Blog Archive

ಜೆಡಿಎಸ್ ಗೆ 113 ಸೀಟುಗಳನ್ನು ಗೆಲ್ಲಿಸುವ ಗುರಿ : ಎಚ್ಡಿಕೆ

Friday, January 5th, 2018
kumarswamy

ಬೆಳಗಾವಿ: ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ. 113 ಸೀಟುಗಳನ್ನು ಗೆಲ್ಲಿಸುವ ಗುರಿ ಇಟ್ಟು ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ಪ್ರಭಾವಿ ಹಾಗು ದೊಡ್ಡ ದೊಡ್ಡ ನಾಯಕರ ಮನೆ ಬಾಗಿಲು ಕಾಯದೇ ಕೆಳಹಂತದ ನಾಯಕರನ್ನು ಗುರುತಿಸಿ ಅವರಿಗೆ ಟಿಕೆಟ್ ಕೊಡುವ ನಿರ್ಧಾರ ಮಾಡಿದ್ದೇನೆ ಸಿಎಂ ಸಿದ್ದರಾಮಯ್ಯ ಗೆ ಮಾಜಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸಖತ್ ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯ ಪ್ರತಿಯೊಂದು ಕಾರ್ಯಕ್ರಮದಲ್ಲಿ ಅವರಪ್ಪನ ಮೇಲೆ ಆಣೆ ಅವರು ಸರ್ಕಾರ ರಚಿಸಲ್ಲ ಅಂತ ಹೇಳ್ತಾರೆ. ನಮ್ಮಪ್ಪಂದಿರೇನು ಇವರಿಗೆ […]

ಹಿರಿಯ ನಾಗರಿಕರಿಗೆ ಕುಮಾರಸ್ವಾಮಿಯಿಂದ ಉಚಿತ ಸೇವೆಗಳ ಭರವಸೆ

Thursday, January 4th, 2018
kumaraswamy

ಬೆಂಗಳೂರು:’ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆಗೆ ಅವಕಾಶ. ಬಸ್, ಮೆಟ್ರೋ ರೈಲಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಬೆಂಗಳೂರು ನಗರ ಜೆಡಿಎಸ್ ಘಟಕದ ವತಿಯಿಂದ ಬುಧವಾರ ‘ಬೆಂಗಳೂರು ನಗರದ ಹಿರಿಯ ನಾಗರಿಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯರ ವ್ಯಥೆ ಮತ್ತು ಒಂದಿಷ್ಟು ಸ್ವಾರಸ್ಯಕರ ಕಥೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ […]

‘ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ’

Friday, December 29th, 2017
congress

ಮಂಗಳೂರು: ಜನರ ದುಡ್ಡಿನಲ್ಲಿ ಪಕ್ಷದ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಆತ್ಮಹತ್ಯೆ ಭಾಗ್ಯವನ್ನು ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ, ಕೃಷಿ ಭಾಗ್ಯ, ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. […]

ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತಿದೆ: ಕುಮಾರಸ್ವಾಮಿ

Friday, December 29th, 2017
kumaraswamy

ಮಂಗಳೂರು: ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತದೆ. ವ್ಯಾಪಕ ಅಭಿವೃದ್ಧಿಗೆ ಇಲ್ಲಿ ಉತ್ತಮ ಅವಕಾಶ ಇದೆ. ಆದರೆ, ಭಯದ ವಾತಾವರಣ ನಿರ್ಮಾಣ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 9ರಂದು ಮಂಗಳೂರಿನಲ್ಲಿ ಕಡಲ ತಡಿಗೆ ಜೆಡಿಎಸ್‌ನ ಸೌಹಾರ್ದ ನಡಿಗೆ ಎನ್ನುವ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರು ಮೈದಾನದಲ್ಲಿ ಬೃಹತ್ ಐತಿಹಾಸಿಕ ಸಭೆ ನಡೆಯಲಿದೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಒಮ್ಮೆ ಸಭೆ ನಡೆದಿತ್ತು ಎಂದು ಹೇಳಿದರು. ರಾಜ್ಯದ ಕಾನೂನು ಸುವ್ಯವಸ್ಥೆ […]

ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು :ಭೋಜೇಗೌಡ

Friday, October 13th, 2017
JDS

ಮಂಗಳೂರು: ಜೆಡಿಎಸ್ ರಾಜ್ಯ ವಕ್ತಾರ ಭೋಜೇಗೌಡ ಮುಂದಿನ ಜೂನ್‌ನಲ್ಲಿ ನಡೆಯಲಿರುವ ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಗೆ ಶಿಕ್ಷಕ, ಪದವೀಧರ ಮತದಾರರ ನೋಂದಣಿಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಪ್ರತಿ ಬಾರಿ ಶಿಕ್ಷಕರ ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು. ಕಳೆದ ಅವಧಿಯಲ್ಲಿ ತಾನು ಸ್ಪರ್ಧಿಸಿದಾಗ ಒಂದೂವರೆ ಲಕ್ಷದಷ್ಟು ಶಿಕ್ಷಕ ಪದವೀಧರರ ಪೈಕಿ ಮತದಾರರಾಗಿ […]

ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಕಚ್ಚಾಟದಿಂದ ಅಭಿವೃದ್ದಿ ಕುಂಠಿತವಾಗಿದೆ : ಕುಮಾರಸ್ವಾಮಿ

Sunday, July 30th, 2017
hdk

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿನ ಅಭಿವೃದ್ದಿಗಿಂತ ಹೆಚ್ಚಾಗಿ ಧರ್ಮ ಹಾಗೂ ಭಾವನಾತ್ಮಕ ವಿಷಯಗಳಿಗೆ ಆದ್ಯತೆ ನೀಡುತ್ತಿವೆ. ಇಲ್ಲಿ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡುತ್ತಿದ್ದರೆ ಮಂಗಳೂರು ನಗರ ಬೆಂಗಳೂರು ನಗರಕ್ಕೆ ಸಮಾನವಾಗಿ ಬೆಳೆಯುತ್ತಿತ್ತು. ಆದರೆ ಇವರು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡದೆ ಜನ ಸಾಮಾನ್ಯರು ಆತಂಕದಲ್ಲಿ ಜೀವನ ನಡೆಸುವಂತೆ ಮಾಡುತ್ತಿದ್ದಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ಆಳ್ವಾಸ್ ಕಾಲೇಜಿನ […]

ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ : ಪೂಜಾರಿ ಸವಾಲು

Monday, February 27th, 2017
poojary

ಮಂಗಳೂರು:  ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ, ಮಲೆನಾಡು ಬರದಿಂದ ತತ್ತರಿಸಿ ಹೋಗಿದೆ, ಹೀಗಿರಬೇಕಾದ್ರೆ ಮುಖ್ಯಮಂತ್ರಿ ನಿದ್ದೆ ಮಾಡುತ್ತಿದ್ದಾರೆಯೇ?. ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ ಎಂದು ಜನಾರ್ದನ ಪೂಜಾರಿ ಸವಾಲು ಹಾಕಿದ್ದಾರೆ . ಕುಮಾರಸ್ವಾಮಿಯವರೇ, ನಿಮ್ಮಲ್ಲಿ ಸಿಡಿ ಇದ್ದರೆ ತೋರಿಸಿ, ಬಿಜೆಪಿಯವರು ಕಪ್ಪ ಕೊಟ್ಟಿರುವ ವಿಚಾರ ಇದ್ದರೆ ಜನರಿಗೆ ತೋರಿಸಿ, ಇಲ್ಲದೇ ಇದ್ದರೆ ಜನರನ್ನು ಮೋಸಗೊಳಿಸಿದಂತಾಗುತ್ತೆ. ತಾಕತ್ತಿದ್ದರೆ ಸಂಜೆಯೊಳಗೆ ಸಿಡಿ ಬಿಡುಗಡೆ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೂ ಇದೇ ವೇಳೆ ಜನಾರ್ದನ ಪೂಜಾರಿ ಸವಾಲು ಹಾಕಿದರು. ಸಂವಿಧಾನದಲ್ಲಿ […]

