Blog Archive

ಅಬ್ಬಕ್ಕ ಉತ್ಸವ ಅರ್ಥಪೂರ್ಣವಾಗಿ ಆಚರಿಸಿ- ಜಿಲ್ಲಾಧಿಕಾರಿ

Friday, February 15th, 2019
DC Shenthil

ಮಂಗಳೂರು : ವೀರರಾಣಿ ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಉಳ್ಳಾಲದ ಸಮುದ್ರ ತೀರದಲ್ಲಿ ಉತ್ತಮ ವೇದಿಕೆಯನ್ನು ರಚಿಸಿ ಅತ್ಯುತ್ತಮ ಸಾಂಸ್ಕøತಿಕ ಕಾರ್ಯಕ್ರಮಗಳನ್ನೊಳಗೊಂಡಂತೆ ರಾಣಿ ಅಬ್ಬಕ್ಕನ ಐತಿಹ್ಯವನ್ನು ಸಾರುವ ಕಾರ್ಯಕ್ರಮಗಳನ್ನು ರೂಪಿಸಲು ವಿವಿಧ ಸಮಿತಿಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಿಇಒ ಡಾ ಸೆಲ್ವಮಣಿ ಅವರು ಕಾರ್ಯಕ್ರಮಕ್ಕೆ ನೋಡಲ್ ಅಧಿಕಾರಿಯಾಗಿದ್ದು, […]

ಜಿಲ್ಲೆಯಲ್ಲಿ ಒಟ್ಟು 16,98,868 ಅರ್ಹ ಮತದಾರರ ಪಟ್ಟಿ ಪ್ರಕಟ

Wednesday, January 16th, 2019
Dc-voters

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಮತದಾರರ ಪಟ್ಟಿಯ ಅಂತಿಮ ಯಾದಿಯನ್ನು ಇಂದು ಪ್ರಕಟಿಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ ಒಟ್ಟು 16,98,868 ಮತದಾರರಿದ್ದಾರೆ. ಅದರಲ್ಲಿ 8,64,045 ಮಹಿಳೆಯರಿದ್ದು ಲಿಂಗಾನುಪಾತ 1,035 ಆಗಿದೆ ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ ಸೆಂಥಿಲ್ ತಿಳಿಸಿದ್ದಾರೆ. ಅವರು ಬುಧವಾರ ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅಂತಿಮ ಮತದಾರ ಪಟ್ಟಿಯ ಮಾಹಿತಿಗಳನ್ನು ಬಹಿರಂಗ ಪಡಿಸಿದರು. ಒಟ್ಟು ಮತದಾರರಲ್ಲಿ 8,34,725 ಪುರುಷ ಮತದಾರರು ಮತ್ತು 98 ಇತರರಾಗಿದ್ದಾರೆ. ಮತದಾರ ಮತ್ತು ಜನಸಂಖ್ಯಾ ದರ ಪ್ರತಿಶತ 75.06 ಆಗಿದ್ದು, […]

ಮಂಗಳೂರು ನದಿ ಉತ್ಸವಕ್ಕೆ ಎಲ್ಲಾ ಸಿದ್ಧತೆ : ಜಿಲ್ಲಾಧಿಕಾರಿ

Tuesday, January 8th, 2019
River Festival

ಮಂಗಳೂರು : ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ […]

ಅಪಾಯಕಾರಿ ಹಂತದಲ್ಲಿ ಕೂಳೂರು ಸೇತುವೆ… ವಾಹನ ಸಂಚಾರಕ್ಕೆ ನಿಷೇಧ ಸಾಧ್ಯತೆ!

Wednesday, October 3rd, 2018
kuloor

ಮಂಗಳೂರು: ಮಂಗಳೂರಿನ ಕೂಳೂರಿನಲ್ಲಿ ಇರುವ ಸೇತುವೆಯೊಂದು ಅಪಾಯದ ಅಂಚಿನಲ್ಲಿದೆ ಎಂದು ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್ ವಿಭಾಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದು ತತ್ ಕ್ಷಣದಿಂದ ಸೇತುವೆಯಲ್ಲಿ ಸಂಚಾರ ನಿಷೇಧಿಸಲು ಸೂಚಿಸಿದೆ. ಕೇರಳದಿಂದ ಉತ್ತರ ಭಾರತಕ್ಕೆ ಸಂಪರ್ಕಿಸುವ ಮಂಗಳೂರಿನ ಕೂಳೂರು ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಲ್ಲ. ಅದರಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾದದ್ದು ಎಂಬ ವರದಿಯನ್ನು ಹೆದ್ದಾರಿ ಇಲಾಖೆಯ ಇಂಜಿನಿಯರ್ ವಿಭಾಗ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಜಿಲ್ಲಾಡಳಿತ ಈ ಸೇತುವೆಯಲ್ಲಿ ಸಂಚಾರ ನಿಷೇಧ ಆದೇಶ ಮಾಡಲಿದೆ. ಸ್ವಾತಂತ್ರ್ಯ […]

ಗದಗ ಜಿಲ್ಲೆ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

Tuesday, August 7th, 2018
Gadag Dc

ಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆಯ.ಎ.ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಚವ್ಹಾಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ […]

