ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]

ಕರಾವಳಿ ಪ್ರಾಧಿಕಾರ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ಅಭಿವೃದ್ಧಿ ಪರಿಶೀಲನಾ ಸಭೆ

Tuesday, November 23rd, 2010
ಕರಾವಳಿ ಪ್ರಾಧಿಕಾರ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ಅಭಿವೃದ್ಧಿ ಪರಿಶೀಲನಾ ಸಭೆ

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯ ಹದಗೆಟ್ಟ ನಗರ ಹಾಗೂ ಗ್ರಾಮೀಣ ರಸ್ತೆಗಳನ್ನು ಸಂಚಾರಯೋಗ್ಯವನ್ನಾಗಿ ಮಾಡಲು ಹಾಗೂ ದೊಡ್ಡ ದೊಡ್ಡ ಹೊಂಡಗಳನ್ನು ನವೆಂಬರ್ 10 ರೊಳಗೆ ಮುಚ್ಚಬೇಕೆಂದು ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಬಿ. ನಾಗರಾಜ ಶೆಟ್ಟಿ ಅವರು ಇಲಾಖಾಧಿಕಾರಿಗಳಿಗೆ ಗಡುವು ನೀಡಿದ್ದರು. ಈ ಆದೇಶ ಪರಿಪಾಲನೆಗೆ ಸಂಬಂಧಿಸಿದಂತೆ ರಸ್ತೆ ಕಾಮಗಾರಿ ಅಭಿವೃದ್ಧಿ ಕುರಿತ ಸಭೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಲೋಕೋಪಯೋಗಿ, ಮಹಾನಗರಪಾಲಿಕೆ, ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು […]