಪಾಲಿಕೆಗೆ ನವೆಂಬರ್ 12ಕ್ಕೆ ಚುನಾವಣೆ

Tuesday, October 22nd, 2019
mcc

ಮಂಗಳೂರು  : ರಾಜ್ಯ ಚುನಾವಣೆ ಆಯೋಗವು ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪುರಸಭೆ ಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಗಳಿಗೆ  ನವೆಂಬರ್ 12ನೇ ತಾರೀಕು ಮತದಾನ ನಡೆಯಲಿದೆ. ಅಕ್ಟೋಬರ್ 20ನೇ ತಾರೀಕು ಭಾನುವಾರದಿಂದ ಚುನಾವಣೆ ಮಾದರಿ ನೀತಿ ಸಂಹಿತೆಯು ಜಾರಿ ಆಗುತ್ತದೆ ಎಂದು ಚುನಾವಣಾ ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ  ಬಗ್ಗೆ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವ ದಿನಾಂಕ 24.10.2019 ನಾಮಪತ್ರ ಸಲ್ಲಿಸಲು ಕೊನೆ ದಿನ 31.10.2019 ನಾಮಪತ್ರ ಪರಿಶೀಲಿಸಲು ಕೊನೆ ದಿನ 2.11.2019 […]

ಜೀತ ಪದ್ಧತಿ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ

Wednesday, October 16th, 2019
jeeta-padhati

ವಿಜಯಪುರ : ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಯಶವಂತ ಕಾಂಬಳೆ ಎಂಬುವವರನ್ನು ಅದೇ ಗ್ರಾಮದ ರಮೇಶ ಮಸಳಿ ಹಾಗೂ ಮಲ್ಲೇಶಿ ಮಸಳಿ ಎಂಬುವವರು ಜೀತಕ್ಕೆ ಇಟ್ಟುಕೊಂಡಿರುವುದನ್ನು ಖಂಡಿಸಿ ರಾಜ್ಯ ಛಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಸಮಿತಿ ಸದಸ್ಯರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಛಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಆನಂದ ಔದಿ ಮಾತನಾಡಿ, ಬಿಜ್ಜರಗಿ […]

ಮಂಗಳೂರು : ಹೆದ್ದಾರಿ ದುರಸ್ತಿ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ನಳಿನ್‌ ಕುಮಾರ್‌ ಕಟೀಲು ಸೂಚನೆ

Wednesday, October 16th, 2019
nalin-kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತು ಇತರ ಕಾರಣಗಳಿಗೆ ಗುಂಡಿ ಬಿದ್ದಿರುವ ಹೆದ್ದಾರಿಯನ್ನು ತತ್‌ಕ್ಷಣವೇ ದುರಸ್ತಿ ಗೊಳಿಸುವ ಜತೆಗೆ ಈ ಕುರಿತ ಪ್ರಗತಿ ಪರಿಶೀಲನ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳ ದುರಸ್ತಿ ಬಗ್ಗೆ ಇಲಾಖಾಧಿಕಾರಿಗಳ ಸಭೆಯಲ್ಲಿ ಸಂಸದರು ಈ ಸೂಚನೆ ನೀಡಿದ್ದಾರೆ. ಬಿ.ಸಿ. ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿ ಹದಗೆಟ್ಟಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆ ಕಡಿಮೆಯಾದರೂ […]

ತಲಾಖ್ ಬೇಡ, ಗಂಡ ಬೇಕು : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಿಳೆ

Monday, October 14th, 2019
shivamogga

ಶಿವಮೊಗ್ಗ : ತಲಾಖ್ ನೀಡಿದರೆ ಕಠಿಣ ಶಿಕ್ಷೆಗೆ ಗುರಿ ಮಾಡುವ ಕಾನೂನು ದೇಶಾದ್ಯಂತ ಜಾರಿಯಾಗಿದೆ. ಆದರೂ ತಲಾಖ್ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಲೇ ಇವೆ. ಶಿವಮೊಗ್ಗದಲ್ಲಿಯೂ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಪತಿಯಿಂದ ತಲಾಖ್ ಶಿಕ್ಷೆಗೆ ಗುರಿಯಾದ ಆಯೇಷಾ ಸಿದ್ದಿಕಿ ತನಗೆ ತಲಾಖ್ ಬೇಡ, ಗಂಡ ಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ಆಯೆಷಾ ಸಿದ್ದಿಕಿಗೆ ಪತಿ ಮುಸ್ತಫಾ ಬೇಗ್ ವಾಟ್ಸಪ್ ಮೂಲಕ ತಲಾಖ್ ನೀಡಿದ್ದ. ದುಬೈನಲ್ಲಿ ಕೆಲಸ ಮಾಡುತ್ತಿರುವ ಮುಸ್ತಫಾ ಪತ್ನಿಯೊಂದಿಗೆ ಸಂಬಂಧ ಕಡಿದುಕೊಂಡದ್ದಲ್ಲದೆ, ಆಕೆಗೆ […]

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ ಮರು ಡಾಂಬರೀಕರಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Friday, September 27th, 2019
jilaadhikaari

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ನಿರ್ಮಾಣಗೊಂಡಿರುವ ಹೊಂಡಗಳನ್ನು ಮುಚ್ಚಿಸಿ ಹೆದ್ದಾರಿ ಮರು ಡಾಂಬರೀಕರಣಗೊಳಿಸುವಂತೆ ಮಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ-ಬಿ.ಸಿ ರೋಡ್ ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ನಿರ್ಮಾಣಗೊಂಡಿರುವ ಹೊಂಡಗಳನ್ನು ಮುಚ್ಚಿಸಿ ಹೆದ್ದಾರಿ ಮರು ಡಾಂಬರೀಕರಣಗೊಳಿಸುವ ಸಂಬಂಧ ಡಿಸಿಯವರನ್ನು ಭೇಟಿ ಮಾಡಲಾಯಿತ್ತು. ಸೆ.30ರೊಳಗೆ ತಮ್ಮ ಮನವಿಗೆ ಸ್ಪಂದನೆ ಸಿಗದೇ ಇದ್ದಲ್ಲಿ ಅಕ್ಟೋಬರ್‌ 10ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ75ರ ಶಿರಾಡಿ […]

ರಾಜೀನಾಮೆ ಹಿಂಪಡೆಯಲು ಸಸಿಕಾಂತ್ ಸೆಂಥಿಲ್ ತಟಸ್ಥ

Tuesday, September 10th, 2019
shasikanth senthil

ಮಂಗಳೂರು : ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್ ಅವರ ಮನವೊಲಿಕೆಗೆ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಹಿತೈಷಿಗಳು ಮೇಲಿಂದ ಮೇಲೆ ಪ್ರಯತ್ನ ಮಾಡುತ್ತಲೇ ಇದ್ದಾರೆ. ಭಾನುವಾರ ಸಸಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ ಹಲವರು ರಾಜೀನಾಮೆ ಹಿಂಪಡೆಯುವಂತೆ ಒತ್ತಾಯ ಹೇರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಟಸ್ಥರಾಗಿದ್ದಾರೆ ಸೆಂಥಿಲ್. ತಾನು ನಂಬಿದ್ದ ಸಿದ್ಧಾಂತಗಳ ವಿರುದ್ಧವಾಗಿ ಕೆಲಸ ಮಾಡಲು ತನ್ನಿಂದ ಸಾಧ್ಯವಿಲ್ಲ. ಇದೇ ಕಾರಣಕ್ಕೆ ತಾನು ಈ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಸಸಿಕಾಂತ್ […]

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ನೇಮಕ

Saturday, September 7th, 2019
sindhu-B

ಮಂಗಳೂರು : ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ರೂಪೇಶ್ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.    

ಬಂಟ್ವಾಳ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಬಂಟ್ವಾಳ ತಹಶೀಲ್ದಾರ್ ಭೇಟಿ

Thursday, August 8th, 2019
Bantwala-DC

ಬಂಟ್ವಾಳ:  ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಂಗಳೂರು ಆಯುಕ್ತ ರವಿ ಚಂದ್ರ ನಾಯಕ್ ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳಿಗೆ ಗುರುವಾರ ಭೇಟಿ  ನೀಡಿ ಪರಿಶೀಲನೆ ನಡೆಸಿ ದರು. ಬಂಟ್ವಾಳ, ಬಡ್ಡಕಟ್ಟೆ, ಜಕ್ರಿಬೆಟ್ಟು, ಪಾಣೆಮಂಗಳೂರು , ಆಲಡ್ಕ, ಕಂಚಿಕಾರ್ ಪೇಟೆ ಮುಂತಾದ ಪ್ರದೇಶಗಳಿಗೆ ಬೇಟಿ ನೀಡಿ ಅಲ್ಲಿ ನ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ತಿಳಿಸಿದರು. ಮಳೆ ಕಡಿಮೆಯಾಗಿದ್ದರೂ  ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.7ರಿಂದ ಎರಡು ದಿನ ರೆಡ್ ಅಲರ್ಟ್

Tuesday, August 6th, 2019
house-collapse

ಮಂಗಳೂರು:  ಆ.7ರಿಂದ ಎರಡು ದಿನ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಿ ರುವುದಾಗಿ ದ.ಕ ಜಿಲ್ಲಾಧಿ ಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಗುಡ್ಡಕುಸಿತ, ರಸ್ತೆಗೆ ಮರ ಬಿದ್ದಿದ್ದು, ಕಡಲ್ಕೊರೆತವು ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದರು. ನೆರೆ ಪೀಡಿತ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಿ ಎಂದು ಜಿಲ್ಲಾಧಿಕಾರಿ ಮಾಹಿತಿ […]