ಹೊಸ ವರ್ಷದಂದು ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
Sunday, December 27th, 2020ಉಡುಪಿ : ಸಾರ್ವಜನಿಕವಾಗಿ ಹೊಸ ವರ್ಷದಂದು ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಹೊಸ ವರ್ಷದ ಆಚರಣೆಯ ಸಮಯದಲ್ಲಿ ಕೂಡ ಎಲ್ಲಾ ರೀತಿಯ ಕೊರೊನಾ ನಿಯಮಗಳನ್ನು ಪಾಲಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸರ್ಕಾರ ಹೊರಡಿಸಿದ ವಿಶೇಷ ಮಾರ್ಗಸೂಚಿಗಳು ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಾಲ್ಕು ದಿನಗಳವರೆಗೆ ಅನ್ವಯಿಸುತ್ತವೆ ಎಂದು ಅವರು ಹೇಳಿದ್ದಾರೆ. ಹೊಸ ವರ್ಷದಂದು ಯಾವುದೇ ಪಬ್, ರೆಸ್ಟೋರೆಂಟ್, ಹೋಟೆಲ್, ಕೆಫೆಗಳು […]