Blog Archive

ಧಾರವಾಡ: ಜಿಲ್ಲೆಯಲ್ಲಿ ಮದ್ಯ ಮಾರಾಟ, ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್

Sunday, May 30th, 2021
Nithish Pateel

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ಗಂಟೆಯ ಅವಧಿಯಲ್ಲಿ […]

ಆಧ್ಯತಾ ಗುಂಪುಗಳಿಗೆ ಮೊದಲು ಲಸಿಕೆ ನೀಡಿ – ಗದಗ ಡಿಸಿ

Friday, May 28th, 2021
Sundaresh

ಗದಗ : ಸರ್ಕಾರ ತಿಳಿಸಿದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯ ನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿ.ಪಂ. ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಅನುಸಾರ ಲಸಿಕೆ ನೀಡಲು ನಿಗದಿಪಡಿಸಲಾದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಹಾಗೂ ಈಗಾಗಲೇ ಪ್ರಥಮ ಡೋಸ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಥಮಾದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ […]

ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಪೀಡಿಸಿದರೆ ದೂರು ಕೊಡಿ

Friday, May 28th, 2021
KV Rajendra

ಮಂಗಳೂರು :  ಮೈಕ್ರೋ ಫೈನಾನ್ಸ್‌ಗಳು, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗಾಗಿ ಸಾಲಗಾರರನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅದರ ಮೇಲ್ವಿಚಾರಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನೂ ಕೂಡ ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಯಾವುದೇ ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಒತ್ತಡ ಹಾಕಿದರೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ (9449860916), ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ (9448633338)ಅವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಅವರು ಸಾಲಗಾರರ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ […]

ಧಾರವಾಡ ಜಿಲ್ಲೆಯ ಗ್ರಾಮಗಳಲ್ಲೂ ಕೋವಿಡ್ ಕಾಳಜಿ ಕೇಂದ್ರ : ನಿತೇಶ ಪಾಟೀಲ್

Thursday, May 27th, 2021
Nithesh Pateela

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಹೋಬಳಿ, ಗ್ರಾ. ಪಂ. ವ್ಯಾಪ್ತಿಯಲ್ಲಿ ಕೋವಿಡ್ ಕಾಳಜಿ ಕೇಂದ್ರಗಳನ್ನು ಪ್ರಾರಂಭ ಮಾಡಿ ಕೋವಿಡ್ ಮುಕ್ತ ಹಳ್ಳಿ ಮಾಡುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ನಗರದ ಸಕ್ರ್ಯೂಟ್ ಹೌಸ್‍ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಇತ್ತಿಚೆಗೆ ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಲಕ್ಷಣಯುಳ್ಳವರು ಐಸೋಲೇಶನ್ ಆಗಲು ಪಟ್ಟಣದ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ದಿಸೆಯಲ್ಲಿ ಜಿಲ್ಲಾಡಳಿತದಿಂದ ಹಳ್ಳಿಗಳಲ್ಲಿಯೇ ಕೋರೋನಾ ಕಾಳಜಿ ಕೇಂದ್ರ ತೆರೆದು […]

ಪಿಎಮ್ ಕೇರ್ ಫಂಡ್‌ದಿಂದ ರಾಜ್ಯಕ್ಕೆ ಬಂದಿರುವ ವೆಂಟಿಲೇಟರಗಳನ್ನುಕೂಡಲೇ ಉಪಯೋಗಿಸಿ

Wednesday, May 26th, 2021
ventilator

ಮಂಗಳೂರು : ವೆಂಟಿಲೇಟರ್ ಗಳ ಸೌಲಭ್ಯ ಸಿಗುವುದಕ್ಕೆ ಆಗುತ್ತಿರುವ ತೊಂದರೆ ಯ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಹಾಯ ಸಮಿತಿಯ ವತಿಯಿಂದ ಇಮೇಲ್ ಮೂಲಕ ಮನವಿ ಸಲ್ಲಿಸಲಾಯಿತು. ಇಂದು ಇಡೀ ರಾಜ್ಯ ಕೊರೋನಾ 2ನೇ ಅಲೆಗೆ ತತ್ತರಿಸಿ ಜಿಲ್ಲೆ, ತಾಲೂಕು ಸ್ಥರದ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ, ವೆಂಟಿಲೇಟರ ಸಿಗದೇ ಕೊರೋನಾ ರೋಗಿಗಳ ಮೃತ್ಯು ಪ್ರಮಾಣವು ಹೆಚ್ಚಾಗುತ್ತಿದೆ. ಇಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಕ್ಕೆ ೮ ತಿಂಗಳ ಮೊದಲೇ ಪಿಎಮ್ ಕೇರ್ […]

ಉಡುಪಿ ಜಿಲ್ಲೆಯಲ್ಲಿ ಜೂ.7ರ ವರೆಗೆ ಮದುವೆಗೆ ಅನುಮತಿ ಇಲ್ಲ

Monday, May 24th, 2021
Udupi-DC

ಉಡುಪಿ :   ಮೇ 25ರಿಂದ ಜೂ.7ರ ವರೆಗೆ  ಉಡುಪಿ ಜಿಲ್ಲೆಯಲ್ಲಿ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮದುವೆಯಿಂದ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.  ಮದುವೆ ಆಗಲು ನಿರ್ಧಾರ ಮಾಡಿದವರು ಅದನ್ನು ಮುಂದೂಡಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಈ […]

ಧಾರವಾಡ: ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ- ಡಿಸಿ

Friday, May 21st, 2021
Nithish Pateel

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಾಳೆ (ಮೇ 22ರ) ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ, ಕೋವಿಡ್ ತಡೆಗಟ್ಟುವುದಕ್ಕಾಗಿ ಲಾಕ್‌ಡೌನ್ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿನಂತಿಸಿದರು. ಅವರು ಇಂದು ಸಂಜೆ ಧಾರವಾಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚವಲ್ ಆನ್‍ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಲಾಕ್‌ಡೌನ್ ಅವಧಿಯ ಎರಡು ದಿನ ಬೆಳಿಗ್ಗೆ 6ರಿಂದ 8 ಗಂಟೆಯವರೆಗೆ ನಾಗರಿಕರು ತಮ್ಮ […]

ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಟಗ್ ಬೋಟಿನ ಎಲ್ಲಾ 9 ಜನರ ರಕ್ಷಣೆ

Monday, May 17th, 2021
Tug boat Rescue

ಮಂಗಳೂರು  : ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳೀನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರೊಂದಿಗೆ ಕೋಸ್ಟಲ್ ಗಾರ್ಡ್ ಡಿ. ಐ.ಜಿ ಶ್ರೀ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್ […]

ದಿಲ್ಲಿಗೆ ಹೋಗಿ ಏನ್ ಮಾಡ್ತಿಯಾ?: ಯೋಗೇಶ್ವರ್ ಮೇಲೆ ರೇಣುಕಾಚಾರ್ಯ ಗರಂ

Friday, May 14th, 2021
Renukacharya

ದಾವಣಗೆರೆ: ಸಚಿವ ಸಿ. ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸೋತರೂ ಮಂತ್ರಿ ಮಾಡಿದ್ದಕ್ಕೆ ದೆಹಲಿಯಲ್ಲಿ ಲಾಬಿ ಮಾಡ್ತೀಯಾ‌. ಯಾರೋ ಒಬ್ಬರು ಲಾಬಿ ಮಾಡಿದಾಕ್ಷಣ ಸಿಎಂ ಬದಲಾವಣೆ ಮಾಡ್ತಾರಾ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಅಂತಾ ಸುಮ್ಮನಿದ್ದೇನೆ. ಇದೆಲ್ಲಾ ಮುಗಿದ ಮೇಲೆ ಮಾತನಾಡ್ತೇನೆ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಜನರು ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಕ್ಸಿಜನ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ

Thursday, May 13th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಈಗಾಗಲೇ ಸರಕಾರ ಹೊರಡಿಸಿರುವ ಮೇ 10ರಿಂದ ಮೇ 24ರ ತನಕದ ಲಾಕ್ ಡೌನ್ ಮುಂದುವರೆಯಲಿದೆ. ಆ ಮಾರ್ಗಸೂಚಿಯೇ ಮುಂದುವರೆಯಲಿದೆ. ಅದನ್ನು ಹೊರತು ಪಡಿಸಿ ಉಳಿದಂತೆ ಯಾವುದೇ ಪ್ರತ್ಯೇಕ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಹಾಗೂ ರವಿವಾರದಂದು ಬೆಳಗ್ಗೆ 9 […]