ವಿಧಾನಸಭಾ ಚುನಾವಣೆಗೆ ದಿನ ನಗದಿ ಮೇ 10 ಚುನಾವಣೆ, 13 ರಕ್ಕೆ ಫಲಿತಾಂಶ

Wednesday, March 29th, 2023
ವಿಧಾನಸಭಾ ಚುನಾವಣೆಗೆ ದಿನ ನಗದಿ ಮೇ 10 ಚುನಾವಣೆ, 13 ರಕ್ಕೆ ಫಲಿತಾಂಶ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ನಗದಿಯಾಗಿದ್ದು. ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13 ರಂದು ಫಲಿತಾಂಶ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಇನ್ನು ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್ 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ ಸಹ ಅಬ್ಬರದ […]

ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಆರಂಭ

Friday, June 10th, 2022
vote

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಗೊತ್ತಾಗುತ್ತದೆ. ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.ಮತದಾನ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. […]

ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ತಡೆ ವಿಧೇಯಕ ಅಂಗೀಕಾರ

Thursday, December 23rd, 2021
Conversion-bill

ಬೆಳಗಾವಿ : ಎರಡು ದಿನಗಳ ವಾದ-ವಿವಾದಗಳ ಬಳಿಕ ಇಂದು ಸುದೀರ್ಘವಾಗಿ ನಡೆದ ಚರ್ಚೆಯಲ್ಲಿ  ಮತಾಂತರ ತಡೆ ವಿಧೇಯಕ ಅಂಗೀಕಾರ ಆಗಿದೆ. 2016ರಲ್ಲಿ ಕಾನೂನು ಆಯೋಗ ಸಿದ್ಧಪಡಿಸಿದ್ದ ಮತಾಂತರ ನಿಷೇಧ ವಿಧೇಯಕದ ಕರಡು ಪ್ರತಿಗೆ ಅಂದಿನ ಕಾನೂನು ಸಚಿವ ಟಿ.ಬಿ. ಜಯಚಂದ್ರ ಒಪ್ಪಿಗೆ ನೀಡಿದ್ದನ್ನು ಬಿಜೆಪಿ ಪ್ರದರ್ಶಿಸಿತು. ಅಷ್ಟೇ ಅಲ್ಲ, ಆ ಪ್ರತಿಗೆ ಅಂದಿನ ಸಿಎಂ ಸಿದ್ದರಾಮಯ್ಯ ಕರಡು ಪ್ರತಿ ಒಪ್ಪಿ ಕ್ಯಾಬಿನೆಟ್ಗೆ ಕಡತ ಮಂಡಿಸುವಂತೆ ಸಹಿ ಮಾಡಿದ್ದರ ಬಗ್ಗೆ ಸಚಿವ ಮಾಧುಸ್ವಾಮಿ ಹೇಳುತ್ತಿದ್ದಂತೆ, ಇದಕ್ಕೆ ಉತ್ತರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಕಕ್ಕಾಬಿಕ್ಕಿಯಾದ […]

ಜೆಡಿಎಸ್ ಪಕ್ಷದ ತತ್ವ ಸಿದ್ದಾಂತವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಅನುಸರಿಸುತ್ತಾ ಬಂದಿದೆ : ಲೀಲಾವತಿ ಆರ್ ಪ್ರಸಾದ್

Sunday, March 21st, 2021
JDS

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾದಳ ಮಹಿಳಾ ಘಟಕದ ವತಿಯಿಂದ ಮಹಿಳಾ ಸಮಾವೇಶ ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಕಾರ್ಯಕ್ರಮ ಮಂಗಳೂರಿನ ಕದ್ರಿಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮಾಜಿ ಸಚಿವೆ, ಜೆಡಿಎಸ್ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಲೀಲಾವತಿ ಆರ್ ಪ್ರಸಾದ್ ದೀಪಬೆಳಗಿ ಚಾಲನೆ ನೀಡಿದರು. ಬಳಿಕ ಗ್ರಾಮಾಪಂಚಯತ್ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಅಭ್ಯರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ಕು ಮಹಿಳಾ ಸಾಧಕಿಯರಿಗೆ ಸನ್ಮಾನ […]

ದೇವರಿಗೆ ಪೂಜೆ ಸಲ್ಲಿಸುವ ವಿಚಾರದಲ್ಲಿ ಬಿಜೆಪಿ‌, ಜೆಡಿಎಸ್ ಮುಖಂಡರ ನಡುವೆ ಜಗಳ

Friday, January 17th, 2020
mandya

ಮಂಡ್ಯ : ದೇವರಿಗೆ ಮೊದಲು ಪೂಜೆ ಸಲ್ಲಿಸುವ ವಿಚಾರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ‌ ಮುಖಂಡರ ನಡುವೆ ಜಗಳವಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಗವಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗಲಾಟೆ ನಡೆದಿದೆ. ಶುಕ್ರವಾರ ನಡೆದ ಗವಿರಂಗನಾಥಸ್ವಾಮಿಯ ರಥೋತ್ಸವ ಚಾಲನೆ ವೇಳೆ ತಾವೇ ಮೊದಲು ಪೂಜೆ ಸಲ್ಲಿಸುವುದಾಗಿ ಬಿಜೆಪಿ ಶಾಸಕ ನಾರಾಯಣಗೌಡ, ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಮೊದಲು ನಾನು ಪೂಜೆ ಮಾಡಬೇಕು ಎಂದು ರಾಜಹುಲಿ […]

ಪ್ರಧಾನಿಯಿಂದ ಸಂವಿಧಾನಕ್ಕೆ ಗುಂಡಿಡುವ ಪ್ರಯತ್ನ ನಡೆದಿದೆ : ದೇವನೂರು ಮಹದೇವ ಗಂಭೀರ ಆರೋಪ

Saturday, January 11th, 2020
samavesha

ಮಡಿಕೇರಿ : ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಡುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹದೇವ ಗಂಭೀರ ಆರೋಪ ಮಾಡಿದ್ದಾರೆ. ಪ್ರಗತಿಪರರ ಜನಾಂದೋಲನ ವೇದಿಕೆ ವತಿಯಿಂದ ಮಡಿಕೆರಿಯ ಗಾಂಧಿ ಮೈದಾನದಲ್ಲಿ ನಡೆದ ’ಪೌರತ್ವ ಕಾಯ್ದೆ ವಿರುದ್ಧದ ಜನಾಂದೋಲನ ಸಮಾವೇಶ’ದಲ್ಲಿ ಮಾತನಾಡಿದ ಅವರು, ಕಾಯ್ದೆ ಕುರಿತು ಆತಂಕ ವ್ಯಕ್ತಪಡಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿಯವರಿಗೆ ನಮಸ್ಕರಿಸಿದ ಬಳಿಕ ಎದೆಗೆ […]

ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

Saturday, January 11th, 2020
ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

ಮಡಿಕೇರಿ : ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಜ.11 ರಂದು ಮಡಿಕೇರಿಯಲ್ಲಿ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಜನಾಂದೋಲನ ಸಭೆ ನಡೆಯಲಿದ್ದು, ಈ ಸಮಾವೇಶದಲ್ಲಿ ಬಿಜೆಪಿಯೇತರವಾದ ಎಲ್ಲಾ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ. ಆದರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋಮುವಾದಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ […]

ಉಪಚುನಾವಣೆ : ಬಿಜೆಪಿ-12 ಸ್ಥಾನ, ಕಾಂಗ್ರೆಸ್ -2, ಪಕ್ಷೇತರ-1, ಜೆಡಿಎಸ್-0

Monday, December 9th, 2019
yediyurappa

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ 12 ಸ್ಥಾನಗಳನ್ನು ಪಡೆದು, ಜೆಡಿಎಸ್ ಸೂನ್ಯ,  ಪಕ್ಷೇತರ-1  ಹಾಗೂ ಕಾಂಗ್ರೆಸ್ ಕೇವಲ 2 ಸ್ಥಾನಗಳ ಮೂಲಕ ಭಾರೀ ಹಿನ್ನಡೆಯನ್ನು ಪಡೆದಿದೆ. ಬಿಜೆಪಿ ಸರಕಾರ ರಚನೆಗೆ ಕಾರಣವಾದ  ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ […]

ಋಣಮುಕ್ತ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲು ಮಹಿಳಾ ಜೆಡಿಎಸ್ ಆಗ್ರಹ

Wednesday, November 6th, 2019
JDS

ಮಡಿಕೇರಿ : ಅ ಕಾಯ್ದೆ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಬೇಕು ಮತ್ತು ವಿವಿಧ ಸಂಘ ಸಂಸ್ಥೆ, ಮೈಕ್ರೋ ಫೈನಾಸ್‌ಗಳಿಂದ ಬಡವರು ಹಾಗೂ ಕಾರ್ಮಿಕರು ಪಡೆದ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕ ಮತ್ತು ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಋಣಮುಕ್ತ ಯೋಜನೆ ಅರ್ಜಿಯನ್ನು ನೀಡಲು ಆಧಾರ್‌ಕಾರ್ಡ್, ಐ.ಡಿ.ಕಾರ್ಡ್, ರೇಷನ್ ಕಾರ್ಡ್, ಭೂಮಿ ಹಿಡುವಳಿ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಇತರ ದಾಖಲೆಗಳನ್ನು […]

ಹಾಸ್ಟೇಲ್ ನೌಕರರ ದಿಢೀರ್ ವಜಾ : ಜೆಡಿಎಸ್ ಅಸಮಾಧಾನ

Monday, November 4th, 2019
Hostel-nawkara

ಮಡಿಕೇರಿ : ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೊರ ಸಂಪನ್ಮೂಲ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆಯವರು, ಅಡುಗೆ ಸಹಾಯಕರು ಹಾಗೂ ಕಾವಲುಗಾರರನ್ನು ಏಕಾಏಕಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕಿನ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಮಡಿಕೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರಿಗೆ ಮನವಿ ಸಲ್ಲಿಸಿದ ನೌಕರರು ತಮಗಾದ ಅನ್ಯಾಯದ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲೂಕಿನ ವಿಸ್ತರಣಾಧಿಕಾರಿಗಳು ಹೊರ ಸಂಪನ್ಮೂಲ ನೌಕರರಿಗೆ ವಿನಾಕಾರಣ […]