ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ

Thursday, February 4th, 2021
Lukman

ಮಂಗಳೂರು : ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಜನವರಿ 10,11,12 ನೇ ದಿನಾಂಕದಂದು ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು. ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದು […]

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ದಿ.ಬೊಂಡಾಲ ಜಗನ್ನಾಥ ಶೆಟ್ಟಿಯವರ ಪ್ರಥಮ ಪುಣ್ಯತಿಥಿ ಆಚರಣೆ

Wednesday, July 31st, 2013
Bondala death anniversary

ಮಂಗಳೂರು : ದಿ.ಬೊಂಡಾಲ ಜಗನ್ನಾಥ ಶೆಟ್ಟಿಯವರ ಪ್ರಥಮ ಪುಣ್ಯತಿಥಿಯನ್ನು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ  ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣುಹಂಪಲುಗಳನ್ನು ನೀಡುವ ಮೂಲಕ ಆಚರಿಸಲಾಯಿತು. ಬಳಿಕ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿಯವರು ಬಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ಯುವ ಕಾಂಗ್ರೆಸ್ ನಾಯಕನಿಗೆ ಶ್ರದ್ದಾಂಜಲಿ ಸಮರ್ಪಿಸಲಾಯಿತು. ಶ್ರದ್ದಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ  ಅಧ್ಯಕ್ಷ ಮಿಥುನ್ ರೈ ಮಾತನಾಡಿ 2001 […]