ಕುಸಿಯುವ ಭೀತಿಯಲ್ಲಿ ಮಂಗಳೂರಿನ ಕಂದಾಯಭವನ ಕಟ್ಟಡ

Wednesday, July 18th, 2018
Kandaya bhavana

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಂದಾಯಭವನ ಕಟ್ಟಡ ಆವರಣ ಗೋಡೆ ಕುಸಿದು, ಎರಡು ಅಂತಸ್ತಿನ ಕಂದಾಯಭವನ ಕಟ್ಟಡವೂ ಸಹ ಕುಸಿದು ಬೀಳುವ ಅಪಾಯದಲ್ಲಿದೆ. ಕಂದಾಯ ಭವನ 2017 ರಲ್ಲಿ ಕೇವಲ ತಳ ಅಂತಸ್ತಿನಲ್ಲಿತ್ತು. ಮತ್ತೆ ಕಂದಾಯ ಇಲಾಖೆಯ ಕೆಲಸಗಾರರ ಅಶೋಸಿಯೇಶನ್ ಜಿಲ್ಲಾಧಿಕಾರಿಗಳಿಂದ ಎರಡು ಅಂತಸ್ತು ಸೇರ್ಪಡೆಗೊಳಿಸಲು ಅನುಮತಿ ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀಮಳೆಗೆ ಕಂದಾಯಭವನ ಕಟ್ಟದ ಆವರಣ ಗೋಡೆ ಕುಸಿದು ಪಕ್ಕದ ಇನ್ನೊಂದು ಕಟ್ಟಡದ ಮೇಲೆ ಬಿದ್ದಿದೆ. ಇದಕ್ಕೆ ಮಳೆನೀರು ಹರಿದು […]

ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Monday, July 16th, 2018
hindu

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ’ಹಜ್ ಹೌಸ್’ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು […]

ಉದ್ಘಾಟನೆಯಾದ್ರೂ ಬಸ್​, ಲಾರಿಗಳ ಸಂಚಾರಕ್ಕೆ ನಿಷೇಧ..!

Monday, July 16th, 2018
prohibition

ಮಂಗಳೂರು: ಇಂದು ಉದ್ಘಾಟನೆಯಾದ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಅಪೂರ್ಣವಾಗಿರುವುದರಿಂದ ಘನ ವಾಹನ ಮತ್ತು ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಶಿರಾಡಿ ಐ.ಬಿ ಯಲ್ಲಿ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್, ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಗುತ್ತಿಗೆದಾರರು 15 ದಿನಗಳಲ್ಲಿ ಡೇಂಜರ್ ಝೋನ್ ಕಾಮಗಾರಿ ಮುಗಿಸುವಂತೆ ಸಭೆಯಲ್ಲಿ ಸೂಚಿಸಲಾಗಿದೆ. ಈ ಅವಧಿಯಲ್ಲಿ ಕೇವಲ ದ್ವಿಚಕ್ರ, ಮಿನಿಬಸ್, ಟೆಂಪೋ ಟ್ರಾವೆಲರ್ಸ್ಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಬೇಡಿಕೆ ಈಡೇರಿಕೆಗೆ ಆಗ್ರಹ… ಮತ್ತೆ ಉಪವಾಸ ಕುಳಿತ ಸುದತ್ತ ಜೈನ್

Friday, March 30th, 2018
suddath-jain

ಮಂಗಳೂರು: ಕಾರ್ಮಿಕರ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು 97 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಖಿಲ ಭಾರತ ಕಾರ್ಮಿಕ ಸಂಘದ ಸ್ಥಾಪಕ ಅಧ್ಯಕ್ಷ ಸುದತ್ ಜೈನ್ ಅವರು ಈಗ ಮತ್ತೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಬದುಕು, ಬದುಕಲು ಬಿಡು’ ಘೋಷಣೆಯಡಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಹಾವೀರ ಜಯಂತಿಯಂದು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಆರೋಗ್ಯ ಭದ್ರತೆ, ವೇತನ ಭದ್ರತೆ, ಉದ್ಯೋಗ ಭದ್ರತೆ, ವಾಸ್ತವ್ಯ ಭದ್ರತೆಯನ್ನು ಸಮರ್ಪಕವಾಗಿ […]

ಮೊದಲಿನ ಸ್ನೇಹ ಸಂಬಂಧದತ್ತ ಜನರ ಹೆಜ್ಜೆ

Friday, March 9th, 2018
byndoor

ಬೈಂದೂರು: ನಾವುಂದದ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಹೆದ್ದಾರಿ ಅಂಡರ್‌ಪಾಸ್ ಬೇಕು, ಅದು ಬೇಡ ‘ಯು’ ತಿರುವು ಸಾಕು ಎಂದು ಸರಿಸುಮಾರು ಎರಡು ವರ್ಷ ನಡೆದ ಹೊಯ್ದಾಟ ಈಗ ಅಂತಿಮವಾಗಿ ಸಮಸ್ಥಿತಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಮೂಲ ಯೋಜನೆಯಂತೆ ಅಂಡರ್‌ಪಾಸ್ ಕಾಮಗಾರಿ ಆರಂ ಭವಾಗಿ, ದಿನದಿಂದ ದಿನಕ್ಕೆ ವೇಗ ಪಡೆಯುವುದರೊಂದಿಗೆ ಎರಡು ತೀವ್ರಾಭಿಪ್ರಾಯಗಳ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ ಇಲ್ಲಿನ ನಾಗರಿಕರು. ಮೂಲ ಯೋಜನೆಯಂತೆ ಇಲ್ಲಿ ಅಂಡರ್‌ಪಾಸ್ ರಚನೆಯಾಗಬೇಕು. ಆದರೆ ಇದಕ್ಕೆ […]