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಜೆಡಿಎಸ್‌‌ ಗೆಲುವಿಗೆ ಮೂಡುಬಿದಿರೆಯಲ್ಲಿ ವಿಜಯೋತ್ಸವ

Wednesday, February 8th, 2017
JDS

ಮಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಜೆಡಿಎಸ್‌‌ನ ರಮೇಶ್ ಬಾಬು ಗೆಲುವಿಗೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಸಂಜೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಜೆಡಿಎಸ್‌ನ ಮೂಡುಬಿದಿರೆ ವಿಧಾನಸಭಾ ಅಧ್ಯಕ್ಷ ಅಶ್ವಿನ್ ಜೆ.ಪಿರೇರಾ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ದಿವಾಕರ ಶೆಟ್ಟಿ, ಮೂಡುಬಿದಿರೆ ಯುವ ಜೆಡಿಎಸ್ ಅಧ್ಯಕ್ಷ ಕಿಶೋರ್ ಶೆಟ್ಟಿ, ಮುಖಂಡರಾದ ಹರಿ ಪ್ರಸಾದ್ ಶೆಟ್ಟಿ, ಜೆರಾಲ್ಡ್ ಮೆಂಡಿಸ್, ಲಿಯೋ ನಜರೆತ್, ಭಾಸ್ಕರ್ ಆಚಾರ್ಯ, ರೋಶನ್ ಸಂಪಿಗೆ, ರವಿ ಪೂಜಾರಿ, ಹರ್ಷವರ್ಧನ್ ಜೈನ್, ಸುದೀಪ್ ಜೈನ್, […]

ಜೆಡಿಎಸ್‌ ಆಡಳಿತ ಪಕ್ಷವಾಗಿ ಮೂಡಿಬರಲಿದೆ: ಎಚ್‌.ಡಿ. ದೇವೇಗೌಡ

Monday, October 17th, 2016
Deve-gowda

ಮಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ನಿರ್ಣಾಯಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂಬ ವಿಶ್ಲೇಷಣೆಗಳು ಸರಿಯಲ್ಲ. ಅಧಿಕಾರವನ್ನು ಪಡೆಯುವ ಮೂಲಕ ಆಡಳಿತ ಪಕ್ಷವಾಗಿ ಮೂಡಿಬರಲಿದೆ ಎಂದು ಪಕ್ಷದ ರಾಷ್ಟ್ರೀಯಾಧ್ಯಕ್ಷ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸಕ್ಕೆ ಶನಿವಾರ ಆಗಮಿಸಿದ ಸಂದರ್ಭದಲ್ಲಿ ನಗರದ ಸಕೀìಟ್‌ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅವರು, ಮುಂದಿನ ಚುನಾವಣೆಯಲ್ಲಿ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜೆಡಿಎಸ್‌ ನಿರ್ಣಾಯಕ ಶಕ್ತಿಯಾಗಲಿದೆ ಎಂಬ […]

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಿ ಮಹಮ್ಮದ್ ಕುಂಞಿ ಆಯ್ಕೆ

Monday, June 23rd, 2014
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಿ ಮಹಮ್ಮದ್ ಕುಂಞಿ ಆಯ್ಕೆ

ಮಂಗಳೂರು: ಎಂ.ಬಿ ಸದಾಶಿವ ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ನ ದ.ಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಜಿಲ್ಲಾ ಜೆಡಿಎಸ್ ನ ಕಾರ್ಯಾಧ್ಯಕ್ಷ ರಾಗಿದ್ದ ಬಿ. ಮಹಮ್ಮದ್ ಕುಂಞಿ ಇವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ ಆದೇಶದ ಮೇರೆಗೆ ಉಸ್ತುವಾರಿ ಅಧ್ಯಕ್ಷ, ಮಾಜಿ ಶಾಸಕ ಎಂ.ಎಸ್. ನಾರಾಯಣ ರಾವ್ ಲಿಖಿತ ಆದೇಶ ನೀಡಿದ್ದಾರೆ. ಬಿ. ಮಹಮ್ಮದ್ ಕುಂಞಿ ಅವರು […]