ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲ ಎಂದು ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ

Thursday, September 2nd, 2021
Vaccination

ಬೆಂಗಳೂರು : ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಕಾರಿನಲ್ಲಿ ಮಲಗಿದ್ದವನನ್ನು ಎಬ್ಬಿಸಲು ಆ್ಯಂಬುಲೆನ್ಸ್‌ ಬರಬೇಕಾಯಿತು!

Wednesday, January 31st, 2018
omni-car

ಮಂಗಳೂರು: ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಲು ಆ್ಯಂಬುಲೆನ್ಸ್‌ ಬರಬೇಕಾಯಿತು!ಇಂಥದ್ದೊಂದು ಕುತೂಹಲಕಾರಿ ಘಟನೆಗೆ ಹಂಪನಕಟ್ಟೆ ಪರಿಸರ ಸಾಕ್ಷಿಯಾಯಿತು. ಅಪರಿಚಿತನೊಬ್ಬ ತನ್ನ ಆಮ್ನಿ ಕಾರಿನಲ್ಲಿ ನಿದ್ರಿಸಿದ್ದರು. ಸಾರ್ವಜನಿಕರು ಅವರನ್ನು ಎಬ್ಬಿಸಲು ವಿಫ‌ಲರಾದಾಗ, ಕೊನೆಗೆ ಏನಾ ದರೂ ಅನಾಹುತ ಸಂಭವಿಸಿರಬಹುದೇ ಎಂಬ ಆತಂಕದಿಂದ ಆ್ಯಂಬುಲೆನ್ಸ್‌ ಕರೆಸಿದರು. ಹಂಪನಕಟ್ಟೆಯ ವಿ.ವಿ. ಕಾಲೇಜಿನ ಮುಂಭಾಗದಲ್ಲಿ ಸೋಮವಾರ ಸಂಜೆ 3 ಗಂಟೆಯ ಸುಮಾರಿಗೆ ಕೆಎ 13 ನೋಂದಣಿಯ ಮಾರುತಿ ಆಮ್ನಿ ಕಾರಿನ ಡ್ರೈವರ್‌ ಸೀಟಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ. ಸ್ಟೇರಿಂಗ್‌ ಹಿಡಿದು ಮಲಗಿದ್ದ ಆತನ ಬಾಯಿಂದ ನೊರೆ […]

ಹದಿಹರೆಯದ ಮಕ್ಕಳನ್ನು ಪೋಷಕರು ಬಹಳ ಜಾಗರೂಕತೆಯಿಂದ ಪೋಷಿಸಬೇಕು : ರಾಮಕೃಷ್ಣ ರಾವ್

Wednesday, June 28th, 2017
drugs day

ಮಂಗಳೂರು  : ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ […]